ಟೊಯೊಟಾ ಫಾರ್ಚುನರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಸಜ್ಜಾಗುತ್ತಿದೆ ಎಂಜಿ ಗ್ಲೋಸ್ಟರ್ ಫೇಸ್‌ಲಿಫ್ಟ್

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಎಂಜಿ ತನ್ನ ಗ್ಲೋಸ್ಟರ್ ಎಸ್‍ಯುವಿಯನ್ನು ಹೊಸ ನವೀಕರಣಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಹುಬೇಡಿಕೆಯ ಟೊಯೊಟಾ ಫಾರ್ಚುನರ್ ಎಸ್‍ಯುವಿಗೆ ಪೈಪೋಟಿ ನೀಡಲು ಹಲವಾರು ಹೊಸ ಬದಲಾವಣೆಗಳು ಮತ್ತು ಹೆಚ್ಚಿನ ವೈಶಿಷ್ಟ್ಯಗಳೊಂದಿಗೆ ಎಂಜಿ ಗ್ಲೋಸ್ಟರ್ (MG Gloster) ಎಸ್‍ಯುವಿಯ ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಅಭಿವೃದ್ಧಿಪಡಿಸುತ್ತಿದೆ.

ಹೊಸ ಎಂಜಿ ಗ್ಲೋಸ್ಟರ್ ಎಸ್‍ಯುವಿಯ ಮುಂಬರುವ ಫೇಸ್‌ಲಿಫ್ಟೆಡ್ ಆವೃತ್ತಿಯು ಹೊರಹೋಗುವ ಮಾದರಿಯಂತೆಯೇ ಕಾಣುತ್ತಿದೆ. ಆದರೆ ಫೇಸ್‌ಲಿಫ್ಟೆಡ್ ಆವೃತ್ತಿಯು ಕೆಲವು ಬಾಹ್ಯ ನವೀಕರಣಗಳನ್ನು ಸಹ ನಾವು ನಿರೀಕ್ಷಿಸುತ್ತೇವೆ. ಬದಲಾವಣೆಗಳ ಪೈಕಿ, ಎಂಜಿ ಗ್ಲೋಸ್ಟರ್ ಎಸ್‍ಯುವಿಯ ಮುಂಬರುವ ಫೇಸ್‌ಲಿಫ್ಟೆಡ್ ಆವೃತ್ತಿಯು ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಮುಂಭಾಗದ ಬಂಪರ್, ಹಿಂಭಾಗದ ಟೈಲ್‌ಗೇಟ್ ಮತ್ತು ಹಿಂಭಾಗದ ಬಂಪರ್‌ನೊಂದಿಗೆ ಬರಬಹುದು.

new-mg-gloster-facelift-suv-spotted-testing-details

ಈ ಬದಲಾವಣೆಗಳ ಜೊತೆಗೆ, ಗ್ಲೋಸ್ಟರ್ ಫೇಸ್‌ಲಿಫ್ಟ್ ಒಳಭಾಗದಲ್ಲಿ ಕೆಲವು ನವೀಕರಣಗಳನ್ನು ಸಹ ಹೊಂದಿದೆ ಎಂದು ನಾವು ನಿರೀಕ್ಷಿಸುತ್ತೇವೆ. ಇನ್ನು ಒಳಭಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವು ಹೆಚ್ಚುವರಿ ವೈಶಿಷ್ಟ್ಯಗಳು ಮತ್ತು ಚಾಲಕ ಸುರಕ್ಷತೆ ನವೀಕರಣಗಳನ್ನು ಒಳಗೊಂಡಿರಬಹುದು. ಈ ನವೀಕರಣಗಳಲ್ಲಿ ಪ್ರಾಥಮಿಕ ಹಂತ 2 ADAS ತಂತ್ರಜ್ಞಾನವನ್ನು ಸೇರಿಸುವ ಸಾಧ್ಯತೆಯಿದೆ.

ಹೊಸ ಎಂಜಿ ಗ್ಲೋಸ್ಟರ್ ಎಸ್‍ಯುವಿಯ ಲೆವೆಲ್ 2 ADAS ತಂತ್ರಜ್ಞಾನವನ್ನು ಸೇರಿಸುವುದರೊಂದಿಗೆ, ಮುಂಬರುವ ಗ್ಲೋಸ್ಟರ್ ಫೇಸ್‌ಲಿಫ್ಟ್ ಎಸ್‍ಯುವಿಯ ಸೆಮಿ-ಆಟೋಮ್ಯಾಟಿಕ್ ಚಾಲನಾ ಸಾಮರ್ಥ್ಯದೊಂದಿಗೆ ಬರಲಿದೆ. ದೂರದ ಪ್ರಯಾಣದ ಚಾಲಕ ಆಯಾಸವನ್ನು ಎದುರಿಸಲು ಇದು ಅತ್ಯಂತ ಉಪಯುಕ್ತವಾಗಿದೆ. ಪ್ರಸ್ತುತ ಮಾದರಿಯು 4,985-ಎಂ ಉದ್ದ, 1,926-ಎಂಎಂ ಅಗಲ, 1,867-ಎಂಎಂ ಎತ್ತರ ಹಾಗೂ 2,950-ಎಂಎಂ ವ್ಹೀಲ್ ಬೇಸ್ ಹೊಂದಿದೆ.

new-mg-gloster-facelift-suv-spotted-testing-details

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಈ ಎಂಜಿ ಗ್ಲೊಸ್ಟರ್ ಎಸ್‌ಯುವಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದ್ದು, ಸೂಪರ್ ಹಾಗೂ ಸ್ಮಾರ್ಟ್ ಮಾದರಿಗಳು ಒಂದೇ ಟರ್ಬೋ ಚಾರ್ಜರ್ ಅನ್ನು ಹೊಂದಿದ್ದರೆ ಟಾಪ್-ಎಂಡ್ ಮಾದರಿಗಳಾದ ಶಾರ್ಪ್ ಹಾಗೂ ಸ್ಯಾವಿಯಲ್ಲಿ ಟ್ವಿನ್-ಟರ್ಬೊ ಸೆಟಪ್ ಅನ್ನು ಅಳವಡಿಸಲಾಗಿದೆ.

ಬೇಸ್ ಮಾದರಿಗಳಲ್ಲಿರುವ 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 160 ಬಿಹೆಚ್‌ಪಿ ಪವರ್ ಮತ್ತು 375-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ, ಟಾಪ್-ಎಂಡ್ ಮಾದರಿಯಲ್ಲಿರುವ 2.0-ಲೀಟರ್ ಟ್ವಿನ್-ಟರ್ಬೊ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 216 ಬಿಹೆಚ್‌ಪಿ ಪವರ್ ಮತ್ತು 480 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

new-mg-gloster-facelift-suv-spotted-testing-details

ಮಾರುಕಟ್ಟೆಯಲ್ಲಿರುವ ಗ್ಲೋಸ್ಟರ್ ಎಸ್‍ಯುವಿಯಲ್ಲಿ ಎಲ್‌ಇಡಿ ಲೈಟಿಂಗ್, ಆಟೋ ಲೆವೆಲಿಂಗ್‌ನೊಂದಿಗೆ ಹೆಡ್‌ಲ್ಯಾಂಪ್‌ಗಳು, ಎಂಜಿ ಲೋಗೋ ಹೊಂದಿರುವ ಒಆರ್‌ವಿಎಂ, ಪನೊರಮಿಕ್ ಸನ್‌ರೂಫ್, 19 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್, ಫ್ರಂಟ್-ರಿಯರ್ ಫಾಗ್ ಲ್ಯಾಂಪ್‌, ಸ್ಟೀರಿಂಗ್-ಅಸಿಸ್ಟ್ ಕಾರ್ನರಿಂಗ್ ಲ್ಯಾಂಪ್‌, ಡ್ಯುಯಲ್-ಬ್ಯಾರೆಲ್ ಟ್ವಿನ್ ಕ್ರೋಮ್ ಎಕ್ಸಾಸ್ಟ್ ಗಳಿವೆ. ಒಳಭಾಗದಲ್ಲಿ ಲೆದರ್ ಸೀಟ್, ಎರಡನೇ ಸಾಲಿನಲ್ಲಿ ಪರ್ಸನಲ್ ಕ್ಯಾಪ್ಟನ್ ಸೀಟ್. ಆ್ಯಪಲ್ ಕಾರ್ ಪ್ಲೇ ಹೊಂದಿರುವ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ ಹೊಂದಿದೆ.

ಇದರೊಂದಿಗೆ ಐ-ಸ್ಮಾರ್ಟ್ ಕನೆಕ್ಟೆಡ್ ಟೆಕ್ನಾಲಜಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, 8 ಇಂಚಿನ ಎಂಐಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್. ಪ್ಯಾಡಲ್ ಶಿಫ್ಟರ್, ತ್ರೀ ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ರನ್ನಿಂಗ್ ಟೇಲ್‌ಗೇಟ್, ಹಿಟ್/ಕೂಲ್ ಮಾಡಬಹುದಾದ ಮುಂಭಾಗದ ಆಸನಗಳು, ವೈರ್‌ಲೆಸ್ ಚಾರ್ಜಿಂಗ್, ಮಲ್ಟಿ-ವೇ ಎಲೆಕ್ಟ್ರಾನಿಕ್ ಅಡ್ಜೆಸ್ಟ್ ಫ್ರಂಟ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, May 7, 2024, 15:13 [IST]
English summary
New mg gloster facelift suv spotted testing details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+