2 ಲಕ್ಷ ಡೌನ್-ಪೇಮೆಂಟ್.. ಹೊಸ ಮಾರುತಿ ಸ್ವಿಫ್ಟ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಸ್ವಿಫ್ಟ್ (Swift) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಈ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದರ ನಿರೀಕ್ಷಿತ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್‌ನ ವಿವಿಧ ರೂಪಾಂತರಗಳು (ವೇರಿಯೆಂಟ್) ಖರೀದಿ ಲಭ್ಯವಿವೆ. ಈ ಕಾರಿನ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.50 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.5.50 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.11,000 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.8.20 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.6.20 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, 5 ವರ್ಷದ ಅವಧಿಗೆ ಮಾಸಿಕ ರೂ.13,000 ವರೆಗೆ ಇಎಂಐ ಪಾವತಿಸಬೇಕು.
ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಜಡ್ಎಕ್ಸ್ಐ (ಪೆಟ್ರೋಲ್), ರೂಪಾಂತರ ರೂ.9.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.7.30 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಕಟ್ಟಬೇಕು.

ಈ ಕಾರಿನ ಜಡ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.10.30 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.8.30 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿಯನ್ನು ಹಾಕಿ, 5 ವರ್ಷದ ಅವಧಿಗೆ ಮಾಸಿಕ 17,000 ವರೆಗೆ ಇಎಂಐ ಪಾವತಿ ಮಾಡಬೇಕು.
ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಶಕ್ತಿಯುತವಾದ 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು.

ಹೊಸ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಸಿಜ್ಲಿಂಗ್ ರೆಡ್, ಲುಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಸೀಟ್ ಬೆಲ್ಟ್ ರಿಮೈಂಡರ್ ಮತ್ತು 3 ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಈ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂ ಭೇಟಿ ನೀಡಿರಿ.


Click it and Unblock the Notifications