ಸಾಮಾನ್ಯರ ಕಾರು.. ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ 'ಮಹೀಂದ್ರಾ' ಖ್ಯಾತಿಗಳಿಸಿದೆ. ಇತ್ತೀಚಿಗೆ ಹೊಚ್ಚ ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರನ್ನು ದೇಶೀಯ ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಎಸ್‌ಯುವಿಯು ಆಕರ್ಷಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇಲ್ಲಿ ನೂತನ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಕಾರಿನ ಪೆಟ್ರೋಲ್ ಚಾಲಿತ ಬೇಸ್ ಮಾಡೆಲ್ (ಆರಂಭಿಕ ಮಾದರಿ) ಆಗಿರುವ ಎಂಎಕ್ಸ್1 ರೂ.9.06 ಲಕ್ಷ, ಟಾಪ್ ಎಂಡ್ ಮಾಡೆಲ್ (ಗರಿಷ್ಠ ಶ್ರೇಣಿ) ಎಂದು ಹೆಸರಿಸಲಾಗಿರುವ ಎಎಕ್ಸ್7 ಎಲ್ ಟರ್ಬೊ ಎಟಿ ರೂ.19.27 ಲಕ್ಷ ಆನ್-ರೋಡ್ (On-Road) ದರವನ್ನು ಹೊಂದಿದೆ.

New Mahindra XUV 3XO Car On Road Price And EMI Details

ಅದೇ ರೀತಿಯಲ್ಲಿ ಡಿಸೇಲ್ ಚಾಲಿತ ಬೇಸ್ ಮಾಡೆಲ್ ಎಂಎಕ್ಸ್2 ರೂ.12.04 ಲಕ್ಷ ಹಾಗೂ ಟಾಪ್ ಎಂಡ್ ಮಾಡೆಲ್ ಎಎಕ್ಸ್7 ಎಲ್ ರೂ.18.65 ಲಕ್ಷ ಆನ್-ರೋಡ್ ಬೆಲೆಯನ್ನು ಪಡೆದಿದೆ. ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷದ ಅವಧಿಗೆ ಶೇಕಡ 9.8% ಬಡ್ಡಿ ದರದಲ್ಲಿ ಮಾಸಿಕ ರೂ.14,925 ಇಎಂಐ (EMI) ಕಟ್ಟಬೇಕು.

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು, ನವೀನ ಬಂಪರ್, ಹೊಸತನದಿಂದ ಕೂಡಿರುವ ಅಲಾಯ್ ವೀಲ್‌ಗಳು, ಸಿ-ಆಕಾರಕ್ಕೆ ಹೋಲುವ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಜೊತೆಗೆ ವಿವಿಧ ಬಣ್ಣಗಳೊಂದಿಗೂ ಸಿಗಲಿದ್ದು, ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

New Mahindra XUV 3XO Car On Road Price And EMI Details

ಈ ಕಾರು ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 130 ಪಿಎಸ್ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಪವರ್ ಹಾಗೂ 300 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ಮಾದರಿಗಳು 20.6 ರಿಂದ 21.2 ಕೆಎಂಪಿಎಲ್ ಮೈಲೇಜ್ ಕೊಡುತ್ತವೆ.

New Mahindra XUV 3XO Car On Road Price And EMI Details

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿಯು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್-ಜೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕನೆಕ್ಟೆಡ್ ಕಾರ್ ಟೆಕ್, ಅಲೆಕ್ಸಾ ಕನೆಕ್ಟಿವಿಟಿ, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿಯ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, May 4, 2024, 10:40 [IST]
English summary
New mahindra xuv 3xo car on road price and emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+