ನೆಕ್ಸಾನ್, ಬ್ರೆಝಾ, ಪ್ರತಿಸ್ಪರ್ಧಿ.. ಹೊಸ ಸ್ಕೋಡಾ ಕೈಲಾಕ್ ಕಾರು ಮಾಘ ಮಾಸದಲ್ಲಿ ಶೋರೂಂಗೆ.. ಬೆಲೆ ಇಷ್ಟೇನಾ?

ಜರ್ಮನಿ ಮೂಲದ ಸ್ಕೋಡಾ (Skoda) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕುಶಾಕ್, ಸ್ಲಾವಿಯಾ ಸೇರಿದಂತೆ ಹಲವು ಕಾರುಗಳನ್ನು ಮಾರಾಟಗೊಳುಸುತ್ತಿದೆ. ಬುಧವಾರ ಮುಂಬರಲಿರುವ ಹೊಚ್ಚ ಹೊಸ ಸಬ್‌ ಕಾಂಪ್ಯಾಕ್ಟ್ ಎಸ್‌ಯುವಿಗೆ ಹೆಸರನ್ನು ಘೋಷಣೆ ಮಾಡಿದ್ದು, ಕೈಲಾಕ್ (Kylaq) ಎಂದು ನಾಮಕರಣ ಮಾಡಿದೆ. ಈ ಹೆಸರನ್ನು ಸ್ಫಟಿಕ (Crystal) ಎಂಬ ಸಂಸ್ಕೃತ ಪದದಿಂದ ತೆಗೆದುಕೊಳ್ಳಲಾಗಿದೆ. ಸದ್ಯ ಈ ಕಾರಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ನೂತನ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ 2025ರ ಫೆಬ್ರವರಿಯಲ್ಲಿ ಶೋರೂಂ ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಹುಶಃ ಈ ಕಾರಿನ ಎಲ್ಲ ವಿವರಗಳು ವರ್ಷಾಂತ್ಯದೊಳಗೆ ಬಹಿರಂಗಗೊಳ್ಳುವ ಸಾಧ್ಯತೆಯಿದ್ದು, ಆಗಲೇ ಉತ್ಪಾದನೆಯು ಶುರುವಾಗಬಹುದು ಎನ್ನಲಾಗಿದೆ. ಜನವರಿ 2025ರ ಎರಡನೇ ವಾರದಲ್ಲಿ ಆಯೋಜಿಸಿರುವ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಅಧಿಕೃತ ಬೆಲೆಯನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ.

New Skoda Kylaq Car Arrived Showrooms In February 2025 Affordable Price Details

ಈ ಸ್ಕೋಡಾ ಕೈಲಾಕ್ ಎಸ್‌ಯುವಿ ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳಲಾದ ಟೀಸರ್ ಫೋಟೋಗಳು ಈ ಕಾರಿನ ವಿನ್ಯಾಸ ಹೇಗಿರಲಿದೆ ಎಂಬುದನ್ನು ಖಚಿತಪಡಿಸಿವೆ. ನೂತನ ಕಾರು ಸ್ಪ್ಲಿಟ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಟೈಲ್‌ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿರಲಿದೆ ಎಂಬ ಅಂಶಗಳನ್ನು ಆ ಫೋಟೋಗಳು ದೃಢಪಡಿಸಿವೆ.

ಸ್ಕೋಡಾ ಕೈಲಾಕ್ ಕಾರು 1-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ನಿರೀಕ್ಷೆಯಿದ್ದು, 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 178 ಎನ್ಎಂ ಪೀಕ್ ಟಾರ್ಕ್ ಹೊರಹಾಕಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದ್ದು, ಇದರಲ್ಲಿ 5 ಮಂದಿ ಪ್ರಯಾಣಿಸಬಹುದು.

ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್‌ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ.

ಸ್ಕೋಡಾ ಕೈಲಾಕ್ (Skoda Kylaq) ಕಾರು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದೆ ಎನ್ನಲಾಗಿದೆ. ಅದಕ್ಕಾಗಿ 6-ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಈ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದ್ದು, ರೂ. 8.5 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ನೂತನ ಸ್ಕೋಡಾ ಕೈಲಾಕ್ ಕಾರಿಗೆ ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್‌ಒ, ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕಿಗರ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್‌ಗಳು ಪ್ರಬಲವಾದ ಎದುರಾಳಿಯಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, August 23, 2024, 16:17 [IST]
English summary
New skoda kylaq car arrived showrooms in february 2025 affordable price details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+