ಅಡ್ವಾನ್ಸ್ಡ್ ಫೀಚರ್ಸ್... ಸುರಕ್ಷತೆಯಲ್ಲಿ ಈ ಸ್ವದೇಶಿ ಕಾರೇ ಬಾಸ್... ಟಾಟಾ ವಾಹನಗಳಿಗೆ ಸೆಡ್ಡು!

ಮಹೀಂದ್ರಾ ಕಂಪನಿ ಇದೇ ವರ್ಷ ಏಪ್ರಿಲ್‌ನಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿರುವ ಹೊಸ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3X0) ಕಾರು ಉತ್ತಮ ಮಾರಾಟ ಕಾಣುತ್ತಿದೆ. ಆಕರ್ಷಕ ಸ್ಟೈಲಿಂಗ್, ಉತ್ತಮ ಫೀಚರ್ಸ್, ಅತ್ಯುತ್ತಮ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ. ಇದು ಆರಂಭಿಕ ಬೆಲೆ 7.79 ಲಕ್ಷದಿಂದ ಟಾಪ್ ವೇರಿಯೆಂಟ್ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಭಾರತದಲ್ಲಿ ಮಹೀಂದ್ರಾ ನೀಡುವ ಅತ್ಯಂತ ಸುರಕ್ಷಿತ ಎಸ್‌ಯುವಿಗಳಲ್ಲಿ ಒಂದಾಗಿದೆ. ಭಾರತ್‌ ಎನ್‌ಸಿಎಪಿನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಗಳಿಸಿದೆ.

ಕಾರುಗಳ ನಿರ್ಮಾಣ ಗುಣಮಟ್ಟವನ್ನು ನಿರ್ಧರಿಸುವ 'ಭಾರತ್ ಎನ್‌ಸಿಎಪಿ' ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿಗೆ ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ ನೀಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.36 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43 ಅಂಕಗಳನ್ನು ಈ ಕಾರು ಪಡೆದುಕೊಂಡಿದೆ.

new-mahindra-xuv-3x0-suv-safety-rating-details

ಮಹೀಂದ್ರಾ XUV 3XO ಎಸ್‍ಯುವಿಯ ಸುರಕ್ಷತಾ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿದೆ. ಹೆಚ್ಚುವರಿಯಾಗಿ, ಹೊಸ ಮಹೀಂದ್ರಾ ಸಬ್‌ಕಾಂಪ್ಯಾ ಎಸ್‍ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳು, ಹಿಲ್ ಡಿಸೆಂಟ್ ಕಂಟ್ರೋಲ್, ಬ್ರೇಕ್ ಡಿಸ್ಕ್ ವೈಪಿಂಗ್, 360-ಡಿಗ್ರಿ ಕ್ಯಾಮೆರಾ, EBD ಜೊತೆಗೆ ABS, ಹಿಲ್ ಹೋಲ್ಡ್ ಕಂಟ್ರೋಲ್ ಹೊಂದಿದೆ.

ಈ ಮಹೀಂದ್ರಾ XUV 3XO ಎಸ್‍ಯುವಿ 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಮತ್ತು 1.5 ಡೀಸೆಲ್ ಎಂಜಿನ್ ಎಂಬ ಮೂರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಎಂಜಿನ್ 129 bhp ಮತ್ತು 230 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹಾಗೆಯೇ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 bhp ಮತ್ತು 200 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.

new-mahindra-xuv-3x0-suv-safety-rating-details

ಇನ್ನು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ 115 bhp ಮತ್ತು 300 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ AMT ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿದೆ. ಈ ಎಸ್‍ಯುವಿಯು 18.89 ಕಿ.ಮೀ ಮತ್ತು 20.1 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿದೆ.

ಈ ಎಸ್‍ಯುವಿಯಲ್ಲಿ 10.25-ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಯೊಂದಿಗೆ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ನವೀಕರಿಸಿದ 7-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್, ಆಂಬಿಯೆಂಟ್ ಸೌಂಡ್ ಮೋಡ್‌ಗಳು, ಹಿಂದಿನ ಎಸಿ ವೆಂಟ್‌ಗಳು ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಇನ್ನಷ್ಟು ಫಿಚರ್ಸ್ ಹೊಂದಿದೆ.

new-mahindra-xuv-3x0-suv-safety-rating-details

ಈ ಕಾರು ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದರೂ ತನ್ನ ವರ್ಗದಲ್ಲಿ ಅತಿದೊಡ್ಡ 2600 ಎಂಎಂ ವ್ಹೀಲ್ ಬೇಸ್ ಹೊಂದಿದೆ. ಎತ್ತರ 1647 ಎಂಎಂ ಇದ್ದು, ಇದು 364 ಲೀಟರ್ ಬೂಟ್ ಸ್ಪೇಸ್ ಅನ್ನು ಸಹ ಹೊಂದಿದೆ. ಇದು ಸನ್‌ರೂಫ್ ಕೂಡ ಹೊಂದಿದ್ದು, ಒಟ್ಟಾರೆ ಭಾರತೀಯ ಮಧ್ಯಮ ವರ್ಗದ ಕುಟುಂಬಗಳಿಗೆ ಬೆಸ್ಟ್ ಆಯ್ಕೆಯಗಿದೆ ಎಂದು ಹೇಳಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 30, 2024, 15:57 [IST]
English summary
New mahindra xuv 3x0 suv safety rating details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+