ಭರ್ಜರಿ ಮೈಲೇಜ್, ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್

ಜಪಾನಿನ ವಾಹನ ತಯಾರಕ ಸಂಸ್ಥೆಯಾದ ಸುಜುಕಿ ನ್ಯೂ ಜನರೇಷನ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ತಾಯಿನಾಡು ಜಪಾನ್ ನಲ್ಲಿ ಪರಿಚಯಿಸಿದೆ. ಹೊಸ ಸುಜುಕಿ ಸ್ವಿಫ್ಟ್ (Suzuki Swift) ಕಾರುಪರಿಷ್ಕೃತ ಸ್ಟೈಲಿಂಗ್ ಮತ್ತು ಹೊಸ ಇಂಜಿನ್ ಆಯ್ಕೆಗಳೊಂದಿಗೆ ನವೀಕರಿಸಿದ ಇಂಟಿಯರ್ ಗಳೊಂದಿಗೆ ಬರುತ್ತಿದೆ. 2024ರ ಮಾರುತಿ ಸ್ವಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಗುಜರಾತ್‌ನ ಮಾರುತಿ ಸುಜುಕಿಯ ಹಂಸಲ್‌ಪುರ ಘಟಕದಲ್ಲಿ ತಯಾರಿಸಲಾಗುತ್ತದೆ. ಈ ಹೊಸ ಸ್ವಿಫ್ಟ್ ಕಾರಿನ ಉತ್ಪಾದನೆಯು ಮುಂದಿನ ತಿಂಗಳಿನಲ್ಲಿ ಪ್ರಾರಂಬವಾಗುವ ಸಾಧ್ಯತೆಗಳಿದೆ. ತಿಂಗಳಿಗೆ ಈ ಸ್ವಿಫ್ಟ್ ಮಾದರಿಯ ಸರಾಸರಿ 18,000 ಯುನಿಟ್‌ಗಳು ಮಾರಾಟವಾಗುತ್ತಿದೆ. ಇನ್ನು ಹೊಸ ಮಾದರಿಯು ಬಿಡುಗಡೆಯಾದ ಬಳಿಕ ಮಾರಾಟದಲ್ಲಿ ಹೆಚ್ಚಿನ ಬೆಳವಣಿಗೆಯನ್ನು ಕಾಣುವ ಸಾಧ್ಯತೆಗಳಿದೆ.

2024 Maruti Suzuki Swift

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವೀಫ್ ಕಳೆದ ಹಲವು ವರ್ಷದಿಂದ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಗೊಂಡಿತ್ತು. ಈ ಮಾರುತಿ ಸುಜುಕಿ ಸ್ವಿಫ್ಟ್ ದೀರ್ಘಕಾಲದಿಂದಲೇ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ.

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು. ಮಾರುತಿ ಸುಜುಕಿ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಲು ಪ್ರಯತ್ನಿಸುತ್ತಿದೆ. ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರು ಬಿಡುಗಡೆಗೊಳಿಸಲು ಸಜ್ಜಾಗಿದೆ.

2024 Maruti Suzuki Swift

ಹೊಸ ಮಾರುತಿ ಸ್ವಿಫ್ಟ್ ಕಾರಿನ ವಿನ್ಯಾಸದ ಬಗ್ಗೆ ಹೇಳಬೇಕಾದರೆ, ಮಾರುತಿ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ನವೀಕರಿಸಲಾಗಿದೆ. ಈ ಹೊಸ ಮಾರುತಿ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ಚಿಕ್ ಗ್ರಿಲ್, ಎಲ್-ಆಕಾರದ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್ (ಡಿಆರ್ಎಲ್ ಗಳು), ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್ ಗಳು, ಕ್ಲ್ಯಾಂಪ್-ಶೆಲ್ ಹುಡ್ ಮತ್ತು 16-ಇಂಚಿನ ಅಲಾಯ್ ವ್ಹೀಲ್ ಗಳೊಂದಿಗೆ ಎಲ್ಇಡಿ ಹೆಡ್ ಲೈಟ್ ಗಳನ್ನು ಹೊಂದಿವೆ.

ಸ್ವಿಫ್ ಕಾರು 13 ಬಣ್ಣಗಳ ಆಯ್ಕೆಗಳೊಂದಿಗೆ ಬರಲಿದೆ ಎಂದು ವರದಿಯಾಗಿದೆ. ಇದರ ಸಿಂಗಲ್-ಟೋನ್ ಬಣ್ಣಗಳ ಆಯ್ಕೆ ಫ್ರಾಂಟಿಯರ್ ಬ್ಲೂ, ಕೂಲ್ ಹಳದಿ, ಫ್ಲೇಮ್ ಆರೆಂಜ್, ಕಾರವಾನ್ ಐವರಿ, ಪ್ಯೂರ್ ವೈಟ್, ಪ್ರೀಮಿಯಂ ಸಿಲ್ವರ್, ಸ್ಟಾರ್ ಸಿಲ್ವರ್ ಮತ್ತು ಸೂಪರ್ ಬ್ಲ್ಯಾಕ್ ಆಗಿದೆ. ಇನ್ನು ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆ ಫ್ರಾಂಟಿಯರ್ ಬ್ಲೂ, ಬರ್ನಿಂಗ್ ರೆಡ್, ಕೂಲ್ ಯೆಲ್ಲೋ ಮತ್ತು ಪ್ಯೂರ್ ವೈಟ್ ಅನ್ನು ಒಳಗೊಂಡಿವೆ.

ಹೊಸ ಮಾರುತಿ ಸ್ವಿಫ್ಟ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ತೇಲುವ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ಕ್ಲೈಮೆಂಟ್ ಕಂಟ್ರೋಲ್, ಸ್ಟಾರ್ಟ್-ಸ್ಟಾಪ್ ಬಟನ್, 360-ಡಿಗ್ರಿ ಕ್ಯಾಮೆರಾ ಮತ್ತು ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್ (ADAS) ನಂತಹ ಅತ್ಯಾಧುನಿಕ ಫಿಚರ್ಸ್ ಗಳನ್ನು ಹೊಂದಿವೆ.

ಈ ಹೊಸ ಸ್ವಿಫ್ಟ್ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ 3-ಸಿಲಿಂಡರ್ ಎಂಜಿನ್ ಮತ್ತು 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್-ಹೈಬ್ರಿಡ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಈ ಎಂಜಿನ್‌ಗಳು 80 bhp ಪವರ್ ಮತ್ತು 108Nm ಟಾರ್ಕ್ ಅನ್ನು ಉತ್ಪಾದಿಸುತ್ತವೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು CVT ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಆಯ್ಕೆ ಮಾಡಬಹುದು

ಜಪಾನ್‌ನಲ್ಲಿ ನ್ಯೂ ಜನರೇಷನ್ ಸ್ವಿಫ್ಟ್ ಮೂರು ರೂಪಾಂತರಗಳಲ್ಲಿ ಪರಿಚಯಿಸಿತು. ಈ ಮಾರುತಿ ಸ್ವಿಫ್ಟ್ ಕಾರು XG, ಹೈಬ್ರಿಡ್ MX ಮತ್ತು ಹೈಬ್ರಿಡ್ MZ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಇನ್ನು ಈ ಕಾರಿನಲ್ಲಿ ಫ್ರಂಟ್ ಡೋರ್ ಪಾಕೆಟ್ ಮತ್ತು ಹಿಂದಿನ ಡೋರ್ ಪ್ಲಾಸ್ಟಿಕ್ ಬಾಟಲ್ ಹೋಲ್ಡರ್ ಸೇರಿದಂತೆ ಹಲವಾರು ಸ್ಟೋರೇಜ್ ಸ್ಪೇಸ್ ಅನ್ನ್ನು ಹೊಂದಿದೆ. ಈ ಹ್ಯಾಚ್‌ಬ್ಯಾಕ್ 265-ಲೀಟರ್‌ಗಳಷ್ಟು ಬೂಟ್ ಸ್ಪೇಸ್ ಅನ್ನು ಹೊಂದಿದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ 3860mm ಉದ್ದ, 1695mm ಅಗಲ ಮತ್ತು 1,500mm ಎತ್ತರ ಮತ್ತು 2,450mm ವ್ಹೀಲ್‌ಬೇಸ್ ಹೊಂದಿದೆ. ಪ್ರಸ್ತುತ ಮಾದರಿಗೆ ಹೋಲಿಸಿದರೆ, ಹೊಸ ಸ್ವಿಫ್ಟ್ 15 ಎಂಎಂ ಉದ್ದವಾಗಿದೆ, ಅಗಲ ಮತ್ತು ಎತ್ತರ ಕ್ರಮವಾಗಿ 40 ಎಂಎಂ ಮತ್ತು 30 ಎಂಎಂ ಕಡಿಮೆಯಾಗಿದೆ.

Article Published On: Tuesday, January 16, 2024, 16:17 [IST]
English summary
New maruti suzuki swift production likely to commence next month details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+