Thar Roxx: ಡೀಲರ್‌ಶಿಪ್‌ಗಳಿಗೆ ಬಂತು ಹೊಸ ಮಹೀಂದ್ರಾ ಥಾರ್ ರಾಕ್ಸ್.. 12.99 ಲಕ್ಷ ಬೆಲೆ, ಬುಕ್ಕಿಂಗ್ ಯಾವಾಗ?
ಮಹೀಂದ್ರಾ (Mahindra) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಹಾಗೂ ಮತ್ತು ಗೂರ್ಖಾಗೆ ಪ್ರಬಲವಾಗಿ ಸ್ಪರ್ಧೆಯೊಡ್ಡಲು ಆಗಸ್ಟ್ 14ರ ತಡರಾತ್ರಿ ಥಾರ್ ರಾಕ್ಸ್ (Thar Roxx) ಆಫ್-ರೋಡ್ ಎಸ್‌ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಸದ್ಯ, ಈ ಕಾರು ದೇಶಾದ್ಯಂತ ಕಂಪನಿಯ ವಿವಿಧ ಡೀಲರ್‌ಶಿಪ್‌ಗಳನ್ನು ತಲುಪಲು ಶುರುವಾಗಿದೆ ಎಂದು ವರದಿಯಾಗಿದೆ. ನೂತನ ಥಾರ್ ರಾಕ್ಸ್ ಕೈಗೆಟುಕುವ ಬೆಲೆಯಲ್ಲಿ ದೊರೆಯುವುದರೊಂದಿಗೆ ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಎಸ್‌ಯುವಿ ಟೆಸ್ಟ್ ಡ್ರೈವ್ ಸೆಪ್ಟೆಂಬರ್ 14ರಿಂದ ಆರಂಭವಾಲಿದ್ದು, ಅಕ್ಟೋಬರ್ 3 ರಿಂದ ಬುಕ್ಕಿಂಗ್ ಶುರುವಾಗಲಿದೆ. ಆ ಬಳಿಕ, ನವೆಂಬರ್‌ನಲ್ಲಿ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನೂತನ ಥಾರ್ ರಾಕ್ಸ್ ರೂ.12.99 ಲಕ್ಷದಿಂದ ರೂ.18.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ.

ಈ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ ನವೀನ-ಶೈಲಿಯ ವಿನ್ಯಾಸವನ್ನು (ಡಿಸೈನ್) ಪಡೆದಿದೆ. ಇದು ವಿನೂತನವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಸಿ-ಆಕಾರಕ್ಕೆ ಹೋಲುವ ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು, ಉತ್ತಮವಾಗಿರುವ ಬಂಪರ್ ಮತ್ತು ಗ್ರಿಲ್‌ನ್ನು ಪಡೆದಿದೆ. ಇದರೊಂದಿಗೆ ಡುಯಲ್ ಟೋನ್ ಅಲಾಯ್ ವೀಲ್‌ಗಳು, ಟೈಲ್‌ಗೇಟ್-ಮೌಂಟೆಡ್ ಸ್ಪೇರ್ ವೀಲ್ ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.
ಹೊಸ ಥಾರ್ ರಾಕ್ಸ್ 2 ಶಕ್ತಿಯುತ ಪವರ್‌ಟ್ರೇನ್‌ನೊಂದಿಗೂ ಲಭ್ಯವಿದೆ. ಇದರ 2.0-ಲೀಟರ್, 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ 158 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಮತ್ತು 330 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಮತ್ತೊಂದು 2-ಲೀಟರ್, 4-ಸಿಲಿಂಡರ್ ಡೀಸೆಲ್ ಎಂಜಿನ್ 148 ಬಿಹೆಚ್‌ಪಿ ಗರಿಷ್ಠ ಶಕ್ತಿ ಹಾಗೂ 330 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಮಹೀಂದ್ರಾ ಥಾರ್ ರಾಕ್ಸ್ ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಆಯ್ಕೆಯನ್ನು ಒಳಗೊಂಡಿದೆ. ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5-ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಜೊತೆಗೆ 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಆಪಲ್ ಕಾರ್ ಪ್ಲೇ, ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಥಾರ್ ರಾಕ್ಸ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 4 ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications