Maruti Suzuki Swift: ಮಧ್ಯಮ ವರ್ಗದವರ ಬಿಎಂಡಬ್ಲ್ಯೂ.. ಹೊಸ ಸ್ವಿಫ್ಟ್‌ ಖರೀದಿಸಬೇಕೇ.. ಹೇಗಿದೆ?

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಅವರಿಗಾಗಿ ಮಾರುತಿ ಸುಜುಕಿ (Maruti Suzuki)ಯು ಬಜೆಟ್ ಬೆಲೆಯ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ನ್ನು ಗುರುವಾರ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಇಲ್ಲಿ ಈ ಕಾರಿನ 5 ಪ್ರಮುಖ ವಿಶೇಷತೆಗಳ ಕುರಿತು ವಿವರಿಸಿದ್ದೇವೆ.

ಬೆಲೆ, ರೂಪಾಂತರ ಹಾಗೂ ಬಣ್ಣಗಳು: ಈ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಕಾರು, ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದ್ದು, ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್)ಗಳನ್ನು ಕೂಡ ಹೊಂದಿದೆ. ಜೊತೆಗೆ ಸಿಜ್ಲಿಂಗ್ ರೆಡ್, ನಾವೆಲ್ ಆರೆಂಜ್, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.

New Maruti Suzuki Swift Car Top 5 Things Low Price Best Mileage

ಹೊರಭಾಗದ ವಿನ್ಯಾಸ (ಡಿಸೈನ್): ನೂತನ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ 3,860 ಎಂಎಂ ಉದ್ದ, 1,735 ಎಂಎಂ ಅಗಲ ಹಾಗೂ 1,495 ಎಂಎಂ ಎತ್ತರ ಹಾಗೂ 2,450 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, 15 - ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಸ್, ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ.

ಒಳಭಾಗದ ವಿನ್ಯಾಸ, ವೈಶಿಷ್ಟ್ಯಗಳು: ಈ ಕಾರು ಒಳಭಾಗವು ನೋಡುಗರನ್ನು ಸೆಳೆಯುವಂತಹ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. 5 ಜನರು ಪ್ರಯಾಣಿಸಲು ಆರಾಮದಾಯಕವಾದ ಆಸನಗಳನ್ನು ಒಳಗೊಂಡಿದೆ. 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

New Maruti Suzuki Swift Car Top 5 Things Low Price Best Mileage

ಎಂಜಿನ್, ಗೇರ್ ಬಾಕ್ಸ್ ಮತ್ತು ಮೈಲೇಜ್: ಹೊಸ ಮಾರುತಿ ಸುಜುಕಿ ಸ್ವಿಫ್ಟ್ 1.2 - ಲೀಟರ್ 3 - ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 80 ಪಿಎಸ್ ಗರಿಷ್ಠ ಪವರ್ (ಶಕ್ತಿ), 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ ಬಾಕ್ಸ್‌ನ್ನು ಒಳಗೊಂಡಿದ್ದು, 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ಸುರಕ್ಷತಾ ವೈಶಿಷ್ಟ್ಯಗಳು: ಈ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), 3 - ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್‌, TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.

New Maruti Suzuki Swift Car Top 5 Things Low Price Best Mileage

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ಹುಂಡೈ ಎಕ್ಸ್‌ಟರ್ ಹಾಗೂ ಟಾಟಾ ಪಂಚ್ ಕಾರುಗಳು ದೊಡ್ಡ ಪ್ರತಿಸ್ಪರ್ಧಿಗಳಾಗಿವೆ. ಮೇ.1ರಿಂದಲೇ ಈ ಕಾರಿನ ಬುಕ್ಕಿಂಗ್ ಆರಂಭವಾಗಿದ್ದು, ಆಸಕ್ತ ಖರೀದಿದಾರರು ರೂ.11 ಸಾವಿರ ಮುಂಗಡ ಹಣವನ್ನು ಪಾವತಿಸುವ ಮೂಲಕ ಆರ್ಡರ್ ಮಾಡಬಹುದು. ಮುಂದಿನ ತಿಂಗಳಿಂದ (ಜೂನ್) ವಿತರಣೆಗಳು ಶುರುವಾಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, May 10, 2024, 8:30 [IST]
English summary
New maruti suzuki swift car top 5 things low price best mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+