Thar Roxx: ಮಹೀಂದ್ರಾ ಕಂಪನಿ ತಾಕತ್ತು.. ಕಲ್ಲು ಬಂಡೆಯಂತಿದೆ ಥಾರ್ ರಾಕ್ಸ್, ಪ್ರಯಾಣಿಕರು ಸೇಫ್!

ಮಹೀಂದ್ರಾ (Mahindra) ಕಂಪನಿಯು ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆಗಸ್ಟ್‌ನಲ್ಲಿ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿರುವ ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರು ರೂ.12.99 ಲಕ್ಷದಿಂದ ರೂ.22.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ದೇಶಾದ್ಯಂತ ಅಕ್ಟೋಬರ್‌ನಲ್ಲಿ ಈ ಕಾರಿನ ವಿತರಣೆಯನ್ನು ಶುರು ಮಾಡಲಾಗಿತ್ತು.

ಇತ್ತೀಚೆಗೆ, ಹೈದರಾಬಾದ್‌ನಲ್ಲಿ ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ ಭೀಕರ ಅಪಘಾತಕ್ಕೆ ತುತ್ತಾಗಿದೆ. ಈ ಸಂಬಂಧ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ನೂತನ ಥಾರ್ ರಾಕ್ಸ್ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಬಹುತೇಕ ಜಖಂಗೊಂಡಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ. ಆದರೆ, ಈ ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

New Mahindra Thar Roxx Crash Passengers Safe Video

ನೂತನ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಎಸ್‌ಯುವಿ, ಸುರಕ್ಷತೆಯಿಂದಲೇ ಮನೆ ಮಾತಾಗಿದೆ. ಭಾರತ್ ಎನ್‌ಸಿಎಪಿ (Bharat NCAP) ಈ 'ಥಾರ್ ರಾಕ್ಸ್'ನ್ನು ಅತ್ಯಂತ ಸೇಫ್ಟಿ ಕಾರು ತೀರ್ಮಾನಿಸಿದೆ. ಇದು ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.09 ಅಂಕಗಳು ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ. ಇದರೊಂದಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.

ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 4 ಡಿಸ್ಕ್ ಬ್ರೇಕ್‌ಗಳು, 3-ಪಾಯಿಂಟ್ ಸೀಟ್‌ ಬೆಲ್ಟ್‌ಗಳು, ಮತ್ತು ಸೀಟ್‌ ಬೆಲ್ಟ್ ರಿಮೈಂಡರ್‌ಗಳನ್ನು ಹೊಂದಿದೆ.

New Mahindra Thar Roxx Crash Passengers Safe Video

ಹೊಸ ಥಾರ್ ರಾಕ್ಸ್ ಎಸ್‌ಯುವಿಯಲ್ಲಿ 5 ಮಂದಿ ಓಡಾಟ ನಡೆಸಬಹುದು. ಲಾಂಗ್ ರೈಡ್‌ಗೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 447 ಲೀಟರ್‌ನ ಬೂಟ್ ಸ್ಪೇಸ್‌ನ್ನು ಹೊಂದಿದೆ. ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ.

ನೂತನ ಮಹೀಂದ್ರಾ ಥಾರ್ ರಾಕ್ಸ್ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದು 2.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಹಾಗೂ 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 12.4 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ರೇರ್ ಎಸಿ ವೆಂಟ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, December 11, 2024, 9:28 [IST]
English summary
New mahindra thar roxx crash passengers safe video
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+