Maruti Dzire: ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ ಹೊಸ ಮಾರುತಿ ಸುಜುಕಿ ಡಿಜೈರ್.. ಯಾರಿಗೂ ಗೊತ್ತಿಲ್ಲ!
ಮಾರುತಿ ಸುಜುಕಿ (Maruti Suzuki), ನವೆಂಬರ್ 11 ರಂದು 4ನೇ ತಲೆಮಾರಿನ ಹೊಸ ಡಿಜೈರ್ (4th Generation Dzire) ಸೆಡಾನ್‌ನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಈ ಕಾರಿನ ಪೆಟ್ರೋಲ್ ರೂಪಾಂತರಗಳು (Petrol Variants) ರೂ.6.79 ರಿಂದ ರೂ.10.14 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದರೆ, ಸಿಎನ್‌ಜಿ ಚಾಲಿತ ರೂಪಾಂತರಗಳು (Cng Variants) ರೂ.8.74 ರಿಂದ ರೂ.9.84 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿವೆ. ನೂತನ ಡಿಜೈರ್ ಹಲವು ಪ್ರಥಮಗಳಿಗೂ ಸಾಕ್ಷಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊದಲ 5-ಸ್ಟಾರ್ ಸೇಫ್ಟಿ ಸೆಡಾನ್: ಹೊಸ ಡಿಜೈರ್ ಗ್ಲೋಬಲ್ ಎನ್‌ಸಿಎಪಿ (Global NCAP) ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದ ಮಾರುತಿ ಸುಜುಕಿ ಕಂಪನಿಯ ಮೊದಲ ಕಾರಾಗಿ ಹೊರಹೊಮ್ಮಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ ಗರಿಷ್ಠ 34ಕ್ಕೆ 31.24 ಅಂಕ ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕಗಳನ್ನು ಗಳಿಸಿದೆ.

ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಪ್ಯಾಸೆಂಜರ್ಸ್ ಸೀಟ್ ಬೆಲ್ಟ್ ರಿಮೈಂಡರ್, ರಿವರ್ಸ್ ಪಾರ್ಕಿಂಗ್ ಸೆನ್ಸರ್ ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.
360 ಡಿಗ್ರಿ-ಕ್ಯಾಮೆರಾ ಮತ್ತು ಟಿಪಿಎಂಎಸ್ ಪಡೆದ ಪ್ರಥಮ ಕಾರಿದು: ಮಾರುತಿ ಸುಜುಕಿ ಡಿಜೈರ್ ಸೆಡಾನ್‌ನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ 360 ಡಿಗ್ರಿ-ಕ್ಯಾಮೆರಾ ನೀಡಲಾಗಿದೆ. ಇದು ಚಾಲಕನಿಗೆ ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲಿದ್ದು, ಸಂಭಾವ್ಯ ಅಪಘಾತವನ್ನು ತಪ್ಪಿಸುತ್ತದೆ. ಇದರೊಟ್ಟಿಗೆ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಪಡೆದಿದ್ದು, ಟೈರ್‌ಗಳಿಗೆ ಸಂಬಂಧಿಸಿದಂತೆ ಚಾಲಕರಿಗೆ ಮಾಹಿತಿ ಒದಗಿಸುತ್ತದೆ.

ಅತಿದೊಡ್ಡ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹೊಂದುರುವ ಮೊದಲ ಸೆಡಾನ್: ಈ ಕಾರಿನ ಪ್ರಯಾಣಿಕರ ಮನರಂಜನೆಗೆ ಬೃಹತ್ ಗಾತ್ರದ 9-ಇಂಚಿನ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನ್ನು ಒಳಗೊಂಡಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6 ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, 6-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಮತ್ತು ಕಪ್ ಹೋಲ್ಡರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಎಲೆಕ್ಟ್ರಿಕ್ ಸನ್‌ರೂಫ್ ಪಡೆದ ಪ್ರಥಮ ಕಾಂಪ್ಯಾಕ್ಟ್ ಸೆಡಾನ್: ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಆಕರ್ಷಕ ಸನ್‌ರೂಫ್ ಆಯ್ಕೆಯನ್ನು ಹೊಂದಿದೆ. ಇದು ದೂರ ಪ್ರಯಾಣದ ಸಂದರ್ಭದಲ್ಲಿ ಪ್ರಯಾಣಿಕರ ಮನಸ್ಸಿಗೆ ಮುದ ನೀಡುತ್ತದೆ. ಹೊರ ಭಾಗದಿಂದ ಬೆಳಕು ಹಾಗೂ ಶುದ್ಧ ಗಾಳಿ ಬರಲು ನೆರವಾಗುತ್ತದೆ.

ನೂತನ ಡಿಸೈರ್ ಎಂಜಿನ್ & ಮೈಲೇಜ್: ಈ ಕಾರು 1.2-ಲೀಟರ್ 3-ಸಿಲಿಂಡರ್ ಝಡ್ ಸೀರೀಸ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 24.79 ರಿಂದ 25.71 ಕೆಎಂಪಿಎಲ್ ಮತ್ತು ಸಿಎನ್‌ಜಿ ರೂಪಾಂತರಗಳು 3.73 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.
ಆಸನ ಆಯ್ಕೆ & ಬಣ್ಣಗಳು: ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್‌ನ ಬೂಟ್ ಸ್ಪೇನ್‌ನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ಬ್ಲ್ಯೂಯಿಷ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications