Baleno: ಹೈಬ್ರಿಡ್ ಅವತಾರದಲ್ಲಿ ಮಾರುತಿ ಸುಜುಕಿ ಬಲೆನೊ.. 35 ಕಿಲೋಮೀಟರ್‌ಗೂ ಹೆಚ್ಚಿನ ಮೈಲೇಜ್?

ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ನವೀನ ಕಾರುಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಲೇ ಇರುತ್ತದೆ. ಈಗ ಹೊಸ ತಲೆಮಾರಿನ ಬಲೆನೊ (Baleno) ಹ್ಯಾಚ್‌ಬ್ಯಾಕ್‌ನ್ನು ಮುಂಬರುವ ವರ್ಷಗಳಲ್ಲಿ ಪರಿಚಯಿಸಲು ಸಿದ್ಧತೆಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ.

ಅತ್ಯಾಧುನಿಕ ವೈಶಿಷ್ಟ್ಯ ಹಾಗೂ ಹೈಬ್ರಿಡ್ ಎಂಜಿನ್ ಚಾಲಿತ ಬಲೆನೊ ಕಾರು 2026ರಲ್ಲಿ ಬರುವ ಸಾಧ್ಯತೆಯಿದೆ. ಮಾರುತಿ ಸುಜುಕಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿರುವ ಬಲೆನೊ (Baleno)ವನ್ನು 2015ರ ಕೊನೆಯಲ್ಲಿ ಭಾರತದಲ್ಲಿ ಲಾಂಚ್ ಮಾಡಲಾಗಿತ್ತು. ಕಳೆದ ಕೆಲವು ವರ್ಷಗಳಿಂದ ಈ ಕಾರಿಗೆ ದೊಡ್ಡಮಟ್ಟದಲ್ಲಿ ಬೇಡಿಕೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕೊಂಡುಕೊಳ್ಳುತ್ತಿದ್ದಾರೆ.

Next Generation Maruti Suzuki Baleno Car To Be Hybrid Engine, 35 Km Mileage?

ಸದ್ಯ, ಮಾರುತಿ ಸುಜುಕಿ ಮೈಲ್ಡ್ ಹೈಬ್ರಿಡ್ (Mild Hybrid) ಎಂಜಿನ್ ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದ್ದು, ಸ್ಟ್ರಾಂಗ್ (Strong Hybrid) ಎಂಜಿನ್ ಕಾರುಗಳ ಕೊರತೆ ಎದ್ದು ಕಾಣುತ್ತಿದೆ. ಆದರೂ ಈ ವಿಭಾಗದಲ್ಲಿ ಕಂಪನಿಯ ಗ್ರ್ಯಾಂಡ್ ವಿಟಾರಾ (Grand Vitara) ಮತ್ತು ಇನ್ವಿಕ್ಟೊ (Invicto) ಮಾದರಿಗಳು ಲಭ್ಯವಿವೆ. ಇವು ಟೊಯೊಟಾದ ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಇನ್ನೋವಾ ಹೈಕ್ರಾಸ್‌ ಆಧಾರಿತ ಪವರ್‌ಟ್ರೇನ್ ಹೊಂದಿವೆ.

ಮುಂಬರಲಿರುವ ಮಾರುತಿ ಸುಜುಕಿ ಬಲೆನೊ ಹೆಬ್ರಿಡ್ ಕಾರು, ಹೆಚ್ಚಿನ (35+ ಕಿಲೋಮೀಟರ್‌) ಮೈಲೇಜ್ ನೀಡುವ ನಿರೀಕ್ಷೆಯಿರುವುದರಿಂದ ಕೊಂಚ ಅಧಿಕ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಈಗಿರುವುದಕ್ಕಿಂತಲೂ ಅತ್ಯುತ್ತಮ ವೈಶಿಷ್ಟ್ಯ ಹಾಗೂ ವಿನ್ಯಾಸವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಎಲ್ಲದಕ್ಕೂ ಮುಂದಿನ ಕೆಲವೇ ತಿಂಗಳಲ್ಲಿ ಅಧಿಕೃತವಾಗಿ ತೆರೆಬೀಳಲಿದೆ.

Next Generation Maruti Suzuki Baleno Car To Be Hybrid Engine, 35 Km Mileage?

ಬಹುತೇಕರಿಗೆ ಈ ಹೈಬ್ರಿಡ್ ಎಂಜಿನ್ ಎಂದರೇನು ಎಂಬ ಪ್ರಶ್ನೆ ಕಾಡುತ್ತಿರಬಹುದು. ಅದಕ್ಕೆ ಉತ್ತರ ನೀಡುವ ಪ್ರಯತ್ನವನ್ನು ಕೂಡ ಮಾಡಿದ್ದೇವೆ. ಹೈಬ್ರಿಡ್ ಚಾಲಿತ ಕಾರುಗಳಲ್ಲಿ ಪೆಟ್ರೋಲ್/ ಡೀಸೆಲ್ ಎಂಜಿನ್ ಅನ್ನು ಎಲೆಕ್ಟ್ರಿಕ್ ಮೋಟರ್‌ನೊಂದಿಗೆ ಸಂಯೋಜಿಸಲಾಗಿರುತ್ತದೆ. ವಾಹನ ಚಲಿಸುವ ಇವೆರೆಡು ವ್ಯವಸ್ಥೆಗಳು ಪರಸ್ಪರವಾಗಿ ಕೆಲಸ ಮಾಡುತ್ತವೆ. ಕಡಿಮೆ ಪ್ರಮಾಣದಲ್ಲಿ ಇಂಧನ ದಹಿಸಿ, ಉತ್ತಮ ಮೈಲೇಜ್ ನೀಡಲು ಹೈಬ್ರಿಡ್ ಎಂಜಿನ್ ಸಹಕಾರಿಯಾಗಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಬಲೆನೊ ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ ಮತ್ತು ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರೈಂಡರ್ ಗ್ರೇ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

Next Generation Maruti Suzuki Baleno Car To Be Hybrid Engine, 35 Km Mileage?

ಈ ಕಾರು 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಇಂಧನ ದಕ್ಷತೆ ಕುರಿತು ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 22.35 ಕೆಎಂಪಿಎಲ್ - 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಬಲೆನೊ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 4-ಸ್ಪೀಕರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, February 17, 2024, 12:43 [IST]
English summary
Next generation maruti suzuki baleno car to be hybrid engine 35 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+