ಟಾಟಾ ಬತ್ತಳಿಕೆಗೆ ಮತ್ತೊಂದು ಅಸ್ತ್ರ: ಕಡಿಮೆ ಬೆಲೆ ಪಂಚ್ ಎಲೆಕ್ಟ್ರಿಕ್ ಕಾರಿನ ವಿಶೇಷತೆಗಳು

ದೇಶಿಯ ಮಾರುಕಟ್ಟೆಯಲ್ಲಿ ಭಾರತದ ಮೈಕ್ರೋ ಎಸ್‌ಯುವಿ ವಿಭಾಗದಲ್ಲಿ ಟಾಟಾ ಪಂಚ್ (Tata Punch) ವಿಶೇಷವಾದ ಸ್ಥಾನಗಳಿಸಿದೆ. ಇದೀಗ ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ಬ್ನ ಟಾಟಾ ಪಂಚ್ ಮಾದರಿಯನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ (Tata Punch EV) ಬೆಲೆಯು ಎಕ್ಸ್ ಶೊರೂಂ ಪ್ರಕಾರ ರೂ.10.99 ಲಕ್ಷವಾಗಿದೆ.

ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ ವಿತರಣೆಯ ದಿನಾಂಕ ಬಹಿರಂಗವಾಗಿದೆ. ಈ ಹೊಸ ಟಾಟಾ ಎಲೆಕ್ಟ್ರಿಕ್ ಕಾರಿನ ವಿತರಣೆಯು ಈ ತಿಂಗಳ ಜನವರಿ 22 ರಿಂದ ಪ್ರಾರಂಭವಾಗಲಿದೆ. ಇನ್ನು ಈ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ಖರೀದಿಸಲು ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ. ಈ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು acti.ev ಪ್ಯೂರ್ ಎಲೆಕ್ಟ್ರಿಕ್ ಪ್ಲಾಟ್‌ಫಾರ್ಮ್ ಆಗಿದೆ.

Tata Punch EV

ವಿನ್ಯಾಸ: ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ ಮುಂಭಾಗದಲ್ಲಿರುವ ಟಾಟಾ ಲೋಗೋದ ಕೆಳಗೆ ಮಧ್ಯದಲ್ಲಿ ಇರಿಸಲಾದ ಚಾರ್ಜಿಂಗ್ ಫ್ಲಾಪ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಇರಿಸಲಾಗಿರುವ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಫಾಗ್ ಲ್ಯಾಂಪ್‌ಗಳನ್ನು ಹೊಂದಿದೆ. ಟಾಟಾ ಪಂಚ್ ಇವಿಯಲ್ಲಿ 16-ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್ ಗಳನ್ನು ಹೊಂದಿದೆ. ಇನ್ನು ಇದರಲ್ಲಿ ನಾಲ್ಕು ಡಿಸ್ಕ್ ಬ್ರೇಕ್‌ಗಳನ್ನು ಪಡೆಯುತ್ತದೆ.

ಫೀಚರ್ಸ್: ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನಲ್ಲಿ ದೊಡ್ಡದಾದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಹೊಂದಿದೆ. ಈ ಯುನಿಟ್ Apple CarPlay ಮತ್ತು Android Auto ಎರಡಕ್ಕೂ ಕನೆಕ್ಟ್ ಆಗಿರುತ್ತದೆ. ನವೀಕರಿಸಿದ ಸೆಂಟರ್ ಕನ್ಸೋಲ್ ಈಗ ಟಚ್-ಸೆನ್ಸಿಟಿವ್ ಎಸಿ ಕಂಟ್ರೋಲ್ ಪ್ಯಾನೆಲ್ ಅನ್ನು ಸಂಯೋಜಿಸಿದೆ. ಹೆಚ್ಚುವರಿಯಾಗಿ ಟಾಟಾ ಪಂಚ್ ಇವಿ ಹೊಸ ಟು-ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಪ್ರಕಾಶಿತ ಟಾಟಾ ಲೋಗೋದೊಂದಿಗೆ ಅಳವಡಿಸಿಕೊಂಡಿದೆ.

Tata Punch EV

ಈ ಕಾರಿನ ಒಳಭಾಗದಲ್ಲಿ ತಾಜಾ ಡ್ಯುಯಲ್-ಟೋನ್ ಅಪ್ಹೋಲ್ಸ್ಟರಿ, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು AQI ಡಿಸ್ಪ್ಲೇಯೊಂದಿಗೆ ಏರ್ ಪ್ಯೂರಿಫೈಯರ್ ಹೊಂದಿದೆ. ಇದರೊಂದಿಗೆ ಆಟೋ ಫೋಲ್ಡ್ ORVM ಗಳು, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, ಲೆಥೆರೆಟ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರ್, ಸನ್‌ರೂಫ್ ಅನ್ನು ಹೊಂದಿದೆ. ಕ್ರೂಸ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿರುತ್ತದೆ.

ಬ್ಯಾಟರಿ ಪ್ಯಾಕ್: ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನಲ್ಲಿ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ಲಭ್ಯವಿರುತ್ತದೆ. ಈ ಎಲೆಕ್ಟ್ರಿಕ್ ಕಾರಿನಲ್ಲಿ 25 kWh ಮತ್ತು 35 kWh ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. ಇದರಲ್ಲಿ 25 kWh ಬ್ಯಾಟರಿ ಪ್ಯಾಕ್ ಸಂಪೂರ್ಣವಾಗಿ ಚಾರ್ಜ್ ಮಾಡಿದರೆ 315 ಕಿ.ಮೀ ರೇಂಜ್ ಅನ್ನು ನೀಡಿದರೆ, 35 kWh ಬ್ಯಾಟರಿ ಪ್ಯಾಕ್‌ 421 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

Tata Punch EV

ಮಿಡ್ ರೇಂಜ್ ಮಾದರಿಯು 80bhp ಮತ್ತು 114Nm ಟಾರ್ಕ್ ಅನ್ನು ಉತ್ಪಾದಿಸಿದರೆ, ಲಾಂಗ್ ರೇಂಜ್ ಮಾದರಿಯು 120bhp ಮತ್ತು 190Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹೆಚ್ಚುವರಿಯಾಗಿ, ಬ್ರ್ಯಾಂಡ್ ಎರಡು ಚಾರ್ಜರ್ ಆಯ್ಕೆಗಳನ್ನು ನೀಡುತ್ತದೆ. ಇದು 7.2 kW ಫಾಸ್ಟ್ಚಾರ್ಜರ್ (LR ರೂಪಾಂತರಕ್ಕೆ ಪ್ರತ್ಯೇಕವಾಗಿ ಲಭ್ಯವಿದೆ) ಮತ್ತು 3.3 kW ವಾಲ್‌ಬಾಕ್ಸ್ ಚಾರ್ಜರ್ ಹೊಂದಿದೆ.

ಪ್ಲಾಟ್‌ಫಾರ್ಮ್‌: ಗಮನಾರ್ಹವಾಗಿ, ಟಾಟಾ ಪಂಚ್ ಇವಿ ಟಾಟಾದ ಹೊಸ Acti.EV (ಅಡ್ವಾನ್ಸ್ಡ್ ಕನೆಕ್ಟೆಡ್ ಟೆಕ್ ಇಂಟೆಲಿಜೆಂಟ್ ಎಲೆಕ್ಟ್ರಿಕ್ ವೆಹಿಕಲ್) ಪ್ಲಾಟ್‌ಫಾರ್ಮ್‌ನ ಆಧಾರವಾಗಿದೆ. ಈ ಪ್ಲಾಟ್‌ಫಾರ್ಮ್‌ ಅನ್ನು ಮುಂಬರುವ ಎಲೆಕ್ಟ್ರಿಕ್ ಮಾದರಿಗಳಾದ ಹ್ಯಾರಿಯರ್ ಇವಿ ಮತ್ತು ಕರ್ವ್ ಇವಿ ಆಧರಿಸಿರುತ್ತದೆ. ಈ Acti.EV ಆರ್ಕಿಟೆಕ್ಚರ್ ಬಹುಮುಖವಾಗಿದೆ, ವಿವಿಧ ಬಾಡಿ ಗಾತ್ರಗಳು, ಪವರ್‌ಟ್ರೇನ್‌ಗಳು ಮತ್ತು ಡ್ರೈವ್‌ಟ್ರೇನ್ ಸಿಸ್ಟಂಗಳಿಗೆ ಸ್ಥಳಾವಕಾಶ ನೀಡುತ್ತದೆ.

Tata Punch EV

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 19, 2024, 8:30 [IST]
English summary
New tata punch ev top things details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+