2025 New Year: ನಿಮ್ಮ ಪುಟ್ಟ ಕುಟುಂಬಕ್ಕೆ ಈ ಕಾರುಗಳು ಬೆಸ್ಟ್.. 5-ಸೀಟರ್, 34 Km ಮೈಲೇಜ್.. ಬೆಲೆ ಇಷ್ಟೇನಾ?
ಭಾರತದಲ್ಲಿ ಅವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಪೋಷಕರು ಹಾಗೂ ಇಬ್ಬರು ಮಕ್ಕಳಿರುವ ಸಣ್ಣ ಕುಟುಂಬಗಳನ್ನು ನೋಡಬಹುದು. ನೀವು ಈ ಹೊಸ ವರ್ಷವನ್ನು ಮತ್ತಷ್ಟು ಸ್ಮರಣೀಯವಾಗಿಸಲು ನೂತನ ಕಾರೊಂದನ್ನು ಖರೀದಿ ಮಾಡಲು ಆಲೋಚಿಸುತ್ತಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ವ್ಯಾಗನ್ಆರ್, ಡಿಜೈರ್, ಟಾಟಾ ಟಿಯಾಗೊ, ಆಲ್ಟ್ರೋಜ್, ರೆನಾಲ್ಟ್ ಕ್ವಿಡ್ ಮತ್ತು ಹ್ಯುಂಡೈ ಐ20 ಮಾಡೆಲ್‌ಗಳು ಉತ್ತಮ ಆಯ್ಕೆಯಾಗಲಿವೆ. ನಾವಿಲ್ಲಿ ಈ ಕಾರುಗಳ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಇದು ರೂ.5.54 ಲಕ್ಷದಿಂದ ರೂ.7.33 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್ ಕುರಿತಂತೆ ಹೇಳುವುದಾದರೆ, ಈ ಕಾರು ರೂ.6.79 ಲಕ್ಷದಿಂದ ರೂ.10.14 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ ಹಾಗೂ ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಟಾಟಾ ಟಿಯಾಗೊ (Tata Tiago) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಸಣ್ಣ ಕುಟುಂಬಗಳಿಗೆ ಹೆಚ್ಚು ಸರಿ ಹೊಂದುತ್ತದೆ. ಇದು ರೂ. 5 ಲಕ್ಷದಿಂದ ರೂ.8.75 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದೆ. 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಗಿದೆ. ಇದು ರೂ.6.50 ಲಕ್ಷದಿಂದ ರೂ.11.16 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ, 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ರೆನಾಲ್ಟ್ ಕ್ವಿಡ್ (Renault Kwid) ಹ್ಯಾಚ್‌ಬ್ಯಾಕ್ ಕುರಿತಂತೆ ಹೇಳುವುದಾದರೆ, ಈ ಕಾರು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಕಡೆಯದಾಗಿ ಹ್ಯುಂಡೈ ಐ20 (Hyundai i20) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡುವುದಾದರೆ, ಇದು ರೂ.7.04 ಲಕ್ಷದಿಂದ ರೂ.11.21 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications