Nissan: ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಸಬೇಕೇ.. ಬಿಗ್ ಗುಡ್‌ನ್ಯೂಸ್‌, ರೂ.6 ಲಕ್ಷ ಬೆಲೆ.. 20 ಕಿ.ಮೀ ಮೈಲೇಜ್

ಜಪಾನ್ ಮೂಲದ ನಿಸ್ಸಾನ್ (Nissan) ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಏಕೈಕ ಮ್ಯಾಗ್ನೈಟ್ (Magnite) ಎಸ್‌ಯುವಿಯನ್ನು ಮಾರಾಟಗೊಳಿಸುತ್ತಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಆ ಕಾರಣಕ್ಕೆ ಗೇಮ್ ಚೇಂಚರ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಸದ್ಯ ಈ ಜೂನ್ ತಿಂಗಳಲ್ಲಿ ನೂತನ ಮ್ಯಾಗ್ನೈಟ್ ಕಾರು ಕೊಂಡುಕೊಳ್ಳುವವರಿಗೆ ಭರ್ಜರಿ ಹಣಕಾಸಿನ ಪ್ರಯೋಜನಗಳು ಸಿಗಲಿವೆ. ಬನ್ನಿ.. ಆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ನಿಸ್ಸಾನ್ ಮೋಟಾರ್ ಇಂಡಿಯಾ (Nissan Motor India), ಮ್ಯಾಗ್ನೈಟ್ ಕಾರಿನ ಮಾರಾಟವನ್ನು ಉತ್ತೇಜಿಸಲು 'ವೀಕೆಂಡ್ ಕಾರ್ನಿವಲ್'ನ್ನು ಅನುಷ್ಠಾನಗೊಳಿಸಿದೆ. ಈ ಕಾರ್ಯಕ್ರಮ ಜೂನ್ 8-9 ಹಾಗೂ ಜೂನ್ 15-16ರಂದು ಕಂಪನಿಯ ಡೀಲರ್‌ಶಿಪ್‌ಗಳಲ್ಲಿ ನಡೆಯಲಿದೆ. ಇದರ ಭಾಗವಾಗಿ ಸರಿ ಸುಮಾರು ರೂ.1.35 ಲಕ್ಷದವರೆಗೆ ವಿವಿಧ ಹಣಕಾಸು ಸೌಲಭ್ಯಗಳು ಗ್ರಾಹಕರಿಗೆ ಲಭ್ಯವಾಗಲಿವೆ.

Nissan Magnite Car Have Rs 1 35 Lakh Benefit Rs 6 Lakh Price 20 Km Mileage

ಈ ಹಣಕಾಸು ಪ್ರಯೋಜನಗಳು ಮ್ಯಾಗ್ನೈಟ್ ಎಸ್‌ಯುವಿಯ ಎಂಟಿ ಎಕ್ಸ್ಇ ಹಾಗೂ ಎಎಂಟಿ ಎಕ್ಸ್ಇ ಮಾದರಿಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿದುಬಂದಿದೆ. ವೀಕೆಂಡ್ ಕಾರ್ನಿವಲ್ ಸಂಬಂಧ ಯಾವುದೇ ಗೊಂದಲವಿದ್ದರೂ ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ. ಕಳೆದ ತಿಂಗಳು (ಮೇ) ಸಹ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಮಾರಾಟ ಪ್ರಮಾಣ ಏರಿಕೆಯಾಗಿದ್ದು, ಒಟ್ಟು 6204 ಎಸ್‌ಯುವಿಗಳನ್ನು ಮಾರಲಾಗಿದೆ. 2023ರ ಮೇ ತಿಂಗಳಿಗೆ ಹೋಲಿಸಿದರೆ (4631 ಯುನಿಟ್) 34% ಪ್ರಗತಿಯಾಗಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಆಕರ್ಷಕ ವಿನ್ಯಾಸವನ್ನು ಹೊಂದಿರುವ ಈ ಕಾರು, ಎಕ್ಸ್ಇ ಹಾಗೂ ಎಕ್ಸ್ಎಲ್ ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳನ್ನು ಹೊಂದಿದೆ. ಬ್ಲೇಡ್ ಸಿಲ್ವರ್, ಓನಿಕ್ಸ್ ಬ್ಲಾಕ್ ಮತ್ತು ಫ್ಲೇರ್ ಗಾರ್ನೆಟ್ ರೆಡ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Nissan Magnite Car Have Rs 1 35 Lakh Benefit Rs 6 Lakh Price 20 Km Mileage

ಈ ಕಾರು ಎರಡು ಪವರ್‌ಟ್ರೇನ್‌ನೊಂದಿಗೂ ಲಭ್ಯವಿದೆ. ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 96 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ ಮತ್ತು 160 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯು 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಜೊತೆಗೆ 17.40 ರಿಂದ 20 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹದು. ಪ್ರವಾಸ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

Nissan Magnite Car Have Rs 1 35 Lakh Benefit Rs 6 Lakh Price 20 Km Mileage

ನೂತನ ಮ್ಯಾಗ್ನೈಟ್ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, June 8, 2024, 16:50 [IST]
English summary
Nissan magnite car have rs 1 35 lakh benefit rs 6 lakh price 20 km mileage
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+