ಫ್ಯಾಮಿಲಿ ಕಾರಾಗಿ ಜನರ ಮನಗೆಲ್ಲುತ್ತಾ ಹೊಸ ಮಹೀಂದ್ರಾ ಎಕ್ಸ್‌ಯುವಿ700 ಬ್ಲೇಜ್ ಎಡಿಷನ್?
ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV700 ಎಸ್‍ಯುವಿಯ ಹೊಸ ಸ್ಪೆಷಲ್ ಬಿಡುಗಡೆ ಮಾಡಿದ್ದು, ಇದು ಬ್ಲೇಜ್ ಎಡಿಷನ್ ಎಂದು ಕರೆಯಲಾಗುತ್ತದೆ. ಈ ಹೊಸ ಮಹೀಂದ್ರಾ XUV700 ಬ್ಲೇಜ್ ಎಡಿಷನ್ (Mahindra XUV700 Blaze Edition) ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.24.24 ಲಕ್ಷವಾಗಿದೆ.
ಹೊಸ ಮಹೀಂದ್ರಾ XUV700 ಬ್ಲೇಜ್ ಎಡಿಷನ್ ಮಾದರಿಯು ಫ್ರಂಟ್-ವೀಲ್ ಡ್ರೈವ್ ಪವರ್‌ಟ್ರೇನ್ ಮತ್ತು 7-ಸೀಟರ್ ಕಾನ್ಫಿಗರೇಶನ್‌ಗಳೊಂದಿಗೆ ಮಾತ್ರ ಲಭ್ಯವಿರುತ್ತದೆ. ಈ ಹೊಸ ಮಾದರಿಯು ಪೆಟ್ರೋಲ್ ಎಟಿ ಮತ್ತು ಡೀಸೆಲ್ ಎಟಿ ಮತ್ತು ಎಂಟಿ ಆಯ್ಕೆಗಳೊಂದಿಗೆ ಲಭ್ಯವಿರುತ್ತದೆ. 2024ರ ಮಹೀಂದ್ರಾ XUV700 ಬ್ಲೇಜ್ ಎಡಿಷನ್ ಕಾಸ್ಮೆಟಿಕ್ ಬದಲಾವಣೆಗಳೊಂದಿಗೆ ಮಾತ್ರ ಬರುತ್ತದೆ ಮತ್ತು ಯಾವುದೇ ಯಾಂತ್ರಿಕ ಬದಲಾವಣೆಗಳನ್ನು ಮಾಡಿಲ್ಲ.

ಹೊಸ ಮಹೀಂದ್ರಾ XUV700 ಬ್ಲೇಜ್ ಎಡಿಷನ್ ಮಾದರಿಯು ನಪೋಲಿ ಬ್ಲ್ಯಾಕ್ ಮುಖ್ಯಾಂಶಗಳೊಂದಿಗೆ ಹೊಸ ಮ್ಯಾಟ್ ಬ್ಲೇಜ್ ರೆಡ್ ಬಣ್ಣದಲ್ಲಿದೆ. ಈ ಎಸ್‍ಯುವಿ ಮಾದರಿಯ ರೂಫ್, ಹೊರಗಿನ ಹಿಂಬದಿಯ ಮೀರರ್, ಗ್ರಿಲ್ ಮತ್ತು ಅಲಾಯ್ ವ್ಹೀಲ್ ಗಳು ಬ್ಲ್ಯಾಕ್ ಆಗಿವೆ. ಇನ್ನು ಈ ಎಸ್‍ಯುವಿ ಒಳಾಂಗಣದಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳಿವೆ. ಕ್ಯಾಬಿನ್ ಈಗ ಬ್ಲ್ಯಾಕ್ ಬಣ್ಣದ ಫಿನಿಶಿಂಗ್ ಅನ್ನು ಹೊಂದಿದ್ದು, ಇದು ಸ್ವಲ್ಪ ಸ್ಪೋರ್ಟಿ ಲುಕ್ ಅನ್ನು ನೀಡುತ್ತದೆ.
ಇದು ಮಾತ್ರವಲ್ಲದೆ ಮಹೀಂದ್ರಾ ಎಸಿ ವೆಂಟ್‌ಗಳಲ್ಲಿ ಕೆಂಪು ಅಸ್ಸೆಂಟ್ ಅನ್ನು ಮತ್ತು ಸೆಂಟರ್ ಕನ್ಸೋಲ್ ಮತ್ತು ಅಪ್ಹೋಲ್ಸ್ಟರಿಯಲ್ಲಿ ರೆಡ್ ಹೊಲಿಗೆಯನ್ನು ನೀಡುತ್ತಿದೆ. ಇದನ್ನು ಹೊರತುಪಡಿಸಿ, XUV700 ಬ್ಲೇಜ್ ಆವೃತ್ತಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈ ಹೊಸ ಮಹೀಂದ್ರಾ XUV700 ಬ್ಲೇಜ್ ಎಡಿಷನ್ ಎರಡು ಎಂಜಿನ್ ಆಯ್ಕೆಗಳೊಂದಿಗೆ ಬರುವುದನ್ನು ಮುಂದುವರೆಸಿದೆ.

ಈ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಗ್ಯಾಸೋಲಿನ್ ಪೆಟ್ರೋಲ್ ಎಂಜಿನ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 200 bhp ಮತ್ತು 380 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 184 bhp ಮತ್ತು 450 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ ಗಳು 6-ಸ್ಪೀಡ್ ಮ್ಯಾನುವಲ್ ಯುನಿಟ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ನೊಂದಿಗೆ ನೀಡುತ್ತದೆ. ಸ್ಟ್ಯಾಂಡರ್ಡ್ ಮಹೀಂದ್ರಾ XUV700 ಎಸ್‍ಯುವಿಯ ಬೆಲೆಯು ರೂ.13.99 ಲಕ್ಷದಿಂದ ರೂ.26.99 ಲಕ್ಷದವರೆಗೆ ಇದೆ. ಎರಡೂ ಬೆಲೆಗಳು ಎಕ್ಸ್ ಶೋರೂಂ ಆಗಿದೆ. ಸ್ಟ್ಯಾಂಡರ್ಡ್ ಎಸ್‍ಯುವಿಯು FWD (ಫ್ರಂಟ್ ವೀಲ್ ಡ್ರೈವ್) ಹಾಗೂ AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

ಈ ಎಸ್‍ಯುವಿಯು 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6 - ವೇ ಪವರ್ ಡ್ರೈವರ್ ಸೀಟ್, 12 ಸ್ಪೀಕರ್, ಸನ್‌ರೂಫ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಎಸ್‌ಯುವಿಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಮಾದರಿಗಳು ಪ್ರಬಲ ಎದುರಾಳಿಯಾಗಿವೆ
ಈ ಮಹೀಂದ್ರಾ ಎಕ್ಸ್‌ಯುವಿ700 ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದ್ದು, ನಿರ್ಭಿತಿಯಿಂದ ಪ್ರಯಾಣಿಸಲು ನೆರವಾಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಿ ಶೇರ್ ಮಾಡಲು ಮರೆಯದಿರಿ.


Click it and Unblock the Notifications