Nissan: ಸಣ್ಣ ಕುಟುಂಬಕ್ಕೆ ಈ ಜನಪ್ರಿಯ ಕಾರು ಸೂಕ್ತ.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್!

ಜಪಾನ್ ಮೂಲದ ನಿಸ್ಸಾನ್ (Nissan) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ (Magnite) ಹಾಗೂ ಎಕ್ಸ್-ಟ್ರಯಲ್ (X-Trail) ಕಾರುಗಳನ್ನು ಮಾರಾಟ ಮಾಡುತ್ತಿದೆ. ಮ್ಯಾಗ್ನೈಟ್ ಜನಪ್ರಿಯ ಎಸ್‌ಯುವಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಈ ಕಾರನ್ನು ತೆಗೆದುಕೊಳ್ಳಲು ಯೋಚಿಸಿದ್ದೀರಾ. ಇಲ್ಲಿ ನೂತನ ಕಾರಿನ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯ (Features)ಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ & ರೂಪಾಂತರಗಳು: ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಎಕ್ಸ್ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಹೊಂದಿದೆ.

Nissan Magnite Best Car For Small Families Rs 6 Lakh Price 20 Km Mileage

ಬಣ್ಣಗಳು, ಆಸನ ಆಯ್ಕೆ: ಈ ಕಾರು ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲಾಕ್, ಸ್ಯಾಂಡ್‌ಸ್ಟೋನ್ ಬ್ರೌನ್, ಸ್ಟಾರ್ಮ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ: ನಿಸ್ಸಾನ್ ಮ್ಯಾಗ್ನೈಟ್ ಪೆಟ್ರೋಲ್ ಪವರ್‌ಟ್ರೇನ್‌ನೊಂದಿಗೆ ಮಾತ್ರ ಲಭ್ಯವಿದೆ. ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 96 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಶಕ್ತಿ ಹಾಗೂ 160 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Nissan Magnite Best Car For Small Families Rs 6 Lakh Price 20 Km Mileage

ಈ ಎಸ್‌ಯುವಿ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಇದು ಪೆಟ್ರೋಲ್ ಕಾರಾಗಿದ್ದರೂ ಅತ್ಯುತ್ತಮವಾದ ಇಂಧನ ದಕ್ಷತೆ (Fuel Efficiency)ಯನ್ನು ಹೊಂದಿದೆ. 17.40 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

ವೈಶಿಷ್ಟ್ಯಗಳು: ನಿಸ್ಸಾನ್ ಮ್ಯಾಗ್ನೈಟ್ ಯುವ ಗ್ರಾಹಕರನ್ನು ಸೆಳೆಯುವ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಏರ್ ಪ್ಯೂರಿಫೈಯರ್, ಜೆಬಿಎಲ್ ಸ್ಪೀಕರ್‌, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Nissan Magnite Best Car For Small Families Rs 6 Lakh Price 20 Km Mileage

ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್ ಮತ್ತು ಸಿಟ್ರನ್ ಸಿ3ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, August 4, 2024, 8:30 [IST]
English summary
Nissan magnite best car for small families rs 6 lakh price 20 km mileage
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+