ಈಗಷ್ಟೇ ಬಿಡುಗಡೆ.. 34 Km ಮೈಲೇಜ್, 6.79 ಲಕ್ಷದ ಹೊಸ ಮಾರುತಿ ಡಿಜೈರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು!

ಮಾರುತಿ ಸುಜುಕಿ ಇಂಡಿಯಾ (Maruti Suzuki India), ಸೋಮವಾರ ನಾಲ್ಕನೇ ತಲೆಮಾರಿನ ಹೊಸ ಡಿಜೈರ್ (4th Generation Dzire) ಸೆಡಾನ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ಕಾರು, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು ಹಾಗೂ ಗರಿಷ್ಠ ಮೈಲೇಜ್‌ನೊಂದಿಗೆ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಜೊತೆಗೆ ಸುರಕ್ಷತೆಗಾಗಿ 'ಗ್ಲೋಬಲ್ ಎನ್‌ಸಿಎಪಿ' ನೂತನ ಡಿಜೈರ್ ಸೆಡಾನ್‌ಗೆ 5-ಸ್ಟಾರ್ ರೇಟಿಂಗ್‌ನ್ನು ಕೊಟ್ಟಿದೆ. ಈಗಾಗಲೇ ಬುಕ್ಕಿಂಗ್ ಕೂಡ ಶುರುವಾಗಿದ್ದು, ಆಸಕ್ತರು ರೂ.11,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಡಿಜೈರ್‌ನ್ನು ಕಾಯ್ದಿರಿಸಬಹುದು. ಬನ್ನಿ.. ಈ ಕಾರಿನ ಪ್ರಮುಖಾಂಶಗಳ ಕುರಿತಂತೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants): ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಅತ್ಯಂತ ಸ್ಪರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ಇದರ ಪೆಟ್ರೋಲ್ ಚಾಲಿತ ರೂಪಾಂತರಗಳು (ವೇರಿಯೆಂಟ್) ರೂ.6.79 ಲಕ್ಷದಿಂದ ರೂ.10.14 ಲಕ್ಷ ಹಾಗೂ ಸಿಎನ್‌ಜಿ ಚಾಲಿತ ರೂಪಾಂತರಗಳು ರೂ.8.74 ರಿಂದ ರೂ.9.84 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿವೆ. ನೂತನ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳನ್ನು ಪಡೆದಿದೆ.

New Maruti Suzuki Dzire Sedan Top 5 Things Just Launched You Should Need To Know

ವಿನ್ಯಾಸ (Design): ಈ ಕಾರು ಹೊರಭಾಗದಲ್ಲಿಯೂ ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ದೊಡ್ಡದಾಗಿರುವ ಗ್ರಿಲ್, ಹೊಸದಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ. ಹಿಂಭಾಗ (ರೇರ್) 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್ 3,995 ಎಂಎಂ ಉದ್ದ, 1,735 ಎಂಎಂ ಅಗಲ ಹಾಗೂ 1,525 ಎಂಎಂ ಎತ್ತರ ಸಹ ಇದ್ದು, 2,450 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಹಳೆಯ ಡಿಜೈರ್ ಕಾರಿಗೆ ಹೋಲಿಕೆ ಮಾಡಿದರೆ, ಕೊಂಚ ಎತ್ತರವಿದೆ. ಈ ಸೆಡಾನ್‌ನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಯಬಹುದು.

New Maruti Suzuki Dzire Sedan Top 5 Things Just Launched You Should Need To Know

ಕಾರ್ಯಕ್ಷಮತೆ (Performance): ನೂತನ ಕಾರು, ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ1.2-ಲೀಟರ್ 3 ಸಿಲಿಂಡರ್ ಜಡ್ ಸೀರೀಸ್ ಪೆಟೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.79 ರಿಂದ 25.71 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಪಡೆದಿದೆ. ಆದರೆ, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 102 ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 33.73 ಕೆಎಂ/ಕೆಜಿ ವರೆಗೆ ಮೈಲೇಜ್‌ನ್ನು ಕೊಡುತ್ತದೆ.

ವೈಶಿಷ್ಟ್ಯಗಳು (Features): ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹಮುಖ್ಯವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸನ್‌ರೂಫ್, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

New Maruti Suzuki Dzire Sedan Top 5 Things Just Launched You Should Need To Know

ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಗ್ಲೋಬಲ್ ಎನ್‌ಸಿಎಪಿ ಈ ಡಿಜೈರ್ ಕಾರಿಗೆ 5-ಸ್ಟಾರ್ ರೇಟಿಂಗ್‌ನ್ನು ನೀಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.

ಇನ್ನು, ಹೊಸ ಮಾರುತಿ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಬೆಲೆಗೆ ತಕ್ಕಂತೆ ಸಾಕಷ್ಟು ಅತ್ಯಾಧುನಿಕವಾಗಿದೆ. ಅದರಲ್ಲೂ ಈ ಕಾರು ಅತ್ಯಂತ ಕಡಿಮೆ ದರಕ್ಕೆ ಬಿಡುಗಡೆಯಾಗಿರುವುದರಿಂದ ಬಹುತೇಕ ಮಧ್ಯಮ ವರ್ಗದ ಜನರು ತಮ್ಮ ಕುಟುಂಬದ ವಾಹನವಾಗಿ ಆಯ್ಕೆ ಮಾಡಿಕೊಳ್ಳಬಹುದು. ಮುಂಬರುವ ದಿನಗಳಲ್ಲಿ ನೂತನ ಸೆಡಾನ್‌ಗೆ ಯಾವ ರೀತಿಯ ಬೇಡಿಕೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Article Published On: Monday, November 11, 2024, 14:01 [IST]
English summary
New maruti suzuki dzire sedan top 5 things just launched you should need to know
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+