TATA: ಬಹುನಿರೀಕ್ಷಿತ ಇಂಧನ ಚಾಲಿತ ಟಾಟಾ ಕರ್ವ್ ಕಾರಿನ ವಿಶೇಷತೆಗಳೇನು.. ಬೆಲೆ ಎಷ್ಟು?

ಟಾಟಾ ಮೋಟಾರ್ಸ್ (Tata Motors) ಹೊಚ್ಚ ಹೊಸ ಕರ್ವ್ (Curvv) ಕೂಪೆ ಎಸ್‌ಯುವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸಲು ಸಿದ್ಧವಾಗಿದೆ. ಈ ಕಾರನ್ನು ಮೊದಲಿಗೆ ಆಗಸ್ಟ್ 7ರಂದು ಎಲೆಕ್ಟ್ರಿಕ್ (ವಿದ್ಯುತ್ ಚಾಲಿತ) ರೂಪದಲ್ಲಿ ಪರಿಚಯಿಸಲಾಗುತ್ತದೆ. ಆ ನಂತರ, ಇಂಧನ ಚಾಲಿತ ಆಯ್ಕೆಯಲ್ಲಿ ಮಾರಾಟಕ್ಕೆ ತರಲಾಗುತ್ತದೆ. ಇದೀಗ, ನೂತನ ಇಂಧನ ಚಾಲಿತ (ಇಂಟರ್ನಲ್ ಕಂಬಷನ್ ಎಂಜಿನ್ - ಐಸಿಇ) ಕರ್ವ್ ಕಾರಿನ ಪವರ್‌ಟ್ರೇನ್‌ ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ. ಬನ್ನಿ.. ಆ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ನೂತನ ಟಾಟಾ ಕರ್ವ್ ಮಿಡ್-ಸೈಜ್ ಕೂಪೆ ಎಸ್‌ಯುವಿ 3 ವಿವಿಧ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರಲಿದೆ ಎಂದು ಮೂಲಗಳು ಹೇಳಿವೆ. ಇದರ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 118 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದೆ. 1.5-ಲೀಟರ್ ಡೀಸೆಲ್ ಎಂಜಿನ್ 113 ಬಿಹೆಚ್‌ಪಿ ಶಕ್ತಿ ಮತ್ತು 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ.

New Tata Curvv Car Engine Details Expected Price

ಮತ್ತೊಂದು 1.2-ಲೀಟರ್ ಡೈರೆಕ್ಟ್-ಇಂಕ್ಷನ್ ಪೆಟ್ರೋಲ್ ಎಂಜಿನ್ 123 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 225 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಮುಂಬರಲಿರುವ ಇಂಧನ ಚಾಲಿತ ಟಾಟಾ ಕರ್ವ್ ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಜನಪ್ರಿಯ ಕಾರುಗಳ ಸ್ಪರ್ಧೆಯನ್ನು ಎದುರಿಸಬೇಕಾಗಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಕಿಯಾ ಸೆಲ್ಟೋಸ್‌, ಹೋಂಡಾ ಎಲಿವೇಟ್, ಸ್ಕೋಡಾ ಕುಶಾಕ್, ಪೋಕ್ಸ್‌ವ್ಯಾಗನ್ ಟೈಗನ್ ಹಾಗೂ ಎಂಜಿ ಆಸ್ಟರ್‌ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

New Tata Curvv Car Engine Details Expected Price

ಎಲೆಕ್ಟ್ರಿಕ್ ಹಾಗೂ ಇಂಧನ ಚಾಲಿತ ಕರ್ವ್ ಕಾರುಗಳು, ಬಹುತೇಕ ಒಂದೇ ರೀತಿಯ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಎಲ್‌ಇಡಿ ಲೈಟಿಂಗ್ (ಹೆಡ್‌ಲೈಟ್‌ಗಳು, ಟೈಲ್‌ಲೈಟ್‌ಗಳು ಹಾಗೂ ಡಿಆರ್‌ಎಲ್‌ಗಳು), ಪನೋರಮಿಕ್ ಸನ್‌ರೂಫ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಲೆಕ್ಟ್ರಿಕ್ ಟೈಲ್‌ಗೇಟ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್‌ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿವೆ ಎನ್ನಲಾಗಿದೆ.

ಟಾಟಾ ಕರ್ವ್ ಎಲೆಕ್ಟ್ರಿಕ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದರ ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) 55 ಕೆಡಬ್ಲ್ಯೂಹೆಚ್ (Kwh) ಸಾಮರ್ಥ್ಯದ ಬ್ಯಾಟರಿ ಮತ್ತು ಸಿಂಗಲ್ ಎಲೆಕ್ಟ್ರಿಕ್ ಮೋಟಾರ್‌ನ್ನು ಒಳಗೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 600 ಕಿ.ಮೀ ಓಡುತ್ತದೆ ಎಂದು ತಿಳಿದುಬಂದಿದೆ. ಆದಾಗ್ಯೂ ಈ ಕಾರಿನ ಆರಂಭಿಕ ಶ್ರೇಣಿ ರೂಪಾಂತರದ ಕುರಿತಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಟಾಟಾ ಕರ್ವ್ ಕೂಪೆ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ ಎಂದು ಅಂದಾಜಿಸಲಾಗಿದೆ. ಎಲೆಕ್ಟ್ರಿಕ್ ಮಾದರಿ ರೂ.18 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಅದೇ ರೀತಿಯಲ್ಲಿ ಇಂಧನ ಚಾಲಿತ ರೂಪಾಂತರ ರೂ.11 ಲಕ್ಷದಿಂದ ರೂ.19 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ಸಿಗುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 29, 2024, 13:10 [IST]
English summary
New tata curvv car engine details expected price
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+