ದುಬಾರಿಯಾಗಲಿದೆ ಮಿಡಲ್ ಕ್ಲಾಸ್‌ ಜನರ ಮೆಚ್ಚಿನ ನಿಸ್ಸಾನ್ ಕಾರು

ಜಪಾನ್ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ನಿಸ್ಸಾನ್ (Nissan) ದೇಶೀಯ ಮಾರುಕಟ್ಟೆಯಲ್ಲಿ 2020ರಲ್ಲಿ ಮ್ಯಾಗ್ನೈಟ್ ಕಾರನ್ನು ಮೊದಲ ಬಾರಿಗೆ ಬಿಡುಗಡೆ ಮಾಡಿತ್ತು. ಇದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ತಿಂಗಳುಗಳ ಹಿಂದೆ ಈ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಕಾಂಪ್ಯಾಕ್ಟ್ ಎಸ್‍ಯುವಿಯು ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿತು. ಹೊಸ ನವೀಕರಣಗಳೊಂದಿಗೆ ಕಾಂಪ್ಯಾಕ್ಟ್ ಎಸ್‍ಯುವಿ ಕಾಂಪ್ಯಾಕ್ಟ್ ಎಸ್‍ಯುವಿಯು ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತಿದೆ ಈ ಹೊಸ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಭರ್ಜರಿ ಪರ್ಫಾಮೆನ್ಸ್ ಮತ್ತು ಆಕರ್ಷಕ ಫೀಚರ್ಸ್ ಗಳನ್ನು ಹೊಂದಿವೆ.

ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿತು. ನಿಸ್ಸಾನ್ ಮೋಟಾರ್ ಇಂಡಿಯಾ ಕಂಪನಿಯು ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ರೂ.5.99 ಲಕ್ಷ ಎಕ್ಸ್-ಶೋರೂಂನ ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆ ಮಾಡಿತು. ಇದು ಮೊದಲ 10,000 ಗ್ರಾಹಕರಿಗೆ ಅನ್ವಯಿಸುತ್ತದೆ. ಕುತೂಹಲಕಾರಿಯಾಗಿ, ಮ್ಯಾಗ್ನೈಟ್‌ನ ಪ್ರಿ-ಫೇಸ್‌ಲಿಫ್ಟ್ ಆವೃತ್ತಿಯು ಅದೇ ಎಕ್ಸ್-ಶೋರೂಮ್ ಆರಂಭಿಕ ಬೆಲೆಯನ್ನು ಹೊಂದಿದೆ.

Nissan Magnite

ಈಗ ಪರಿಚಯಾತ್ಮಕ ಬೆಲೆಯು ಅಂತ್ಯವಾಗುತ್ತಿದೆ ಮತ್ತು ಮ್ಯಾಗ್ನೈಟ್ ಫೇಸ್‌ಲಿಫ್ಟ್‌ನ ಬೆಲೆಗಳು ಶೇಕಡಾ 2 ರಷ್ಟು ಹೆಚ್ಚಾಗಲಿವೆ. ನಿಸ್ಸಾನ್ ಮ್ಯಾಗ್ನೈಟ್ ಎಸ್‍ಯುವಿಯು ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಮತ್ತು ಟೆಕ್ನಾ ಪ್ಲಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಈ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‍ಯುವಿಯ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಬೂಮರಾಂಗ್ ಆಕಾರಕ್ಕೆ ಹೋಲಿಕೆಯಾಗುವ ಡಿಆರ್‌ಎಲ್‌ಗಳು, ವಿನೂತನವಾಗಿರುವ ಗ್ರಿಲ್ ಹಾಗೂ ಸ್ವಲ್ಪ ಹೊಸದಾಗಿರುವ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಇದರೊಂದಿಗೆ 16-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿವೆ. ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್‌ನಲ್ಲಿ 5 ಜನರು ಸುಲಭವಾಗಿ ಸಂಚರಿಸಬಹುದು.

Nissan Magnite

ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, 4-ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ಫೀಚರ್ಸ್ ಗಳನ್ನು ಹೊಂದಿವೆ. ಈ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಈ ಎಸ್‍ಯುವಿಯಲ್ಲಿ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 72 ಪಿಎಸ್ ಪವರ್ ಹಾಗೂ 96 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಪಿಎಸ್ ಪವರ್ ಮತ್ತು 160 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

Nissan Magnite

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.4 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ. ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಈ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳು, ಆಟೋ ಡಿಮ್ಮಿಂಗ್ ಐಆರ್‌ವಿಎಂ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ. ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್‌ ಎಸ್‌ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ರೆನಾಲ್ಟ್ ಕಿಗರ್, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟೊಯೊಟಾ ಟೈಸರ್ ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್‌ ಎಸ್‍ಯುವಿಗಳು ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Sunday, December 8, 2024, 13:00 [IST]
English summary
Nissan magnite facelift introductory prices ends to get price hike soon details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+