Maruti: ಹೊಸ ಮಾರುತಿ ಡಿಜೈರ್ CNG ವಿಶೇಷತೆಗಳು: 33.73 ಕಿ.ಮೀ ಮೈಲೇಜ್!

ಮಾರುತಿ ಸುಜುಕಿ (Maruti Suzuki)ಯ ಹೊಸ ಜೆನ್ ಮಾರುತಿ ಡೈಜೈರ್ ನವೆಂಬರ್ 11 ರಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಯಾರೂ ಊಹಿಸದ ರೀತಿಯಲ್ಲಿ ಈ ಕಾರು 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡು ಎಲ್ಲರನ್ನು ಅಚ್ಚರಿಗೊಳಿಸಿದೆ. ಮಾರುತಿ ಡಿಜೈರ್‌ನಲ್ಲಿ ಸಿಎನ್‌ಜಿ ಆಯ್ಕೆಯನ್ನು ಸಹ ನೀಡಲಾಗಿದ್ದು, ಈ ಕಾರಿಗೆ ಪೈಪೋಟಿ ನೀಡಲು ಈಗಾಗಲೇ ಮಾರುಕಟ್ಟೆಯಲ್ಲಿ ಟಾಟಾ ಟಿಗೋರ್ ಐಸಿಎನ್‌ಜಿ ಮತ್ತು ಹ್ಯುಂಡೈ ಔರಾ ಸಿಎನ್‌ಜಿ ಕಾರುಗಳು ಕಾದು ಕುಳಿತಿವೆ. ಹಾಗಾದ್ರೆ ಹೊಸ ಡಿಜೈರ್ ಸಿಎನ್‌ಜಿ ಕಾರಿನ ಬೆಲೆ, ವೈಶಿಷ್ಟ್ಯಗಳ ಕುರಿತ ವಿವರವಾದ ಮಾಹಿತಿಯನ್ನು ತಿಳಿಯೋಣ ಬನ್ನಿ.

ಹೊಸ ಡಿಜೈರ್ ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ+ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಸಿಗಲಿದ್ದು, ಇದರಲ್ಲಿ ಸಿಎನ್‌ಜಿ ಆವೃತ್ತಿಯನ್ನು ಮಿಡ್-ಸ್ಪೆಕ್ ವಿಎಕ್ಸ್‌ಐ ಮತ್ತು ಝಡ್‌ಎಕ್ಸ್‌ಐ ಟ್ರಿಮ್‌ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಹೊಸ ಡಿಜೈರ್ ಸಿಎನ್‌ಜಿ ಆವೃತ್ತಿಯ ಬೆಲೆಯು ರೂ. 9.12 (ಎಕ್ಸ್‌ ಶೋರೂಂ) ಲಕ್ಷದಿಂದ ಆರಂಭವಾಗುತ್ತದೆ.

new-maruti-suzuki-dzire-cng-top-things-you-should-know

ಬಿಡುಗಡೆ ಬಳಿಕ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಡಿಜೈರ್ ಕಾರು, ಪೆಟ್ರೋಲ್‌ ಆವೃತ್ತಿಗಳಂತೆಯೇ ಸಿಎನ್‌ಜಿ ವೇರಿಯೆಂಟ್‌ಗಳಿಗೂ ಉತ್ತಮ ಬುಕಿಂಗ್ಸ್ ಗಳಿಸುತ್ತಿದೆ. ಈ ಹೊಸ ಮಾರುತಿ ಸುಜುಕಿ ಡಿಜೈರ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಕೇವಲ 11,000 ರೂ.ಗಳ ಟೋಕನ್ ಮೊತ್ತ ಪಾವತಿಸಿ ಡೀಲರ್ ಅಥವಾ ಆನ್‌ಲೈನ್‌ನಲ್ಲಿ ಬುಕಿಂಗ್ ಮಾಡಿಕೊಳ್ಳಬಹುದು.

ಡಿಜೈರ್ ಸಿಎನ್‌ಜಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 ಬಿಹೆಚ್ ಪವರ್ ಮತ್ತು 101.8 ಎನ್ಎಂ ಟಾರ್ಕ್ ಉತ್ಪಾದಿಸಲಿದೆ. ಈ ಎಂಜಿನ್ ನೊಂದಿಗೆ 5 - ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಸಿಗಲಿದೆ. ಮಾರುತಿ ಸುಜುಕಿ ಪ್ರಕಾರ, ಹೊಸ ಡಿಜೈರ್ ಸಿಎನ್‌ಜಿ ಪ್ರತಿ ಕೆ.ಜಿಗೆ ಬರೋಬ್ಬರಿ 33.73 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

new-maruti-suzuki-dzire-cng-top-things-you-should-know

ವಿಶೇಷತೆಗಳು: ಸುರಕ್ಷತೆಗೆ ಸಂಬಂಧಿಸಿದಂತೆ ಹೊಸ ತಲೆಮಾರಿನ ಮಾರುತಿ ಡಿಜೈರ್ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ ಪಿ), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್ (ಇಬಿಡಿ), ಆರು ಏರ್‌ ಬ್ಯಾಗ್‌ಗಳು, ಹಿಲ್-ಹೋಲ್ಡ್ ಅಸಿಸ್ಟ್, ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್)ನಂತಹ ಸುರಕ್ಷತಾ ಫೀಚರ್‌ಗಳನ್ನು ಒಳಗೊಂಡಿದೆ.

ಫೀಚರ್ಸ್ ವಿಷಯಕ್ಕೆ ಬಂದರೆ ವೈರ್ ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಹೊಂದಿರುವ 7 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್, ಆಟೋ ಹೆಡ್ ಲ್ಯಾಂಪ್‌ಗಳು ಮತ್ತು ಹಿಂಭಾಗದ ಎಸಿ ವೆಂಟ್ ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಹೊಸ ಮಾರುತಿ ಸುಜುಕಿ ಡಿಜೈರ್ ಎಲೆಕ್ಟ್ರಿಕ್ ಸನ್‌ರೂಫ್ ಮತ್ತು 360 ಡಿಗ್ರಿ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಸಹ ಒಳಗೊಂಡಿದೆ.

new-maruti-suzuki-dzire-cng-top-things-you-should-know

5-ಸ್ಟಾರ್ ರೇಟಿಂಗ್: ಮಾರುತಿ ಸುಜುಕಿ ಡಿಜೈರ್ ಮಾತ್ರ ಈಗ ಎಲ್ಲರನ್ನು ಅಚ್ಚರಿಗೊಳಿಸುವ ರೀತಿಯಲ್ಲಿ ಗ್ಲೋಬಲ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 31.24 ಅಂಕಗಳನ್ನು ಗಳಿಸಿ 5-ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ಹಾಗೆಯೇ ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕಗಳನ್ನು ಪಡೆದು 4-ಸ್ಟಾರ್ ರೇಟಿಂಗ್‌ನ್ನು ದಕ್ಕಿಸಿಕೊಂಡಿದೆ. ಇದು ಮಾರುತಿ ಇತಿಹಾಸದಲ್ಲಿಯೇ ಹೊಸ ಮೈಲಿಗಲ್ಲು ಎಂದು ಹೇಳಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, November 17, 2024, 10:00 [IST]
English summary
New maruti suzuki dzire cng top things you should know
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+