'ಬಾಹುಬಲಿ' ಎಸ್‍ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟೊಯೊಟಾ ಭಾರತದಲ್ಲಿ ತನ್ನ ಫಾರ್ಚುನರ್ ಲೀಡರ್ ಎಡಿಷನ್ ಅನ್ನು ಪರಿಚಯಿಸಿದೆ. ಈ ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವೆಚ್ಚವು ಡೀಲರ್‌ಶಿಪ್‌ನಲ್ಲಿ ಖರೀದಿದಾರರು ಆಯ್ಕೆ ಮಾಡಿ ಆಕ್ಸೆಸರೀಸ್ ಮೇಲೆ ಅವಲಂಬಿತವಾಗಿರುತ್ತದೆ. ಹೊಸ ಸ್ಪೆಷಲ್ ಎಡಿಷನ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಈ ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ (Toyota Fortuner Leader Edition) ಕ್ರಿಯೇಟಿವ್ ವಿನ್ಯಾಸದೊಂದಿಗೆ ಬರುತ್ತಿದೆ. ಈ ಹೊಸ ಎಡಿಷನ್ ಕೇವಲ ಮತ್ತೊಂದು ಆವೃತ್ತಿಯಲ್ಲ. ಇದು ಅನನ್ಯ ವೈಶಿಷ್ಟ್ಯಗಳು ಮತ್ತು ನವೀಕರಣಗಳೊಂದಿಗೆ ಬಂದಿದೆ. ಖರೀದಿದಾರರು ವಿವಿಧ ಚಾಲನಾ ಆದ್ಯತೆಗಳನ್ನು ಒದಗಿಸುವ ಮೂಲಕ ಮ್ಯಾನುಯಲ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಮಾಡಬಹುದಾಗಿದೆ.

ವಿನ್ಯಾಸ: ವಿನ್ಯಾಸದಲ್ಲಿ ಗಮನಾರ್ಹ ಬದಲಾವಣೆಯು ಸೂಪರ್ ವೈಟ್, ಪ್ಲಾಟಿನಂ ಪರ್ಲ್ ವೈಟ್ ಮತ್ತು ಸಿಲ್ವರ್ ಮೆಟಾಲಿಕ್, ಇವೆಲ್ಲವೂ ಬ್ಲ್ಯಾಕ್ ಬಣ್ಣದೊಂದಿಗೆ ಮೂರು ಡ್ಯುಯಲ್-ಟೋನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಮಾದರಿಯಲ್ಲಿ ಹೊಸ ಮುಂಭಾಗ ಮತ್ತು ಹಿಂಭಾಗದ ಬಂಪರ್ ಸ್ಪಾಯ್ಲರ್‌ಗಳನ್ನು ಸಹ ಹೊಂದಿದೆ. ಈ ಮಾದರಿಯು ಟೊಯೊಟಾದ ಅಧಿಕೃತ ಆಕ್ಸೆಸರೀಸ್ ಭಾಗವಾಗಿದೆ. ಇನ್ನು ಲೀಡರ್ ಎಡಿಷನ್ ಅದರ ಸ್ಟ್ಯಾಂಡರ್ಡ್ ಕೌಂಟರ್‌ಪಾರ್ಟ್‌ಗಳಿಂದ ಪ್ರತ್ಯೇಕಿಸುತ್ತದೆ.
ಫೀಚರ್ಸ್: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಮಾದರಿಯಲ್ಲಿ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ಆಟೋ-ಫೋಲ್ಡಿಂಗ್ ಔಟ್ ರಿಯರ್‌ವ್ಯೂ ಮಿರರ್‌ಗಳು (ORVMs) ಮತ್ತು ವೈರ್‌ಲೆಸ್ ಚಾರ್ಜರ್‌ನಂತಹ ತಂತ್ರಜ್ಞಾನಗಳನ್ನು ಹೊಂದಿವೆ. ಇದು ಚಾಲನೆಯ ಅನುಭವದ ಅನುಕೂಲತೆ ಮತ್ತು ಸುರಕ್ಷತೆಯನ್ನು ಸೇರಿಸುತ್ತದೆ. ಈ ಎಸ್‍ಯುವಿಯ ಆಕರ್ಷಣೆಯನ್ನು ಹೆಚ್ಚಿಸಲು ಹೊರಭಾಗವು ಹೊಸ ಅಲಾಯ್ ವ್ಹೀಲ್ ಗಳನ್ನು ನೀಡಿದೆ.
ಎಂಜಿನ್: ಈ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಮಾದರಿಯು 2.8-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಬರುತ್ತದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಎಂಜಿನ್ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನೊಂದಿಗೆ 500Nm ಟಾರ್ಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 420Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಮಾದರಿಯು ಕೂಡ ಎಂಜಿ ಗ್ಲೋಸ್ಟರ್‌ನಂತಹ ಇತರ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಆದರೆ ಫುಲ್ ಸೈಜ್ ಎಸ್‌ಯುವಿ (Full Size Suv) ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಎಂದಿನಂತೆ ಮುಂದುವರೆಸಿದೆ. ಪ್ರತಿ ತಿಂಗಳಿನಲ್ಲೂ, ಫುಲ್ ಸೈಜ್ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆಯುತ್ತಿದೆ.
ಇನ್ನು ಒಂದು ಕಾಲದಲ್ಲಿ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಪ್ರಬಲ ಪ್ರತಿಸ್ಪರ್ಧಿಯಾದ ಫೋರ್ಡ್ ಎಂಡೀವರ್ ಭಾರತಕ್ಕೆ ಬರುವ ಸಾಧ್ಯತೆಗಳಿದೆ. ಒಂದು ವೇಳೆ ಫೋರ್ಡ್ ಎಂಡೀವರ್ ಎಸ್‍ಯುವಿಯು ಭಾರತಕ್ಕೆ ಬಂದರೆ ಟೊಯೊಟಾ ಫಾರ್ಚುನರ್ ಮಾದರಿಗೆ ಭರ್ಜರಿ ಪೈಪೋಟಿ ನೀಡುತ್ತದೆ. ಟೊಯೊಟಾ ಫಾರ್ಚುನರ್ ಎಸ್‌ಯುವಿಯ ಸರಣಿಯನ್ನು ವಿಸ್ತರಿಸುವ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications