Maruti Suzuki: ಸಿದ್ಧರಾಗಿ.. 7-ಆಸನದ ಹೊಸ ಮಾರುತಿ ಕಾರು ಬರುತ್ತೆ.. ಎರಡು ಕುಟುಂಬ ಓಡಾಡಬಹುದು!

ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿಯಾಗಿದ್ದು, ಸಣ್ಣ ಕಾರು ವಿಭಾಗದಲ್ಲಿ ಮುಂಚೂಣಿಯಲ್ಲಿದೆ. ಕಂಪನಿಯು ಪ್ರೀಮಿಯಂ ಎಸ್‌ಯುವಿ ವಿಭಾಗವನ್ನು ಪ್ರವೇಶಿಸಿ ಕೂಡ ಹಲವು ವರ್ಷಗಳಾಗಿವೆ. ಈ ವಿಭಾಗದಲ್ಲಿ ಕಂಪನಿಯ ಬ್ರೆಝಾ ಹಾಗೂ ಗ್ರ್ಯಾಂಡ್ ವಿಟಾರಾ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸದ್ಯ 'ಮಾರುತಿ ಸುಜುಕಿ' ಸದ್ದಿಲ್ಲದೇ 7-ಆಸನದ ಹೊಚ್ಚ ಹೊಸ 'ಗ್ರ್ಯಾಂಡ್ ವಿಟಾರಾ' ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಇತ್ತೀಚೆಗೆ ನೂತನ 7-ಆಸನದ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎನ್ನಲಾದ ಎಸ್‌ಯುವಿಯೊಂದು ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಅದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ಕಾರಿನ ಬಹುತೇಕ ವಿನ್ಯಾಸ (ಡಿಸೈನ್) ಸ್ವಲ್ಪ ಮಟ್ಟಿಗೆ ಈಗಿರುವ ಗ್ರ್ಯಾಂಡ್ ವಿಟಾರಾದಂತೆಯೇ ಇದೆ.

New Maruti Suzuki Grand Vitara 7-Seater Suv Spotted Soon Launch

ಆದರೂ ಮುಂಭಾಗದ ಫಾಸಿಯಾ ವಿನ್ಯಾಸ ಹೆಚ್ಚು-ಕಮ್ಮಿ ಹೊಚ್ಚ ಹೊಸ 'ಇ-ವಿಟಾರಾ' ಎಲೆಕ್ಟ್ರಿಕ್ ಕಾರಿಗೆ ಹೋಲಿಕೆಯಾಗುವುದನ್ನು ಕಾಣಬಹುದು. ಹಿಂಭಾಗವು ಅತ್ಯುತ್ತಮವಾಗಿದ್ದು, ವಿನೂತನವಾಗಿರುವ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಬಂಪರ್ ಹೊಂದಿರವುದನ್ನು ನೋಡಬಹುದು. ಕ್ಯಾಬಿನ್ ಫೋಟೋಗಳು ಸಹ ಸೋರಿಕೆಯಾಗಿದ್ದು, ದೊಡ್ಡದಾದ, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಪಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ಹೊಸ 7-ಆಸನದ ಗ್ರ್ಯಾಂಡ್ ವಿಟಾರಾ, ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿರುವ ಸಾಧ್ಯತೆಯಿದೆ. ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.5-ಲೀಟರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಒಳಗೊಂಡಿರಬಹುದು ಎನ್ನಲಾಗಿದೆ. ನೂತನ ಗ್ರ್ಯಾಂಡ್ ವಿಟಾರಾಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್ ಹಾಗೂ ಟಾಟಾ ಸಫಾರಿಗಳು ಪ್ರಬಲವಾಗಿ ಸ್ಪರ್ಧೆಯೊಡ್ಡಲಿವೆ ಎಂದು ಅಂದಾಜಿಸಲಾಗಿದೆ.

New Maruti Suzuki Grand Vitara 7-Seater Suv Spotted Soon Launch

ಪ್ರಸ್ತುತ ಖರೀದಿಗೆ ದೊರೆಯುವ ಮಾರುತಿ ಗ್ರ್ಯಾಂಡ್ ವಿಟಾರಾ (5-ಆಸನ) ಎಸ್‌ಯುವಿ ವಿಶೇಷತೆಗಳೇನು: ಈ ಕಾರು ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಡೆಲ್ಟಾ, ಜಿಟಾ, ಜಿಟಾ ಪ್ಲಸ್ & ಆಲ್ಪಾ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್ ಹಾಗೂ ಗ್ರ್ಯಾಂಡ್ಯೂರ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ಮೂರು ಪವರ್‌ಟ್ರೇನ್‌ನೊಂದಿಗೂ ಲಭ್ಯವಿದೆ. 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್), 1.5-ಲೀಟರ್ ಮೈಲ್ಡ್ ಹೈಬ್ರಿಡ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ 20.58 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಮಾರುತಿ ಗ್ರ್ಯಾಂಡ್ ವಿಟಾರಾ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇಯನ್ನು ಹೊಂದಿದೆ.

ಹೊಸ ಗ್ರ್ಯಾಂಡ್ ವಿಟಾರಾ ಕಾರು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, December 17, 2024, 14:47 [IST]
English summary
New maruti suzuki grand vitara 7 seater suv spotted soon launch
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+