ಸದ್ದಿಲ್ಲದೇ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬುಕ್ಕಿಂಗ್ ಶುರು: ಅ.5 ರಿಂದಲೇ ವಿತರಣೆ.. 6.30 ಲಕ್ಷ ಬೆಲೆ?
ನಿಸ್ಸಾನ್ (Nissan) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಭಾರತದ ಮಾರುಕಟ್ಟೆಯಲ್ಲಿ 2020ರಲ್ಲಿ ಮ್ಯಾಗ್ನೆಟ್ ಕಾರನ್ನು ಪರಿಚಯಿಸಿತ್ತು. ಇದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ನಿಸ್ಸಾನ್ ಕಂಪನಿಯು ನವೀಕರಿಸಿದ ಅಂದರೆ 'ಮ್ಯಾಗ್ನೈಟ್ ಫೇಸ್‌ಲಿಫ್ಟ್' ಕಾರನ್ನು ಮಾರಾಟಕ್ಕೆ ತರಲು ಸಿದ್ಧತೆ ನಡೆಸುತ್ತಿದೆ. ನೂತನ ಎಸ್‌ಯುವಿಯನ್ನು ಅಕ್ಟೋಬರ್ 4 ರಂದು ಬಿಡುಗಡೆಗೊಳಿಸಲಿದೆ. ಇದೀಗ ನೂತನ ಕಾರಿನ ಬುಕ್ಕಿಂಗ್ ಶುರುವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಎಸ್‌ಯುವಿಯನ್ನು ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ಬುಕ್ಕಿಂಗ್‌ನ್ನು ಮಾಡಬಹುದು. ಈ ಕಾರಿನ ವಿತರಣೆಗಳು ಅಕ್ಟೋಬರ್ 5 ರಿಂದ ಅದ್ದೂರಿಯಾಗಿ ಪ್ರಾರಂಭವಾಗಲಿದೆ ಎಂದು ಕಂಪನಿಯೇ ಅಧಿಕೃತವಾಗಿ ದೃಢಪಡಿಸಿದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಕಾರು ಭಾರಿ ಕಡಿಮೆ ಬೆಲೆಗೆ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ಇದು ರೂ.6.30 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಈ ಎಸ್‌ಯುವಿಗೆ ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್, ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಕಿಯಾ ಸೋನೆಟ್, ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
ನಿಸ್ಸಾನ್ ಕಂಪನಿಯು ನವೀಕರಿಸಿದ ಮ್ಯಾಗ್ನೈಟ್ ಕಾರಿನ ವಿನ್ಯಾಸದ (ಡಿಸೈನ್) ಬಗ್ಗೆ ಟೀಸರ್ ಫೋಟೋಗಳ ಮೂಲಕ ಒಂದಷ್ಟು ವಿವರಗಳನ್ನು ಬಹಿರಂಗಪಡಿಸಿದೆ. ಈ ಎಸ್‌ಯುವಿ ಹೊರಭಾಗದ ವಿನ್ಯಾಸ ಬಹಳಷ್ಟು ಬದಲಾವಣೆಗಳನ್ನು ಹೊಂದಿರಲಿದ್ದು, ಅಲಾಯ್ ವೀಲ್‌ಗಳು, ಮುಂಭಾಗ (ಫ್ರಂಟ್) ವಿನೂತನವಾಗಿರುವ ಗ್ರಿಲ್ & ಲೈಟಿಂಗ್ ಸೆಟಪ್ ಅನ್ನು ಒಳಗೊಂಡಿರಲಿದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿ ಶಕ್ತಿಯುತ ಪವರ್‌ಟ್ರೇನ್ ಹೊಂದಿರುವ ನಿರೀಕ್ಷೆಯಿದೆ. ಬಹುತೇಕ ಪ್ರಸ್ತುತವಿರುವ ಲಭ್ಯವಿರುವ 'ಮ್ಯಾಗ್ನೈಟ್' ರೀತಿಯಲ್ಲಿಯೇ ಎಂಜಿನ್‌ನ್ನು ಪಡೆದಿರಲಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ & ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿರಬಹುದು ಎನ್ನಲಾಗಿದೆ.
ಹೊಸ ಕಾರು 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಜೊತೆಗೆ ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಸಿಂಗಲ್ ಪೇನ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಈ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿ ಪ್ರಯಾಣಿಕರ ಸುರಕ್ಷತೆಗಾಗಿ ಅತಿಹೆಚ್ಚಿನ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








