ಸಾಮಾನ್ಯ ಜನರ ಅಂಬಾರಿ: ಆಕರ್ಷಕ ಬೆಲೆಯ ಹೊಸ ಮಾರುತಿ ಕಾರು ಬಿಡುಗಡೆ ದಿನಾಂಕ ಫಿಕ್ಸ್!

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki India Limited - MSIL) ತನ್ನ ಹೊಚ್ಚ ಹೊಸ ನವೀಕರಿಸಿದ ಡಿಜೈರ್ (Dzire) ಸೆಡಾನ್ ನವೆಂಬರ್ 11 ರಂದು ಬಿಡುಗಡೆ ಮಾಡಲು ಸಿದ್ಧವಾಗಿದೆ. ಇದು ಸ್ವಿಫ್ಟ್‌ನೊಂದಿಗೆ ಕೆಲವು ಅಂಶಗಳೊಂಂದಿಗೆ ಹಂಚಿಕೊಳ್ಳುತ್ತದೆ. ಈ ಸೆಡಾನ್‌ನ್ನು ಕೈಗೆಟುಕುವ ಬೆಲೆಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಜೊತೆಗೆ ಹತ್ತಾರು ಹೊಸತನಗಳಿಗೂ ಸಾಕ್ಷಿಯಾಗಿರಲಿದೆ ಎನ್ನಲಾಗಿದೆ. ಈ ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಕಾರಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸ ಒಳಗೊಂಡಿರಲಿದೆ. ಈ ಸೆಡಾನ್ ಮುಂಭಾಗ ಹೊಸದಾಗಿರುವ ಗ್ರಿಲ್, ಬಂಪರ್, ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಫಾಗ್ ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿರಲಿದೆ. ಈ ಸೆಡಾನ್ ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಲಿದ್ದು, ಹಿಂಭಾಗ (ರೇರ್) ಕೂಡ ಮರುವಿನ್ಯಾಸಗೊಳಿಸಲಾದ ಎಲ್ಇಡಿ ಟೈಲ್‌ಲೈಟ್ ಸೆಟಪ್ ಹೊಂದಿರಬಹುದು.

Maruti Suzuki Dzire

ಮಾರುತಿ ಸುಜುಕಿ ಡಿಜೈರ್ ಸೆಡಾನ್ಒಳಭಾಗವು ಅತ್ಯುತ್ತಮವಾದ ವಿನ್ಯಾಸ ಪಡೆದಿರಲಿದ್ದು, 5 ಸೀಟರ್ ವ್ಯವಸ್ಥೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಹೊಸ ಡಿಜೈರ್ ಕಾರಿನಲ್ಲಿ ಆರ್ಕ್ಟಿಕ್ ವೈಟ್, ಶೆರ್ವುಡ್ ಬ್ರೌನ್, ಫೀನಿಕ್ಸ್ ರೆಡ್, ಬ್ಲೂಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ (ಕಲರ್) ಆಯ್ಕೆಯಲ್ಲಿ ಲಭ್ಯವಿದೆ.

ಹೊಚ್ಚ ಹೊಸ ಡಿಜೈರ್ ಸೆಡಾನ್ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಒಳಗೊಂಡಿರಲಿದೆ. ಈ ಎಂಜಿನ್ 82 ಬಿಹೆಚ್‍ಪಿ ಪವರ್ ಮತ್ತು 108 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದ್ದು, ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೂ ಬರಬಹುದು. ಸರಿ ಸುಮಾರು 32 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Maruti Suzuki Dzire

ಈ ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೆಟ್ ಕಂಟ್ರೋಲ್, ಟೈಪ್ ಸಿ ಚಾರ್ಜಿಂಗ್ ಪೋರ್ಟ್, ಸನ್‌ರೂಫ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಈ ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.6.70 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಹೊಂದಿರಬಹುದು ಎನ್ನಲಾಗಿದೆ. ಡಿಜೈರ್ ಸೆಡಾನ್‌ಗೆ ಹೋಂಡಾ ಅಮೇಜ್, ಹ್ಯುಂಡೈ ಔರಾ ಹಾಗೂ ಟಾಟಾ ಟಿಗೂರ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

Maruti Suzuki Dzire

ಒಟ್ಟಾರೆಯಾಗಿ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಸಣ್ಣ ಕುಟುಂಬಗಳಿಗೆ ಉತ್ತಮವಾದ ಕಾರಾಗಲಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬರುವುದರಿಂದ ಹಲವರ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಈ ಕಾರು ಬಿಡುಗಡೆಯಾದ ಮೇಲೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, October 26, 2024, 13:18 [IST]
English summary
New maruti suzuki dzire launch date revealed details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+