Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್

ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿ ನಿಸ್ಸಾನ್ (Nissan), ದೇಶೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ (Magnite) ಎಸ್‌ಯುವಿಯನ್ನು ಮಾರಾಟಗೊಳಿಸುತ್ತಿದೆ. ಈ ಕಾರು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದು, ಗೇಮ್ ಚೇಂಚರ್ ಎಸ್‌ಯುವಿಯಾಗಿ ಹೊರಹೊಮ್ಮಿದೆ.

ಭಾರತದಲ್ಲಿ ನಿಸ್ಸಾನ್ ಕಂಪನಿಯು ಮಾರುತ್ತಿರುವ ಏಕೈಕ ಕಾರು 'ಮ್ಯಾಗ್ನೈಟ್' ಆಗಿದ್ದು, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕಿಗರ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ300ನಂತಹ ಪ್ರತಿಸ್ಪರ್ಧಿಗಳನ್ನು ಹೊಂದಿದ್ದರೂ ಮಾರಾಟದಲ್ಲಿ ಮಾತ್ರ ಹಿಂದೆ ಬಿದ್ದಿಲ್ಲ. ಈವರೆಗೆ 1 ಲಕ್ಷಕ್ಕೂ ಹೆಚ್ಚಿನ ಖರೀದಿದಾರರು ಈ ಎಸ್‌ಯುವಿಯನ್ನು ಕೊಂಡುಕೊಂಡಿದ್ದಾರೆ.

Nissan Company Sold 1 Lakh Magnite Cars In India Rs 6 Lakh Price 20 Km Mileage

ದೇಶೀಯ ಮಾರುಕಟ್ಟೆಯಲ್ಲಿ ನಿಸ್ಸಾನ್ ಕಂಪನಿಯು 'ಮ್ಯಾಗ್ನೈಟ್' ಕಾರನ್ನು 2020ರಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಮೊದಲ ಹಣಕಾಸು ವರ್ಷ ಕಂಪನಿಗೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ದೊರೆಯಲಿಲ್ಲ. ಕೇವಲ 9,569 ಯುನಿಟ್ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿತ್ತು. 2021ರ ಆರ್ಥಿಕ ವರ್ಷದಲ್ಲಿ ಈ ಕಾರಿಗೆ ದೊಡ್ಡಮಟ್ಟದ ಬೇಡಿಕೆ ಸೃಷ್ಟಿಯಾಗಿ ಬರೋಬ್ಬರಿ 33,905 ಯುನಿಟ್ ಮಾರಲಾಗಿತ್ತು.

2022ರ ಹಣಕಾಸು ವರ್ಷದಲ್ಲಿ 32,546 ಯುನಿಟ್ ಕಾರನ್ನು ಮಾರಾಟ ಮಾಡಲಾಗಿತ್ತು. 2023ರ ಆರ್ಥಿಕ ವರ್ಷದಲ್ಲಿ ಕೊಂಚ ಹಿನ್ನೆಡೆ ಅನುಭವಿಸಿದರೂ 30,146 ಯುನಿಟ್ ಸೇರಿದಂತೆ ಒಟ್ಟು 1,06,166 ಮ್ಯಾಗ್ನೈಟ್ ಕಾರುಗಳನ್ನು ಮಾರಲಾಗಿದೆ. ಅದೇ ರೀತಿಯಲ್ಲಿ ಭಾರತದಲ್ಲಿ ತಯಾರಿಸಿದ ಈ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಕ್ಕೂ ರಫ್ತು ಮಾಡಲಾಗಿದ್ದು, 29,137 ಯುನಿಟ್ ಮ್ಯಾಗ್ನೈಟ್ ಎಸ್‌ಯುವಿಗಳನ್ನು ಹೊರದೇಶಕ್ಕೆ ಕಳುಹಿಸಲಾಗಿದೆ.

Nissan Company Sold 1 Lakh Magnite Cars In India Rs 6 Lakh Price 20 Km Mileage

ನೂತನ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್ಇ, ಎಕ್ಸ್ಎಲ್ ಸೇರಿದಂತೆ ಹಲವು ರೂಪಾಂತರ ಹಾಗೂ ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್ ಹಾಗೂ ಓನಿಕ್ಸ್ ಬ್ಲಾಕ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹದು.

ಈ ಕಾರು ಎರಡು ಪೆಟ್ರೋಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದು 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್/ ಸಿವಿಟಿ ಗೇರ್ ಬಾಕ್ಸ್ ಅನ್ನು ಪಡೆದಿದೆ. ಜೊತೆಗೆ 17.4 ರಿಂದ 20 ಕೆಎಂಪಿಎಲ್ ಮೈಲೇಜ್ ಕೊಡಲಿದ್ದು, FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, April 25, 2024, 17:29 [IST]
English summary
Nissan company sold 1 lakh magnite car in india rs 6 lakh price 20 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+