ಮಧ್ಯಮ ವರ್ಗದವರ ಲಂಬೋರ್ಗಿನಿ: ಬಿಡುಗಡೆಗೆ ಸಜ್ಜಾದ ಟಾಟಾ ಬ್ರಹ್ಮಾಸ್ತ್ರ.. ವಿಶೇಷತೆಗಳೇನು?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಜನಪ್ರಿಯವಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕರ್ವ್ (Curvv) ಕೂಪ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಟಾಟಾ ಕಂಪನಿಯು ತಯಾರಿಯನ್ನು ನಡೆಸುತ್ತಿದೆ. ಈ ಎಸ್‍ಯುವಿ ರೋಡ್ ಟೆಸ್ಟ್ ನಡೆಸಲು ಪ್ರಾರಂಭಿಸಿದ್ದು, ಇತ್ತೀಚೆಗೆ ಮತ್ತೊಮ್ಮೆ ರೋಡ್ ಟೆಸ್ಟ್ ನಡೆಸುವಾಗ ಕಾಣಿಸಿಕೊಂಡಿದೆ.
ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಮುಂಬರುವ ಹಬ್ಬದ ಸೀಸನ್ ನಲ್ಲಿ ಟಾಟಾ ಕರ್ವ್ (Tata Curvv) ಎಸ್‍ಯುವಿಯು ICE ಮತ್ತು ಎಲೆಕ್ಟ್ರಿಕ್ ಆವೃತ್ತಿಗಳನ್ನು ದೇಶದಲ್ಲಿ ಬಿಡುಗಡೆ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸದಾಗಿ ಪುಣೆಯಲ್ಲಿ ರೋಡ್ ಟೆಸ್ಟ್ ನಡೆಸುವಾಗ ಕಾಣಿಸಿಕೊಂಡ ಟಾಟಾ ಕರ್ವ್ ಎಸ್‍ಯುವಿ ಸಾಮಾನ್ಯ ICE ಮಾದರಿ ಎಂದು ನಿರೀಕ್ಷಿಸುತ್ತೇವೆ. ಈಗಾಗಲೇ, ಕರ್ವ್ ಎಸ್‌ಯುವಿ ಉತ್ಪಾದನೆಯಗೆ ಸಿದ್ಧವಾಗಿದೆ.

ಆದರೂ ಟಾಟಾ ಕಂಪನಿಯು ಪ್ರಾಯೋಗಿಕ ಓಡಾಟದ ವೇಳೆ ಈ ಕಾರಿನ ವಿನ್ಯಾಸ (ಡಿಸೈನ್)ವನ್ನು ಮರೆಮಾಚುತ್ತಿದೆ. ನೂತನ ಕರ್ವ್ ಎಸ್‌ಯುವಿ ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರನ್ನು ಸೆಳೆಯುತ್ತಿದೆ. ರೋಡ್ ಟೆಸ್ಟ್ ಸಂದರ್ಭದಲ್ಲಿ ಕಂಡುಬಂದ ಹೊಸ ಕರ್ವ್ ಕಾರಿನ ಮುಂಭಾಗ (ಫ್ರಂಟ್)ದಲ್ಲಿರುವ ಫಾಸಿಯಾ, ಎಲ್‌ಇಡಿ ಲೈಟ್ ಬಾರ್ ನೊಂದಿಗೆ ಸಂಪರ್ಕಿತಗೊಂಡಿದೆ. ಅತ್ಯಾಧುನಿಕ ಹೆಡ್‌ಲ್ಯಾಂಪ್ಸ್ ಕೂಡ ಪಡೆದಿದೆ.
ಇನ್ನು ಈ ಟಾಟಾ ಎಸ್‍ಯುವಿಯ ಬದಿ (ಸೈಡ್) ವಿನ್ಯಾಸವು ಅತ್ಯುತ್ತಮವಾಗಿದ್ದು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್ ಅನ್ನು ಹೊಂದಿದೆ. ಹಿಂಭಾಗದ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ. ಹೊಸ ಟಾಟಾ ಕರ್ವ್ ಕೂಪ್ ಎಸ್‌ಯುವಿ, ಒಳಭಾಗವು ಅತ್ಯುತ್ತಮ ವಿನ್ಯಾಸವನ್ನು ಪಡೆದಿದೆ. ಜೊತೆಗೆ ಹ್ಯಾರಿಯರ್, ಸಫಾರಿ ಮತ್ತು ನೆಕ್ಸಾನ್‌ನಂತಹ ಎಸ್‌ಯುವಿಗಳಂತೆಯೂ ವೈಶಿಷ್ಟ್ಯವನ್ನು ಪಡೆದಿರುವ ನಿರೀಕ್ಷೆಯಿದೆ.

ಟಾಟಾ ಲೋಗೋವನ್ನು ಹೊಂದಿರುವ 4 - ಸ್ಪೋಕ್ ಸ್ಟೀರಿಂಗ್ ವೀಲ್, 12.3 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 - ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಈ ಕಾರು, ಇಂಧನ ಹಾಗೂ ಎಲೆಕ್ಟ್ರಿಕ್ ಪವರ್ ಟ್ರೈನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.
ಟಾಟಾ ಕರ್ವ್ ಎಸ್‍ಯುವಿಯಲ್ಲಿಹೊಸ 1.2-ಲೀಟರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಸುಮಾರು 125bhp ಮತ್ತು 225Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮತ್ತು 6-ಸ್ಪೀಡ್ DCT ಯುನಿಟ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಮತ್ತೊಂದು 1.5 - ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದ್ದು, ಇದು 115 ಪಿಎಸ್ ಪವರ್ ಹಾಗೂ 260 ಎನ್ಎಂ ಪೀಕ್ ಟಾರ್ಕ್ ಹೊರಹಾಕಬಹುದು. ಎಲೆಕ್ಟ್ರಿಕ್ ರೂಪಾಂತರದಲ್ಲಿ ಬರುವ ಟಾಟಾ ಕರ್ವ್ ಕೂಪ್ ಎಸ್‌ಯುವಿ, ಪವರ್ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.
ಈ ಹೊಸ ಟಾಟಾ ಕರ್ವ್ ಎಸ್‍ಯುವಿಯು ಗರಿಷ್ಠ ಸುರಕ್ಷತಾ ವೈಶಿಷ್ಟ್ಯದೊಂದಿಗೆ ಮಾರುಕಟ್ಟೆಗೆ ಬರಬಹುದು. ಪ್ರಮುಖವಾಗಿ 6 - ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360 - ಡಿಗ್ರಿ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಒಳಗೊಂಡಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications