Nissan Magnite: ನಿಸ್ಸಾನ್ ಮ್ಯಾಗ್ನೆಟ್‌ನ ಈ ಮಾದರಿಗಳನ್ನು ಹಿಂಪಡೆಯಲು ನಿರ್ಧಾರ.. ಕಾರಣವೇನು?

ಜಪಾನ್ ಮೂಲದ ಪ್ರಖ್ಯಾತ ವಾಹನ ತಯಾರಕ ಕಂಪನಿ ನಿಸ್ಸಾನ್ (Nissan), ದೇಶೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ (Magnite) ಎಸ್‌ಯುವಿಯನ್ನು ಮಾರಾಟಗೊಳಿಸುತ್ತಿದೆ. ಇದರ ಮುಂಭಾಗದ ಡೋರ್ (ಬಾಗಿಲು) ಹ್ಯಾಂಡಲ್ ಸೇನಾರ್ಸ್ ನಲ್ಲಿ ದೋಷ ಕಂಡುಬಂದಿದೆ. ಮುನ್ನೆಚ್ಚರಿಕೆಯಾಗಿ ಅದನ್ನು ಸರಿಪಡಿಸಲು ಈ ಕಾರನ್ನು ಹಿಂಪಡೆಯುವುದಕ್ಕೆ ಕಂಪನಿಯು ತೀರ್ಮಾನಿಸಿದೆ.

ನಿಸ್ಸಾನ್ ಇಂಡಿಯಾ (Nissan India), ನವೆಂಬರ್ 2020 ರಿಂದ ಡಿಸೆಂಬರ್ 2023 ರವರಿಗೆ ತಯಾರಿಸಿದ ಆರಂಭಿಕ ಆವೃತ್ತಿ ಎಕ್ಸ್ಇ ಹಾಗೂ ಮಧ್ಯಮ ಶ್ರೇಣಿ ಎಕ್ಸ್ಎಲ್ ರೂಪಾಂತರಗಳನ್ನು ವಾಪಸ್ ಪಡೆಯಲಿದೆ. ಡಿಸೆಂಬರ್ 2023ರ ನಂತರ ಉತ್ಪಾದಿಸಿರುವ ಈ ರೂಪಾಂತರಗಳಿಗೆ ಹಿಂಪಡೆಯುವಿಕೆ ಅನ್ವಯಿಸುವುದಿಲ್ಲ. ಸ್ವತಃ ಕಂಪನಿ ಸಿಬ್ಬಂದಿ ಶೀಘ್ರದಲ್ಲಿ ಕಾರುಗಳ ಮಾಲೀಕರನ್ನು ಸಂಪರ್ಕಿಸಲಿದ್ದಾರೆ.

Nissan Magnite Car XE And XL Variants Recalled In India

ಈ ಮ್ಯಾಗ್ನೈಟ್ ಮಾದರಿಗಳ ಹಿಂಪಡೆಯುವಿಕೆಯು ವಾಹನವನ್ನು ಚಾಲನೆಯ ಮೇಲೆ ಯಾವುದೇ ರೀತಿಯ ಪರಿಣಾಮವನ್ನು ಬೀರುವುದಿಲ್ಲ ಎಂದು ನಿಸ್ಸಾನ್ ಸ್ಪಷ್ಟಪಡಿಸಿದೆ. ಹೊಸ ಸೇನಾರ್ಸ್ ಅನ್ನು ನಿಸ್ಸಾನ್ ಸರ್ವಿಸ್ ಸೆಂಟರ್ ನಲ್ಲಿ ಉಚಿತವಾಗಿ ಅಳವಡಿಸಲಾಗುತ್ತದೆ ಎಂದು ಕಂಪನಿ ಹೇಳಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ, ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ, ಎಕ್ಸ್ಇ, ಎಕ್ಸ್ಎಲ್, ಎಕ್ಸ್‌ವಿ ಎಕ್ಸಿಕ್ಯೂಟಿವ್ ಹಲವು ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದೆ. ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲಾಕ್, ಸ್ಯಾಂಡ್‌ಸ್ಟೋನ್ ಬ್ರೌನ್, ಸ್ಟಾರ್ಮ್ ವೈಟ್ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

Nissan Magnite Car XE And XL Variants Recalled In India

ಈ ಕಾರು ಎರಡು ಪೆಟ್ರೋಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 ಪಿಎಸ್ ಗರಿಷ್ಠ ಪವರ್ (ಶಕ್ತಿ), 96 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ 160 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ 5-ಸ್ವೀಡ್ ಮ್ಯಾನುವಲ್, 5-ಸ್ವೀಡ್ ಆಟೋಮೆಟಿಕ್/ ಸಿವಿಟಿ ಗೇರ್ ಬಾಕ್ಸ್ ನೊಂದಿಗೂ ಲಭ್ಯವಿದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರುವ ಈ ಕಾರು, 17.4 ಕೆಎಂಪಿಎಲ್ ರಿಂದ 20 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

ಈ ಎಸ್‌ಯುವಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ತ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, April 16, 2024, 18:17 [IST]
English summary
Nissan magnite car xe and xl variants recalled in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+