ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!

ಭಾರತದಲ್ಲಿ ಮುಂಬರುವ ತಿಂಗಳಲ್ಲಿ ವಿವಿಧ ಕಂಪನಿಗಳು ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ. ಅದರಲ್ಲೂ ಮಧ್ಯಮ ವರ್ಗದ ಜನರಿಗಾಗಿ ಪುಟ್ಟ ಹ್ಯಾಚ್‌ಬ್ಯಾಕ್‌ಗಳನ್ನು ಪರಿಚಯಿಸಲು ತಯಾರಿಯನ್ನು ನಡೆಸಲಾಗುತ್ತಿದ್ದು, ಮಾರುತಿ ಸುಜುಕಿ ಸ್ವಿಫ್ಟ್, ಟಾಟಾ ಆಲ್ಟ್ರೋಜ್ ರೇಸರ್ ಮತ್ತು ಹ್ಯುಂಡೈ ಐ20 ಎನ್ ಲೈನ್ ಫೇಸ್‌ಲಿಫ್ಟ್ ಮಾದರಿಗಳು ಲಾಂಚ್ ಆಗಲಿವೆ.

ಮೊದಲಿಗೆ ಒಂದೆರೆಡು ತಿಂಗಳಲ್ಲಿ ಬಿಡುಗಡೆಯಾಗಲಿರುವ ನವೀಕರಿಸಿದ 2024ರ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರಿನ ಬಗ್ಗೆ ಮಾತನಾಡೋಣ. ಈ ಕಾರು ಹೊರ ಹಾಗೂ ಒಳಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದಿರುವ ಸಾಧ್ಯತೆಯಿದೆ. ಹೊರಗಡೆ ನವೀನ ಬಂಪರ್ ಮತ್ತು ಅತ್ಯಾಧುನಿಕ ಅಲಾಯ್ ವೀಲ್ಸ್ ಹೊಂದಿರಬಹುದು. ಒಳಗಡೆ ಬ್ಲ್ಯಾಕ್ ಹಾಗೂ ಆಫ್-ವೈಟ್ ಥೀಮ್ ಪಡೆದಿರಲಿದ್ದು, ಡ್ಯಾಶ್‌ಬೋರ್ಡ್, ಕ್ಯಾಬಿನ್ ವಿನ್ಯಾಸ ಬಲೆನೊ ಕಾರಿಗೆ ಹೋಲಿಕೆಯಾಗಲಿದೆ ಎನ್ನಲಾಗಿದೆ.

New Maruti Suzuki Swift Tata Altroz Racer Hyundai i20 N Line Facelift Hatchback Launch Soon

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌, ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಒಳಗೊಂಡಿರಲಿದ್ದು, 80 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 108 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಬಹುದು. ಜೊತೆಗೆ 24 ಕೆಎಂಪಿಎಲ್ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಭರಪೂರ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಕೊಂಚ ಹೆಚ್ಚಿನ ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಸ್ವಿಫ್ಟ್ ಕಾರು ರೂ.5.99 ಲಕ್ಷ ಆರಂಭಿಕ ಬೆಲೆಯನ್ನು ಪಡೆದಿದೆ.

ಟಾಟಾ ಆಲ್ಟ್ರೋಜ್ ರೇಸರ್ (Tata Altroz Racer) ಕಾರು ಸಹ ಕೆಲವೇ ತಿಂಗಳಲ್ಲಿ ಬಿಡುಗಡೆ ಕಾಣಲಿದೆ. ಇತ್ತಿಚೆಗೆ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೂ ಈ ಕಾರನ್ನು ಪ್ರದರ್ಶಿಸಲಾಗಿತ್ತು. ವಿನ್ಯಾಸ ಹಾಗೂ ವೈಶಿಷ್ಟ್ಯದಲ್ಲಿ ಈ ಹ್ಯಾಚ್‌ಬ್ಯಾಕ್‌ ಬಹಳಷ್ಟು ಬದಲಾವಣೆಗಳನ್ನು ಹೊಂದಿರಲಿದೆ. ಪ್ರಮುಖವಾಗಿ ದೊಡ್ಡದಾದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 360-ಡಿಗ್ರಿ ಕ್ಯಾಮೆರಾ ಸನ್‌ರೂಫ್ ಪಡೆದಿರಲಿದೆ ಎನ್ನಲಾಗಿದೆ.

New Maruti Suzuki Swift Tata Altroz Racer Hyundai i20 N Line Facelift Hatchback Launch Soon

ಈ ಆಲ್ಟ್ರೋಜ್ ರೇಸರ್ ಹ್ಯಾಚ್‌ಬ್ಯಾಕ್‌ನ ಕಾರ್ಯಕ್ಷಮತೆಯ ವಿಚಾರಕ್ಕೆ ಬರುವುದಾದರೆ, 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿರಲಿದ್ದು, 120 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಹೊರಹಾಕಬಹುದು. ಜೊತೆಗೆ 6 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲೂ ಲಭ್ಯವಾಗಬಹುದು ಎಂದು ಹೇಳಲಾಗಿದೆ. ಪ್ರಸ್ತುತ ಆಲ್ಟ್ರೋಜ್ ಕಾರು ರೂ.6.65 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ.

ಹ್ಯುಂಡೈ ಐ20 ಎನ್ ಲೈನ್ ಫೇಸ್‌ಲಿಫ್ಟ್ (Hyundai i20 N Line Facelift) ಹ್ಯಾಚ್‌ಬ್ಯಾಕ್‌ ಕೂಡ ಮುಂಬರುವ ಕೆಲವೇ ದಿನಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಕಾರು 17-ಇಂಚಿನ ಅಲಾಯ್ ವೀಲ್ಸ್, ಮುಂಭಾಗದಲ್ಲಿ ನವೀನವಾದ ರೇಡಿಯೇಟರ್ ಗ್ರಿಲ್ ಮತ್ತು ವಿವಿಧ ಹೊಸ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ.

New Maruti Suzuki Swift Tata Altroz Racer Hyundai i20 N Line Facelift Hatchback Launch Soon

ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20 ಎನ್ ಲೈನ್ ರೂ.10 ಲಕ್ಷದಿಂದ ರೂ.12.52 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಈ ಕಾರು, 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 120 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 172 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, March 28, 2024, 15:29 [IST]
English summary
New maruti suzuki swift tata altroz racer hyundai i20 n line facelift hatchback launch soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+