ಹೊಸ ಇಂಧನದೊಂದಿಗೆ ಬರುತ್ತಿದೆ ಮಾರುತಿ ವ್ಯಾಗನ್ಆರ್: ಪ್ರಯಾಣ ದರ ಮತ್ತಷ್ಟು ಅಗ್ಗ!

ಭಾರತದಲ್ಲಿ ಏರುತ್ತಲೇ ಇರುವ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆಯನ್ನು ಕಂಡು ಗ್ರಾಹಕರು ಅಸಹಾಯಕರಾಗಿ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ. ಈ ಪರಿಸ್ಥಿತಿಯಲ್ಲಿ ಸರಕಾರ ಕೂಡ ಇಂಧನ ದರ ನಿಯಂತ್ರಣ ಕಷ್ಟ ಎಂದು ಕೈಚೆಲ್ಲಿ ಕುಳಿತಿದೆ. ಇದಕ್ಕೊಂದು ಪರ್ಯಾಯ ಪರಿಹಾರ ಇಂಧನ ಕಂಡು ಹಿಡಿಯುವ ಕೆಲಸ ಹೀಗಾಗಲೇ ನಡೆಯುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್‌ಗೆ ಪರ್ಯಾಯ ಇಂಧನ ಕಂಡು ಹಿಡಿಯುವ ಕೆಲಸ ಹೀಗಾಗಲೇ ನಡೆಯುತ್ತಿದೆ. ಪೆಟ್ರೋಲ್ ಜಾಗಕ್ಕೆ ಇಥೆನಾಲ್ ಬರಬಹುದು. ಮುಂದಿನ ಕೆಲವು ದಿನಗಳಲ್ಲಿ ಸರ್ಕಾರ ಫ್ಲೆಕ್ಸ್ ಫ್ಯೂಯೆಲ್ ಇಂಜಿನ್ (flex-fuel engines) ಅನ್ನು ಮಾರುಕಟ್ಟೆಗೆ ತರಲಿದೆ. ಇಂಥ ಪರ್ಯಾಯ ಇಂಧನ ಅಟೋಮೊಬೈಲ್ ಉದ್ಯಮಕ್ಕೆ ಅನಿವಾರ್ಯ ಎನ್ನಲಾಗಿದೆ. ಫ್ಲೆಕ್ಸ್ ಫ್ಯೂಯೆಲ್ ಅಂದರೆ, ಫ್ಲೆಕ್ಸಿಬಲ್ ಇಂಧನ (Flexible Fuel) ಎಂದರ್ಥ.

Maruti Suzuki Wagon R

ಈ ನಡುವೆ ದೆಹಲಿಯಲ್ಲಿ ನಡೆಯುತ್ತಿಯುವ ಭಾರತ್ ಮೊಬಿಲಿಟಿ ಎಕ್ಸ್‌ಪೋ (Bharat Mobility Expo 2024)ದಲ್ಲಿ ಫ್ಲೆಕ್ಸ್ ಫ್ಯುಯೆಲ್ (Flex Fuel) ಚಾಲಿತ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಕಾರನ್ನು ಪ್ರದರ್ಶಿಸಲಾಗಿದೆ. ಇದಕ್ಕೂ ಮೊದಲೇ ಈ ಹ್ಯಾಚ್‌ಬ್ಯಾಕ್‌ನ್ನು 2023 ಆಟೋ ಎಕ್ಸ್‌ಪೋದಲ್ಲಿ ತೋರಿಸಲಾಗಿತ್ತು. ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಮಾದರಿ ಮುಂದಿನ ವರ್ಷ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಫ್ಲೆಕ್ಸ್ ಫ್ಯುಯೆಲ್: ಬಹತೇಕರಿಗೆ 'ಫ್ಲೆಕ್ಸ್ ಫ್ಯುಯೆಲ್' ಬಗ್ಗೆ ಹಲವು ಗೊಂದಲವಿರುತ್ತದೆ. ಅದಕ್ಕೆ ಉತ್ತರ ನೀಡುವ ಪ್ರಯತ್ನವನ್ನು ಮಾಡಿದ್ದೇವೆ. ಫ್ಲೆಕ್ಸ್ ಫ್ಯುಯೆಲ್ ವಾಹನಗಳು ಪೆಟ್ರೋಲ್ ಹಾಗೂ ಎಥೆನಾಲ್ ಇಂಧನದ ಮಿಶ್ರಣದೊಂದಿಗೆ ಚಲಿಸುತ್ತವೆ. ಸದ್ಯ, ಪೆಟ್ರೋಲ್ ಜೊತೆಯಲ್ಲಿ ಶೇಕಡ 20% ಎಥೆನಾಲ್ ಬಳಸುವಂತೆ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಎಥೆನಾಲ್ ಅನ್ನು ಭತ್ತದ ಹುಲ್ಲು ಸೇರಿದಂತೆ ಇತರೆ ಕೃಷಿ ತ್ಯಾಜ್ಯದಿಂದ ತಯಾರಿಸಲಾಗುತ್ತದೆ.

ಪೆಟ್ರೋಲ್ ನೊಂದಿಗೆ ಎಥೆನಾಲ್ ಬೆರೆಸುವುದರಿಂದ ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆಯಾಗುತ್ತದೆ. ಜೊತೆಗೆ ಎಥೆನಾಲ್ ಅತ್ಯಂತ ಕಡಿಮೆ ಬೆಲೆಗೆ ಖರೀದಿಗೆ ದೊರೆಯುವುದರಿಂದ ಪೆಟ್ರೋಲ್ ಗಾಗಿ ಹೆಚ್ಚು ಹಣ ಖರ್ಚು ಮಾಡುವ ಅಗತ್ಯವಿಲ್ಲ. ಈಗ ನೇರವಾಗಿ ಮಾರುತಿ ಸುಜುಕಿ ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಕಾರಿನ ಬಗ್ಗೆ ಮಾತನಾಡೋಣ. ಇದು, ಈಗಿರುವ ಮಾದರಿಯಂತೆ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರಬಹುದು ಎಂದು ಹೇಳಲಾಗುತ್ತಿದೆ.

ಬೆಲೆ ಮತ್ತು ಬಣ್ಣಗಳು: ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R), ರೂ. 5.54 ಲಕ್ಷದಿಂದ ರೂ.7.38 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದಗಿಂತ ತುಸು ದುಬಾರಿಯಾಗಿರಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಒಳಗೊಂಡಂತೆ 4 ರೂಪಾಂತರ, ಗ್ಯಾಲಂಟ್ ರೆಡ್, ಪೂಲ್ಸೈಡ್ ಬ್ಲೂ, ಸುಪೀರಿಯರ್ ವೈಟ್ ಸೇರಿದಂತೆ 2 ಡುಯಲ್ ಟೋನ್, 6 ಮೊನೊಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ.

ಎಂಜಿನ್: ಈ ಮಾರುತಿ ಸುಜುಕಿ ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಕಾರು, 1.2 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 4 - ಸಿಲಿಂಡರ್ ಎಂಜಿನ್ ಹೊಂದಿರಬಹುದು. 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಬಹುದು. ಆದರೆ, ಬೆಲೆ ಕೊಂಚ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದ್ದು, ರೂ.8.50 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.

ಈ ಕಾರಿನಲ್ಲಿ 4 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುವ ವ್ಯಾಗನ್ಆರ್, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು ಪ್ರತಿ ಲೀ.ಗೆ 23.56 ರಿಂದ 24.43 ಕಿ.ಮೀ, ಸಿಎನ್‌ಜಿ ರೂಪಾಂತರಗಳು ಒಂದು ಕೆಜಿಗೆ 34 ಕಿ.ಮೀ ಮೈಲೇಜ್ ನೀಡುತ್ತದೆ.

ಫೀಚರ್ಸ್: ಮಾರುತಿ ಸುಜುಕಿ ವ್ಯಾಗನ್ಆರ್ 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಆಡಿಯೋ, ಫೋನ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, February 4, 2024, 12:30 [IST]
English summary
New maruti suzuki wagonr flex fuel top things details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+