ಲ್ಯಾಂಬೋರ್ಗಿನಿ ಖರೀದಿಸಲಾಗುತ್ತಿಲ್ಲವೆಂದು ಕೊರಗಬೇಡಿ: ಬಂತು ಹೊಸ ಟಾಟಾ ಕೂಪೆ ಎಸ್‌ಯುವಿ

ಜನಪ್ರಿಯ ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ (Tata Motors) ಹೊಚ್ಚ ಹೊಸ ಕರ್ವ್ ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ವಾರಗಳ ಹಿಂದೆ ಬಿಡುಗಡೆಗೊಳಿಸಿತು. ಇದೀಗ ಹೊಸ ಟಾಟಾ ಕರ್ವ್ ICE (Tata Curvv ICE) ಕೂಪೆ ಎಸ್‌ಯುವಿಯನ್ನು ಬಿಡುಗಡೆಗೊಳಿಸಿದೆ. ಈ ಹೊಸ ಟಾಟಾ ಕರ್ವ್ ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಎಸ್‍ಯುವಿಯು ಆಧುನಿಕ ವಿನ್ಯಾಸ ಮತ್ತು ಸುಧಾರಿತ ವೈಶಿಷ್ಟ್ಯಗಳೊಂದಿಗೆ ಪ್ರತಿಸ್ಪರ್ಧಿಗಳಿಗೆ ಸವಾಲು ಹಾಕಲು ರೆಡೆಯಾಗಿದೆ. ಈ ಹೊಸ ಕೂಪೆ ಎಸ್‌ಯುವಿಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಬೆಲೆ ಮತ್ತು ರೂಪಾಂತರಗಳು: ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ರೂ.9.99 ರಿಂದ 17.69 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ದರಗಳು ಅಕ್ಟೊಬರ್ 31ರವರೆಗೆ ಅನ್ವಯವಾಗಲಿದ್ದು, ಇಂದಿನಿಂದ ಬುಕ್ಕಿಂಗ್ ಕೂಡ ಶುರುವಾಗಿದೆ. ಹೊಸ ಕರ್ವ್ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಎಸ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.

Tata Curvv

ವಿನ್ಯಾಸ: ಈ ಟಾಟಾ ಕರ್ವ್ ಕೂಪೆ ಎಸ್‌ಯುವಿ ಹೊರಭಾಗದಲ್ಲಿ ಅದ್ಬುತವಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು ಮತ್ತು ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ರೂಫ್‌ಲೈನ್‌ ಇಳಿಜಾರಾಗಿದ್ದು, ಒಳಭಾಗದ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಜೊತೆಗೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಿದೆ.

ಒಳಭಾಗದ: ಈ ಹೊಸ ಎಸ್‍ಯುವಿಯ ಕ್ಯಾಬಿನ್ ವಿನ್ಯಾಸವು ನೆಕ್ಸಾನ್ ಮತ್ತು ನೆಕ್ಸಾನ್ ಇವಿಗೆ ಹೋಲುತ್ತದೆ ಆದರೆ ಡ್ಯುಯಲ್-ಟೋನ್ ಬರ್ಗಂಡಿ ಮತ್ತು ಬ್ಲಾಯ್ಕ್ ಥೀಮ್ ಅನ್ನು ಹೊಂದಿದೆ. ಇದು ಗೆಸ್ಚರ್ ಕಂಟ್ರೋಲ್, ಫ್ಲಶ್ ಡೋರ್ ಹ್ಯಾಂಡಲ್‌ಗಳು, ಪನರೊಮಿಕ್ ಸನ್‌ರೂಫ್, ರಿಕ್ಲೈನಿಂಗ್ ಹಿಂಬದಿ ಸೀಟುಗಳು, ಆಟೋ-ಹೋಲ್ಡ್‌ನೊಂದಿಗೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಹೆಚ್ಚಿನವುಗಳೊಂದಿಗೆ ಸೆಗ್ಮೆಂಟ್-ಮೊದಲ ಚಾಲಿತ ಟೈಲ್‌ಗೇಟ್ ಅನ್ನು ಒಳಗೊಂಡಿದೆ.

ಫೀಚರ್ಸ್: ಟಾಟಾ ಕರ್ವ್ ಕೂಪೆ ಎಸ್‌ಯುವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ

ಉದ್ದಳತೆ: ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ 4,310 ಎಂಎಂ ಉದ್ದ, 1,810 ಎಂಎಂ ಅಗಲ ಮತ್ತು 1,637 ಎಂಎಂ ಎತ್ತರವನ್ನು ಹೊಂದಿದೆ. ವೀಲ್‌ಬೇಸ್ 2,560 ಎಂಎಂ ಇದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಎಂಜಿನ್: ಟಾಟಾ ಕೂಪೆ ಎಸ್‌ಯುವಿ 3 ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 125 ಬಿಹೆಚ್‍ಪಿ ಪವರ್ ಮತ್ತು 225 ಪೀಕ್ ಟಾರ್ಕ್ ಅನ್ನು ಉತ್ಪ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಿದ್ದು, ಈ ಎಂಜಿನ್ 118 ಬಿಹೆಚ್‍ಪಿ ಪವರ್ ಹಾಗೂ 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ನೀಡುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Article Published On: Monday, September 2, 2024, 16:53 [IST]
English summary
New tata curvv coupe suv top things
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+