Tata: ಟಾಟಾ ಟಿಯಾಗೊ, ಟಿಗೂರ್ ಸಿಎನ್‌ಜಿ ಆಟೋಮೆಟಿಕ್ ಕಾರುಗಳ ಮೈಲೇಜ್ ಬಹಿರಂಗ.. ಬೈಕ್‌ಗಿಂತ ಜಾಸ್ತಿ!

ಭಾರತದ ಮಾರುಕಟ್ಟೆಯಲ್ಲಿ ಗುರುವಾರ ಟಾಟಾ ಮೋಟಾರ್ಸ್ (Tata Motors), ಇದೇ ಮೊದಲ ಬಾರಿಗೆ ಟಿಯಾಗೊ (Tiago), ಟಿಗೂರ್ (Tiago) ಸಿಎನ್‌ಜಿ ಆಟೋಮೆಟಿಕ್ (AMT) ಮಾದರಿಗಳನ್ನು ಬಿಡುಗಡೆಗೊಳಿಸಿತ್ತು. ಸದ್ಯ, ಈ ಕಾರುಗಳು ಎಷ್ಟು ಮೈಲೇಜ್ (mileage) ನೀಡುತ್ತವೆ ಎಂಬ ವಿವರಗಳು ಲಭ್ಯವಾಗಿದೆ.

ಟಾಟಾ ಟಿಯಾಗೊ, ಟಿಗೂರ್ ಸಿಎನ್‌ಜಿ ಆಟೋಮೆಟಿಕ್ ರೂಪಾಂತರಗಳು, 1.2 - ಲೀಟರ್ 3 ಸಿಲಿಂಡರ್ ಎಂಜಿನ್ ಹೊಂದಿದ್ದು, 72 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ), 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿವೆ. 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆಡಿದ್ದು, ಪ್ರತಿ ಕೆಜಿಗೆ 28.06 ಕಿ.ಮೀ ಮೈಲೇಜ್ ಕೊಡುತ್ತವೆ ಎಂದು ವರದಿಯಾಗಿದೆ.

New Tata Tiago, Tigor CNG AMT Car Mileage Revealed: Details

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಟಾಟಾ ಟಿಯಾಗೊ ಪೆಟ್ರೋಲ್ ರೂಪಾಂತರಗಳು ರೂ.5.65 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿವೆ. ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ ಸೇರಿದಂತೆ 6 ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತವೆ. 1.2 - ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿವೆ.

ಈ ಟಾಟಾ ಟಿಯಾಗೊ 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಪಲ್ ಕಾರ್‌ ಪ್ಲೇ, ಆಂಡ್ರಾಯ್ಡ್ ಆಟೋ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

ಟಾಟಾ ಟಿಗೂರ್ (Tata Tigor) ಪೆಟ್ರೋಲ್ ರೂಪಾಂತರಗಳು, ರೂ.6.30 ಲಕ್ಷ ಪ್ರಾರಂಭಿಕ ಬೆಲೆಯನ್ನು ಹೊಂದಿವೆ. ಮ್ಯಾಗ್ನೆಟಿಕ್ ರೆಡ್, ಅರಿಜೋನಾ ಬ್ಲೂ, ಓಪಲ್ ವೈಟ್ ಒಳಗೊಂಡಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತವೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಟಾಟಾ ಟಿಗೂರ್ ಕಾರು, 1.2 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 86 ಪಿಎಸ್ ಗರಿಷ್ಠ ಪವರ್ ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, 19.28 ಕೆಎಂಪಿಎಲ್ - 19.60 ಕೆಎಂಪಿಎಲ್ ಇಂಧನ ಹೊಂದಿದೆ.

ಟಿಗೂರ್, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪುಶ್ - ಬಟನ್ ಸ್ಟಾರ್ಟ್/ಸ್ಟಾಪ್, ರೈನ್-ಸೆನ್ಸಿಂಗ್ ವೈಪರ್ಸ್, ಕೀಲೆಸ್ ಎಂಟ್ರಿ, ಆಟೋ ಎಸಿ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, February 9, 2024, 22:33 [IST]
English summary
New tata tiago tigor cng amt car mileage revealed details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+