ಭಾರತದಲ್ಲಿ ಸೋತು ಸುಣ್ಣವಾದ ಕಾರಿಗೆ ವಿದೇಶದಲ್ಲಿ ಬೇಡಿಕೆ.. ದುಪ್ಪಟ್ಟು ಮೊತ್ತಕ್ಕೆ ಹೊಸ ಮಾದರಿ ಪರಿಚಯ!
'ಮಾರುತಿ ಸುಜುಕಿ' ಮಾತೃ ಸಂಸ್ಥೆ ಸುಜುಕಿ (Suzuki), ಥೈಲ್ಯಾಂಡ್ ಇಂಟರ್‌ನ್ಯಾಷನಲ್ ಮೋಟಾರ್ ಶೋನಲ್ಲಿ ಜಿಮ್ನಿಯ ಹೊಚ್ಚ ಹೊಸ 'ಆಫ್‌ರೋಡ್ ಎಡಿಷನ್'ನ್ನು ಅನಾವರಣಗೊಳಿಸಿದೆ. ಈ ಹಿಂದೆ, ಕಂಪನಿಯು ಜಾಗತಿಕ ಮಾರುಕಟ್ಟೆಯಲ್ಲಿ ಹೆರಿಟೇಜ್ ಎಡಿಷನ್ ಮತ್ತು ರೈನೋ ಎಡಿಷನ್ ಅನ್ನು ಪರಿಚಯಿಸಿತ್ತು. ನೂತನ ಜಿಮ್ನಿ ಆಫ್‌ರೋಡ್ ಎಡಿಷನ್ ಎಸ್‌ಯುವಿಯ ಮೊನೊಟೋನ್ ಬಣ್ಣಗಳ ಮಾದರಿಗಳು (ಮಾಡೆಲ್) ಟಿಹೆಚ್‌ಬಿ 1.76 ಮಿಲಿಯನ್ (ರೂ.43.28 ಲಕ್ಷ) ಹಾಗೂ ಡುಯಲ್-ಟೋನ್ ಬಣ್ಣಗಳ ಮಾದರಿಗಳು ಟಿಹೆಚ್‌ಬಿ 1.79 ಮಿಲಿಯನ್ (ರೂ.44.18 ಲಕ್ಷ) ದರವನ್ನು ಹೊಂದಿವೆ.
ಹೊಚ್ಚ ಹೊಸ ಸುಜುಕಿ ಜಿಮ್ನಿ ಆಫ್‌ರೋಡ್ ಎಡಿಷನ್ (Suzuki Jimny Offroad Edition) ಎಸ್‌ಯುವಿಯ ಹೊರಭಾಗದ ವಿನ್ಯಾಸದಲ್ಲಿ ಒಂದಷ್ಟು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಅದು ಬಿಟ್ಟರೆ, ಬೇರೆ ಯಾವುದೇ ವಿಶೇಷ ಮಾರ್ಪಾಡುಗಳಿಗೆ ಒಳಪಡಿಸಲಾಗಿಲ್ಲ. ಥೈಲ್ಯಾಂಡ್‍ನಲ್ಲಿ ಪರಿಚಯಿಸಲಾಗಿರುವ ಜಿಮ್ನಿಯ 'ಆಫ್‌ರೋಡ್ ಎಡಿಷನ್' ಕೂಡ ಭಾರತದಲ್ಲಿ ಮಾರಾಟವಾಗುವ ಜಿಮ್ನಿಯಂತೆಯೇ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ.

ಈ ಜಿಮ್ನಿ ಆಫ್‌ರೋಡ್ ಎಡಿಷನ್ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 101 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 130 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಸದ್ಯ ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಸ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆದರೆ, ನಾನಾ ಕಾರಣಗಳಿಗೆ ಈ ಕಾರಿನ ಮಾರಾಟ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ.

ನೂತನ ಜಿಮ್ನಿ ಕಾರಿನಲ್ಲಿ 4 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ನೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 211 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ ಮಾರುತಿ ಸುಜುಕಿ ಜಿಮ್ನಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಸ್ಮಾರ್ಟ್‌ಪ್ಲೇ ಪ್ರೊ ಪ್ಲಸ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಬ್ರೇಕ್ ಲಿಮಿಟೆಡ್ ಸ್ಲಿಪ್ ಡಿಫರೆನ್ಷಿಯಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ.
ಇನ್ನು, ಮಾರುತಿ ಜಿಮ್ನಿಗೆ ಮಹೀಂದ್ರಾ ಥಾರ್ ಮತ್ತು ಫೋರ್ಸ್ ಗೂರ್ಖಾಗಳು ಪ್ರಬಲವಾದ ಪ್ರತಿಸ್ಫರ್ಧಿಯಾಗಲಿವೆ. ಥೈಲ್ಯಾಂಡ್ ಇಂಟರ್‌ನ್ಯಾಷನಲ್ ಮೋಟಾರ್ ಶೋನಲ್ಲಿ ಪ್ರದರ್ಶಿಸಲಾಗಿರುವ ಹೊಸ 'ಜಿಮ್ನಿ ಆಫ್‌ರೋಡ್ ಎಡಿಷನ್' ದೇಶೀಯ ಮಾರುಕಟ್ಟೆಯಲ್ಲಿಯೂ ಮಾರಾಟಕ್ಕೆ ಬರಲಿದೆ ಎನ್ನಲಾಗಿದೆ. ಆದರೆ, ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications