ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ತೀವ್ರ ಸಂಚಲನ: ಮುನ್ನೆಲೆಗೆ ಬರುತ್ತಿದೆ ಈ ಕಾರು..7 ಲಕ್ಷ ಬೆಲೆ, 21 Km ಮೈಲೇಜ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳು ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಈ ವಿಭಾಗದಲ್ಲಿ ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ ಮಾರುತಿ ಸುಜುಕಿ ಬ್ರೆಝಾ ಹಾಗೂ ಫ್ರಾಂಕ್ಸ್‌ನಂತಹ ಕಾರುಗಳು ಭಾರೀ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಈಗ ಮಹೀಂದ್ರಾ (Mahindra) ಕಂಪನಿಯು ಏಪ್ರಿಲ್ (2024)ನಲ್ಲಿ ಬಿಡುಗಡೆಗೊಳಿಸಿದ್ದ ಹೊಸ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಕಾರು ತೀವ್ರ ಸಂಚಲನವನ್ನು ಮೂಡಿಸುತ್ತಿದ್ದು, ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸಖತ್ ಟ್ರೆಂಡ್ ಆಗುತ್ತದೆ. ಮೇ 15ರಂದು ಈ ಕಾರಿನ ಬುಕ್ಕಿಂಗ್ ಶುರುವಾಗಿತ್ತು. ಕೇವಲ 1 ಗಂಟೆಯೊಳಗೆ 50,000 ಗ್ರಾಹಕರು ಕಾಯ್ದಿರಿಸಿದ್ದರು.
ಮೇ 26ರಿಂದ ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ವಿತರಣೆ ಆರಂಭಗೊಂಡಿತ್ತು. ಒಂದೇ ದಿನ ಸರಿ ಸುಮಾರು 1,500 ಯುನಿಟ್ ಕಾರುಗಳನ್ನು ಗ್ರಾಹಕರಿಗೆ ತಲುಪಿಸಲಾಗಿತ್ತು. ಈ ಎಸ್‌ಯುವಿಗಾಗಿ ಮಹೀಂದ್ರಾ ಕಂಪನಿ ಸ್ವೀಕರಿಸುವ ಒಟ್ಟು ಆರ್ಡರ್‌ನಲ್ಲಿ 70% ಪಾಲನ್ನು ಪೆಟ್ರೋಲ್ ಚಾಲಿತ ರೂಪಾಂತರ (Variant)ಗಳೇ ಪಡೆದಿವೆ. ಮೇ ತಿಂಗಳಲ್ಲಿ 10,510 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿತ್ತು.

ನೂತನ ಕಾರಾಗಿರುವ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ 'ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗ'ದ ಪ್ರಮುಖ 5 ಮಾದರಿ (Model)ಗಳಿಗೆ ಪ್ರಬಲ ಸ್ಪರ್ಧೆಯೊಡ್ಡುತ್ತಿದೆ. ಅದಕ್ಕೆ ಕಳೆದ ತಿಂಗಳ (ಜೂನ್) ಮಾರಾಟದ ಅಂಕಿಅಂಶಗಳು ಸಾಕ್ಷಿಯಾಗಿವೆ. ಮಾರುತಿ ಬ್ರೆಝಾ 13,172 ಯುನಿಟ್, ಟಾಟಾ ನೆಕ್ಸಾನ್ 12,066 ಯುನಿಟ್, ಹ್ಯುಂಡೈ ವೆನ್ಯೂ 9,890 ಯುನಿಟ್, ಕಿಯಾ ಸೋನೆಟ್ 9,816 ಯುನಿಟ್, ಮಾರುತಿ ಫ್ರಾಂಕ್ಸ್ 9,688 ಯುನಿಟ್ ಹಾಗೂ ಎಕ್ಸ್‌ಯುವಿ 3ಎಕ್ಸ್ಒ ಕಾರಿನ 8,834 ಯುನಿಟ್ ಮಾರಲಾಗಿದೆ.
ದೇಶೀಯವಾಗಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದು ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್3 ಮತ್ತು ಎಎಕ್ಸ್5 ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳೊಂದಿಗೂ ಲಭ್ಯವಿದೆ. ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿದ್ದು, ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ಮಾದರಿಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ರೂಪಾಂತರಗಳು 20.6 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತವೆ.
ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಲು 295 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

ಈ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್-ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್ ಮತ್ತು ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6-ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications