ನೆಕ್ಸಾನ್, ಬ್ರೆಝಾ, ಕ್ರೆಟಾ, ಎಲಿವೇಟ್‌ಗೆ ಸವಾಲು ಹಾಕಲಿದೆ ಈ ಹೊಸ ಕಾರು.. 7.99 ಲಕ್ಷ, 5 ಸೀಟರ್.. 20 Km ಮೈಲೇಜ್!
ಫ್ರೆಂಚ್ ಮೂಲದ ಸಿಟ್ರನ್ (Citroen) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸಿ3, ಇಸಿ3, ಸಿ3 ಏರ್‌ಕ್ರಾಸ್ ಮತ್ತು ಸಿ5 ಏರ್‌ಕ್ರಾಸ್ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಆದಾಗ್ಯೂ ಮಾರಾಟ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಂಡಿಲ್ಲ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರ್ ಸಂಸ್ಥೆಯ ಪ್ರಕಾರ, ಕಂಪನಿಯು 2023ರ ಹಣಕಾಸು ವರ್ಷದಲ್ಲಿ 9,062 ಯುನಿಟ್, 2024ರ ಹಣಕಾಸು ವರ್ಷದಲ್ಲಿ 8,367 ಯುನಿಟ್ ಹಾಗೂ 2025ರ ಹಣಕಾಸು ವರ್ಷದ ಏಪ್ರಿಲ್-ಜುಲೈ ಅವಧಿಯಲ್ಲಿ 1,593 ಯುನಿಟ್ ಕಾರುಗಳನ್ನು ಮಾತ್ರ ಮಾರಾಟ ಮಾಡಿದೆ.
ಇತ್ತೀಚೆಗೆ ಸಿಟ್ರನ್ ಕಂಪನಿ ಹೊಚ್ಚ ಹೊಸ ಬಸಾಲ್ಟ್ (Basalt) ಕೂಪೆ ಎಸ್‌ಯುವಿಯನ್ನು ಬಿಡುಗಡೆ ಮಾಡಿದ್ದು, ನೂತನ ಕಾರಿನಿಂದ ಮಾರಾಟ ಪ್ರಮಾಣ ಒಂದಷ್ಟು ಮಟ್ಟಿಗೆ ಸುಧಾರಿಸುವ ನಿರೀಕ್ಷೆಯಿದೆ. ಈ ಸಿಟ್ರನ್ ಬಸಾಲ್ಟ್ ಎಸ್‌ಯುವಿ ರೂ.7.99 ಲಕ್ಷದಿಂದ ರೂ.13.62 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಇದು ಮಿಡ್-ಸೈಜ್ ಎಸ್‌ಯುವಿಯಾಗಿದ್ದರೂ, ಬೆಲೆ ವಿಚಾರದಲ್ಲಿ ಸಬ್-4 ಮೀಟರ್ ಕಾಂಪ್ಯಾಕ್ಟ್ ಎಸ್‌ಯುವಿಗಳಿಗಿಂತಲೂ ಅಗ್ಗವಾಗಿದೆ.

ಸದ್ಯ ದೇಶೀಯವಾಗಿ ಲಭ್ಯವಿರುವ ಜನಪ್ರಿಯ ಸಬ್-4 ಮೀಟರ್ ಕಾಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಟಾಟಾ ನೆಕ್ಸಾನ್ (Tata Nexon), ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಹಾಗೂ ಕಿಯಾ ಸೊನೆಟ್ (Kia Sonet) ಬಹುಮುಖ್ಯವಾಗಿವೆ. ನೆಕ್ಸಾನ್ ರೂ.8 ಲಕ್ಷದಿಂದ ರೂ.15.10 ಲಕ್ಷ, ಬ್ರೆಝಾ ರೂ.8.34 ಲಕ್ಷದಿಂದ ರೂ.14.14 ಲಕ್ಷ ಮತ್ತು ಸೊನೆಟ್ ರೂ.7.99 ಲಕ್ಷದಿಂದ ರೂ.15.77 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.
ಈ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ 4,352 ಎಂಎಂ ಉದ್ದ, 1,765 ಎಂಎಂ ಅಗಲ ಮತ್ತು 1593 ಎಂಎಂ ಎತ್ತರವಿದೆ. ಜೊತೆಗೆ 2,651 ಎಂಎಂ ವೀಲ್‌ಬೇಸ್ ಹೊಂದಿದೆ. ಗಾತ್ರಕ್ಕೆ ಸಂಬಂಧಿಸಿದಂತೆ ಬಸಾಲ್ಟ್‌ಗೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರ್ಡರ್, ಹೋಂಡಾ ಎಲಿವೇಟ್, ಎಂಜಿ ಆಸ್ಟರ್ ಮತ್ತು ಮುಂಬರಲಿರುವ ಟಾಟಾ ಕರ್ವ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಗಳಾಗಿವೆ.

ಹೊಸ ಸಿಟ್ರನ್ ಬಸಾಲ್ಟ್ ಕಾರು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರು ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೊ ಬ್ಲೂ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಇದರಲ್ಲಿ 5 ಸುಲಭವಾಗಿ ಓಡಾಡಬಹುದು. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








