Tata: ಡೀಸೆಲ್ ಆಯ್ಕೆಯಲ್ಲಿಯೇ ಜನ ಮೆಚ್ಚಿದ ಈ ಟಾಟಾ ಕಾರು ಪೆಟ್ರೋಲ್-ಎಲೆಕ್ಟ್ರಿಕ್ ರೂಪದಲ್ಲಿ.. ಯಾವಾಗ ಬರುತ್ತದೆ?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಪ್ರತಿಸ್ಪರ್ಧಿ ಕಂಪನಿಗಳ ಕಾರುಗಳಿಗೆ ಭಾರೀ ಪೈಪೋಟಿ ನೀಡಲು, ಕಳೆದ ವರ್ಷ ಕೊನೆಯಲ್ಲಿ ನವೀಕರಿಸಿದ ಹ್ಯಾರಿಯರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು.
ನೂತನ ಟಾಟಾ ಹ್ಯಾರಿಯರ್ (Tata Harrier) ಮಿಡ್ ಸೈಜ್ (ಮಧ್ಯಮ ಗಾತ್ರ) ಎಸ್‌ಯುವಿಯಾಗಿದ್ದು, ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಮಾತ್ರ ಲಭ್ಯವಿದೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಖರೀದಿದಾರರಿಗೆ ಹ್ಯಾರಿಯರ್‌ನ್ನು ಹತ್ತರವಾಗಿಸಲು ಕಂಪನಿಯು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅದಕ್ಕಾಗಿ ಈ ಕಾರನ್ನು 2025ರಲ್ಲಿ ಪೆಟ್ರೋಲ್-ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಬಹುದು ಎನ್ನಲಾಗಿದೆ. ಆದರೆ, ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿಯಿಲ್ಲ.

ಭಾರತದ ಮಾರುಕಟ್ಟೆಗೆ ಬರಲಿರುವ ಟಾಟಾ ಹ್ಯಾರಿಯರ್ ಇವಿ ರೂ.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ದೊಡ್ಡದಾದ ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ದೊರೆಯಲಿರುವ ಈ ಕಾರು, ಡುಯಲ್ ಮೋಟಾರ್ ಪಡೆದಿರಲಿದೆ. ಸಂಪೂರ್ಣ ಚಾರ್ಜ್ ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ ಎಂದು ಹೇಳಲಾಗಿದೆ.
ಹ್ಯಾರಿಯರ್ ಇವಿಯು, ಡೀಸೆಲ್ ಪವರ್‌ಟ್ರೇನ್ ಮಾದರಿ (ಮಾಡೆಲ್) ರೀತಿಯಲ್ಲಿಯೇ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎನ್ನಲಾಗಿದೆ. ಪ್ರಮುಖವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಜೋನ್ ಆಟೋಮೆಟಿಕ್ ಎಸಿ, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಹ್ಯಾರಿಯರ್ ಎಸ್‌ಯುವಿ ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಪ್ಯೂರ್, ಅಡ್ವೆಂಚರ್, ಫಿಯರ್ ಲೆಸ್ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ವಿನ್ಯಾಸದ ದೃಷ್ಟಿಯಿಂದ ನವೀಕೃತ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್‌ಗಳನ್ನು ಹೊಂದಿದ್ದು, 18 ಹಾಗೂ 19 ಇಂಚಿನ ಅಲಾಯ್ ವೀಲ್ಸ್ ಕೂಡ ಪಡೆದಿದೆ.
ಈ ಟಾಟಾ ಹ್ಯಾರಿಯರ್ 2.0 - ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 170 ಗರಿಷ್ಠ ಪವರ್ (ಶಕ್ತಿ) ಹಾಗೂ 350 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6 - ಸ್ಪೀಡ್ ಮ್ಯಾನುವಲ್ ಅಥವಾ 6 - ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 16.8 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಹ್ಯಾರಿಯರ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 10.25-ಇಂಚು ಅಥವಾ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications