33.73 Km ಮೈಲೇಜ್.. ಶೋರೂಂಗೆ ಬಂದೇ ಬಿಡ್ತು ಹೊಸ ಮಾರುತಿ ಡಿಜೈರ್ ಸಿಎನ್‌ಜಿ ಕಾರು: ಬೆಲೆ ಎಷ್ಟು?

ಮಾರುತಿ ಸುಜುಕಿ ಇಂಡಿಯಾ (Maruti Suzuki India), ನವೆಂಬರ್‌ನಲ್ಲಿ ಹೊಸ 4ನೇ ತಲೆಮಾರಿನ ಡಿಜೈರ್ (4th Generation Dzire) ಸೆಡಾನ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ರೂ.6.79 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಮೊದಲಿಗೆ ಪೆಟ್ರೋಲ್ ಚಾಲಿತ ಮಾಡೆಲ್‌ಗಳನ್ನು ಡೀಲರ್‌ಶಿಪ್‌ಗಳಿಗೆ ತಲುಪಿಸುವುದನ್ನು ಶುರು ಮಾಡಿತ್ತು. ಅಷ್ಟೇ ವೇಗವಾಗಿ ವಿತರಣೆಯನ್ನು ಆರಂಭಿಸಿತ್ತು. ಈ ಕಾರಿಗೆ ಬೇಡಿಕೆ ಎಷ್ಟಿದೆ ಅಂದರೆ, ದೇಶಾದ್ಯಂತ 30,000ಕ್ಕೂ ಹೆಚ್ಚಿನ ಬುಕ್ಕಿಂಗ್‌ಗಳನ್ನು ಪಡೆದುಕೊಂಡಿದ್ದು, ದಿನವೊಂದಕ್ಕೆ ಸರಿ ಸುಮಾರು 1,000 ಖರೀದಿದಾರರು ಡಿಜೈರ್ ಸೆಡಾನ್‌ಗಳನ್ನು ಆರ್ಡರ್ ಮಾಡುತ್ತಿದ್ದಾರೆ.

ಸದ್ಯ, ದೇಶಾದ್ಯಂತ ಹಲವು ಶೋರೂಂಗಳಿಗೆ ನೂತನ ಮಾರುತಿ ಸುಜುಕಿ ಡಿಜೈರ್ ಸಿಎನ್‌ಜಿ ಕಾರನ್ನು ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಈ ಸಿಎನ್‌ಜಿ ಚಾಲಿತ ಮಾಡೆಲ್ ರೂ.8.74 ಲಕ್ಷ ಬೆಲೆಯನ್ನು ಹೊಂದಿದೆ. ವಿಎಕ್ಸ್ಐ (VXi) ಮತ್ತು ಜಡ್ಎಕ್ಸ್ಐ (ZXi) ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

New Maruti Suzuki Dzire CNG Sedan Start Reaching Showrooms Details

ಹೊಸ ಮಾರುತಿ ಡಿಜೈರ್ ಸಿಎನ್‌ಜಿ ಸೆಡಾನ್‌ 1.2-ಲೀಟರ್ ಜಡ್ ಸೀರೀಸ್ ಎಂಜಿನ್ ಹೊಂದಿದೆ. 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 33.73 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ನೂತನ ಡಿಜೈರ್ ಕಾರಿನ ಪೆಟ್ರೋಲ್ ಚಾಲಿತ ಮಾಡೆಲ್, 1.2-ಲೀಟರ್ 3-ಸಿಲಿಂಡರ್ ಜಡ್ ಸೀರೀಸ್ ಪೆಟ್ರೋಲ್ ಎಂಜಿನ್ 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.79 ರಿಂದ 25.71 ಕೆಎಂಪಿಎಲ್‌ವರೆಗೆ ಕೊಡುತ್ತದೆ.

New Maruti Suzuki Dzire CNG Sedan Start Reaching Showrooms Details

ಈ ಪೆಟ್ರೋಲ್ ಮತ್ತು ಸಿಎನ್‌ಜಿ ಮಾಡೆಲ್‌ಗಳೆರಡು ಹೊರಭಾಗದಲ್ಲಿ ಒಂದೇ ರೀತಿಯ ವಿನ್ಯಾಸವನ್ನು ಒಳಗೊಂಡಿವೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿವೆ. ಜೊತೆಗೆ ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ಬ್ಲ್ಯೂಯಿಷ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತವೆ.

ಹೊಸ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ಮತ್ತು ಸಿಎನ್‌ಜಿ ಮಾಡೆಲ್‌ಗಳು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿವೆ. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಪೆಟ್ರೋಲ್ ಚಾಲಿತ ಮಾಡೆಲ್ 382 ಲೀಟರ್‌ ಹಾಗೂ ಸಿಎನ್‌ಜಿ ಚಾಲಿತ ಮಾಡೆಲ್ 55 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.

New Maruti Suzuki Dzire CNG Sedan Start Reaching Showrooms Details

ಇವೆರೆಡು ಮಾಡೆಲ್‌ಗಳು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿವೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, December 23, 2024, 18:03 [IST]
English summary
New maruti suzuki dzire cng sedan start reaching showrooms details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+