ಜನಸಾಮಾನ್ಯರ ಹೊಸ ಮಹೀಂದ್ರಾ ಎಸ್‍ಯುವಿ ಬುಕ್ಕಿಂಗ್ ಪ್ರಾರಂಭ: ಕೆಲವೇ ದಿನಗಳಲ್ಲಿ ಮನೆಗೆ ತನ್ನಿ
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ (Mahindra) ತನ್ನ XUV 3XO ಎಸ್‍ಯುವಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು. ಇದು ಮಹೀಂದ್ರಾ XUV300 ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯ ಹೆಚ್ಚು ನವೀಕರಿಸಿದ ಆವೃತ್ತಿಯಾಗಿದ್ದು, ಗಮನಾರ್ಹ ವಿನ್ಯಾಸ ಬದಲಾವಣೆಗಳು ಮತ್ತು ವೈಶಿಷ್ಟ್ಯಗಳ ನವೀಕರಣಗಳೊಂದಿಗೆ ಹೀಂದ್ರಾ XUV 3XO (Mahindra XUV 3XO) ಎಸ್‍ಯುವಿ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ.
ಮಹೀಂದ್ರಾ XUV 3XO ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 7.49 ಲಕ್ಷವಾಗಿದೆ. ಹೊಸ ಮಹೀಂದ್ರಾ XUV 3XO (Mahindra XUV 3XO) ಎಸ್‍ಯುವಿ MX, AX, AX5 ಮತ್ತು AX7 ಎಂಬ ನಾಲ್ಕು ಟ್ರಿಮ್‌ಗಳಲ್ಲಿ ಲಭ್ಯವಿದೆ. ಈ ಹೊಸ ಎಸ್‍ಯುವಿಯ ಖರೀದಿಗಾಗಿ ಇಂದಿನಿಂದ ಬುಕ್ಕಿಂಗ್ ಪ್ರಾರಂಭವಾಗಿದೆ. ಇನ್ನು ಈ ಹೊಸ ಎಸ್‍ಯುವಿಯು ವಿತರಣೆಯು ಮೇ 26 ರಂದು ಪ್ರಾರಂಭವಾಗುತ್ತದೆ.

ಹತ್ತಿರದ ಮಹೀಂದ್ರಾ-ಅಧಿಕೃತ ಡೀಲರ್‌ಶಿಪ್ ಅಥವಾ ಬ್ರ್ಯಾಂಡ್‌ನ ಆನ್‌ಲೈನ್ ಬುಕಿಂಗ್ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಈ ಹೊಸ ಮಹೀಂದ್ರಾ XUV 3XO ಎಸ್‍ಯುವಿಯನ್ನು ಬುಕ್ ಮಾಡಬಹುದು. ಮಹೀಂದ್ರಾ XUV 3XO ಎಸ್‍ಯುವಿಯು ವಿನ್ಯಾಸವು ಮಹೀಂದ್ರಾದ ಮುಂಬರುವ BE ಎಲೆಕ್ಟ್ರಿಕ್ ಎಸ್‍ಯುವಿಯಿಂದ ಹೆಚ್ಚು ಸ್ಫೂರ್ತಿ ಪಡೆದಿದೆ.
ಈ ಹೊಸ ಎಸ್‍ಯುವಿಯಲ್ಲಿ ಮುಂಭಾಗದಲ್ಲಿ, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು (DRL ಗಳು), ಹೊಸದಾಗಿ ವಿನ್ಯಾಸಗೊಳಿಸಲಾದ ಗ್ರಿಲ್, ದೊಡ್ಡ ಸೆಂಟ್ರಲ್ ಏರ್ ಟೆಕ್ ನೊಂದಿಗೆ ಪರಿಷ್ಕೃತ ಬಂಪರ್ ಮತ್ತು LED ಹೆಡ್‌ಲೈಟ್‌ಗಳನ್ನು ಹೊಂದಿವೆ. ಇನ್ನು ಈ ಹೊಸ ಮಹೀಂದ್ರಾ ಎಸ್‍ಯುವಿಯ ಸೈಡ್ ಪ್ರೊಫೈಲ್ ಬಹುಮಟ್ಟಿಗೆ ಬದಲಾಗದೆ ಉಳಿದಿದ್ದರೂ, ಡಾರ್ಕ್ ಕ್ರೋಮ್ ಫಿನಿಶ್ ಹೊಂದಿರುವ ಹೊಸ ಅಲಾಯ್ ವ್ಹೀಲ್ ಗಳು ಅದರ ಪೂರ್ವವರ್ತಿಯಿಂದ ಅದನ್ನು ಪ್ರತ್ಯೇಕಿಸುತ್ತದೆ.

ಇನ್ನು ಫುಲ್ ಅಗಲದ ಎಲ್ಇಡಿ ಲೈಟ್ ಬಾರ್, ಬಂಪರ್-ಸಂಯೋಜಿತ ನೋಂದಣಿ ಪ್ಲೇಟ್ ಮತ್ತು ಸ್ಲೀಕರ್ ಸಿ-ಆಕಾರದ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿರುವ ನವೀಕರಿಸಿದ ಟೈಲ್‌ಗೇಟ್ ವಿನ್ಯಾಸದೊಂದಿಗೆ ಹಿಂಭಾಗದ ವಿಭಾಗವನ್ನು ಸಂಪೂರ್ಣವಾಗಿ ನವೀಕರಿಸಿದೆ. ಹೊಸ ಮಹೀಂದ್ರಾ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿ 350mm ವಾಟರ್ ವೇಡಿಂಗ್ ಡೆಪ್ತ್ ಮತ್ತು 2600mm ಲಾಂಗ್ ವ್ಹೀಲ್ ಬೇಸ್ ಅನ್ನು ಹೊಂದಿದೆ. XUV 3XO 23.7 ಡಿಗ್ರಿಗಳಷ್ಟು ಉತ್ತಮ-ವರ್ಗದ ಫಾರ್ವರ್ಡ್ ಗೋಚರತೆಯನ್ನು ನೀಡುತ್ತದೆ.
ಈ ಮಹೀಂದ್ರಾ XUV 3XO ಎಸ್‍ಯುವಿ ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಯೊಂದಿಗೆ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ನವೀಕರಿಸಿದ 7-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್, 10.25-ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಆಂಬಿಯೆಂಟ್ ಸೌಂಡ್ ಮೋಡ್‌ಗಳು, ಹಿಂದಿನ ಎಸಿ ವೆಂಟ್‌ಗಳು ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಇನ್ನಷ್ಟು ಫಿಚರ್ಸ್ ಗಳನ್ನು ಹೊಂದಿವೆ.

ಮಹೀಂದ್ರಾ XUV 3XO ಎಸ್‍ಯುವಿಯ ಸುರಕ್ಷತ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿದೆ. ಹೆಚ್ಚುವರಿಯಾಗಿ, ಹೊಸ ಮಹೀಂದ್ರಾ ಸಬ್‌ಕಾಂಪ್ಯಾ ಎಸ್‍ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, EBD ಜೊತೆಗೆ ABS, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಬ್ರೇಕ್ ಡಿಸ್ಕ್ ವೈಪಿಂಗ್ ಹೊಂದಿದೆ.
ಇದರೊಂದಿಗೆ ರೋಲ್ ಓವರ್ ಮಿಟಿಗೇಶನ್, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ವೆಹಿಕಲ್ ಡೈನಾಮಿಕ್ಸ್ ಕಂಟ್ರೋಲ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಅನ್ನು ಹೊಂದಿದೆ. ಮಹೀಂದ್ರಾ XUV 3XO ಎಸ್‍ಯುವಿ 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಮತ್ತು 1.5 ಡೀಸೆಲ್ ಎಂಜಿನ್ ಎಂಬ ಮೂರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 bhp ಮತ್ತು 200 Nm ಟಾರ್ಕ್ ಉತ್ಪಾದಿಸುತ್ತದೆ.

ಇದರೊಂದಿಗೆ 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಎಂಜಿನ್ 129 bhp ಮತ್ತು 230 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ 115 bhp ಮತ್ತು 300 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ AMT ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿದೆ.ಈ ಎಸ್‍ಯುವಿಯು 18.89 ಕಿ.ಮೀ ಮತ್ತು 20.1 ಕಿ.ಮೀ ಮೈಲೇಜ್ ನೀಡುತ್ತದೆ.


Click it and Unblock the Notifications