Tata Punch Facelift: ಬಿಡುಗಡೆಗೆ ನಿಗದಿಯಾಯಿತು ಮುಹೂರ್ತ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳಿರಲಿವೆ?

ಭಾರತದ ಮಾರುಕಟ್ಟೆಯಲ್ಲಿ ನಿನ್ನೆಯಷ್ಟೇ (ಜ.17) ಟಾಟಾ ಪಂಚ್ ಇವಿ (Tata Punch EV) ಬಿಡುಗಡೆಯಾಗಿದ್ದು, ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೀಗ, ಟಾಟಾ ಮೋಟಾರ್ಸ್‌ನ ಪ್ಯಾಸೆಂಜರ್ ವೆಹಿಕಲ್ಸ್ ಯುನಿಟ್ ಎಂಡಿ ಶೈಲೇಶ್ ಚಂದ್ರ, ಪಂಚ್ (ಪೆಟ್ರೋಲ್) ಎಸ್‌ಯುವಿ ಕುರಿತು ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.

ಮುಂದಿನ ವರ್ಷ ಅಂದರೆ 2025ರ ಮಧ್ಯಭಾಗದಲ್ಲಿ ಅಥವಾ ನಂತರ ಟಾಟಾ ಪಂಚ್ (Tata Punch) ನವೀಕರಣಗಳೊಂದಿಗೆ (Upgrade) ಲಾಂಚ್ ಆಗಲಿದೆ ಎಂದು ಶೈಲೇಶ್ ಚಂದ್ರ ದೃಢಪಡಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಟಾಟಾದ ನೆಕ್ಸಾನ್ (Nexon) ಮತ್ತು ಹ್ಯಾರಿಯರ್ ಫೇಸ್‌ಲಿಫ್ಟ್‌ (Harrier Facelifts) ವಿನ್ಯಾಸದ ದೃಷ್ಟಿಯಿಂದ ಸಾಕಷ್ಟು ಅತ್ಯಾಧುನಿಕವಾಗಿದ್ದು, ಅದೇ ರೀತಿಯಲ್ಲಿ ಮುಂಬರಲಿರುವ ಟಾಟಾ ಪಂಚ್ ಫೇಸ್‌ಲಿಫ್ಟ್‌ (Tata Punch Facelift) ಸಹ ಆಕರ್ಷಕವಾಗಿರಬಹುದು ಎಂದು ಅಂದಾಜಿಸಲಾಗಿದೆ.

Tata Punch Facelift

2025ಕ್ಕೆ ಬಿಡುಗಡೆಯಾಗಲಿದೆ ಎನ್ನಲಾಗಿರುವ ಟಾಟಾ ಪಂಚ್ ಫೇಸ್‌ಲಿಫ್ಟ್‌, ಮೈಕ್ರೋ ಎಸ್‌ಯುವಿಯಾಗಿರುವುದರಿಂದ ಮುಂಭಾಗದ ಬಂಪರ್, ಗ್ರಿಲ್‌ನಲ್ಲಿ ಕೆಲವೊಂದು ಬದಲಾವಣೆಗಳು, ಹೊಸದಾದ ಹೆಡ್‌ಲ್ಯಾಂಪ್‌, ನವೀನ ಬಾನೆಟ್‌ನ್ನು ಪಡೆದಿರುವ ನೀರಿಕ್ಷೆಯಿದೆ. ಜೊತೆಗೆ ಹಿಂಭಾಗದ ವಿನ್ಯಾಸವು ಉತ್ತಮವಾಗಿರಲಿದೆ. ಇದರಿಂದ ಸುಲಭವಾಗಿ ಪಂಚ್ ಪೆಟ್ರೋಲ್ ಕಾರು ಮತ್ತು ಪಂಚ್ ಎಲೆಕ್ಟ್ರಿಕ್ ಕಾರುಗಳ ನಡುವಿನ ವ್ಯತ್ಯಾಸವನ್ನು ಗುರುತಿಸಬಹುದು.

ಮುಂದಿನ ವರ್ಷ ಬರಲಿರುವ ಟಾಟಾ ಪಂಚ್ ಫೇಸ್‌ಲಿಫ್ಟ್‌ ಎಸ್‌ಯುವಿ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಪ್ರಮುಖವಾಗಿ, ದೊಡ್ಡದಾದ 10.25 - ಇಂಚಿನ ಟಚ್‌ಸ್ಕ್ರೀನ್, 10.25 - ಇಂಚಿನ ಫುಲ್ ಡಿಜಿಟಲ್ ಡೈವರ್ಸ್ ಡಿಸ್ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಏರ್ ಪ್ಯೂರಿಫೈಯರ್, ಕ್ರೂಸ್ ಕಂಟ್ರೋಲ್, ಸನ್‌ರೂಫ್, ಆಟೋಮೆಟಿಕ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿರುವ ನೀರಿಕ್ಷೆಯಿದೆ.

Tata Punch Facelift

ಮುಂಬರಲಿರುವ ನೂತನ ಟಾಟಾ ಪಂಚ್ ಫೇಸ್‌ಲಿಫ್ಟ್‌ ಪವರ್ ಟ್ರೈನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಯನ್ನು ಪಡೆಯುವುದಿರುವುದಿಲ್ಲ ಎಂದು ಹೇಳಲಾಗಿದೆ. ಈಗಿರುವಂತೆ 86 hp ಪವರ್, 113 Nm ಪೀಕ್ ಟಾರ್ಕ್ ಉತ್ಪಾದಿಸುವ 1.2 - ಲೀಟರ್ ಪೆಟ್ರೋಲ್ ಎಂಜಿನ್, 5 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಹೊಂದಿರಲಿದೆ. ಜೊತೆಗೆ ಸಿಎನ್‌ಜಿ ಕಿಟ್ ಆಯ್ಕೆಯನ್ನು ಪಡೆದಿರಬಹುದು.

ಸುರಕ್ಷತೆಯಲ್ಲಿಯೂ ಟಾಟಾ ಪಂಚ್ ಫೇಸ್‌ಲಿಫ್ಟ್‌ ಅತ್ಯಾಧುನಿಕವಾಗಿರಲಿದ್ದು, 6 - ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಬ್ಲೈಂಡ್ ಸ್ಪಾಟ್ ಮಾನಿಟರಿಂಗ್‌, 360-ಡಿಗ್ರಿ ಕ್ಯಾಮೆರಾ ಒಳಗೊಂಡಿರುವ ನೀರಿಕ್ಷೆಯಿದೆ. ಬೆಲೆ ಬಗ್ಗೆ ಹೇಳುವುದಾದರೆ, ಈ ಕಾರು ಸಹ ರೂ.6 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗಬಹುದು ಎನ್ನಲಾಗಿದೆ.

Tata Punch Facelift

ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್ ಎಸ್‌ಯುವಿ, ರೂ.6 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗುವ ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 18.8 ರಿಂದ 26.99 ಕಿ.ಮೀ ಮೈಲೇಜ್ ನೀಡುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಪಂಚ್ ಇವಿ (Tata Punch EV) ಬಗ್ಗೆ ಹೇಳುವುದಾದರೆ, ಇದು ರೂ.10.99 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 25 kWh ಮತ್ತು 35 kWh ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್ ನಲ್ಲಿ ಕ್ರಮವಾಗಿ 315 ರಿಂದ 421 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.

ಈ ಟಾಟಾ ಪಂಚ್ ಇವಿ, ದೊಡ್ಡದಾದ 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಏರ್ ಪ್ಯೂರಿಫೈಯರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಸನ್‌ರೂಫ್ ಒಳಗೊಂಡಿದೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, 360 - ಡಿಗ್ರಿ ಕ್ಯಾಮೆರಾ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಇವೆ.

Article Published On: Thursday, January 18, 2024, 10:27 [IST]
English summary
New tata punch facelift suv launch confirmed in 2025 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+