ಬಹುನೀರಿಕ್ಷಿತ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಿಡುಗಡೆ.. 5.99 ಲಕ್ಷ.. 5-ಸೀಟರ್, ಭರ್ಜರಿ ಫೀಚರ್‌ಗಳು!
ಜಪಾನ್ ದೇಶಕ್ಕೆ ಸೇರಿದ ನಿಸ್ಸಾನ್ (Nissan), ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಭಾರತದ ಮಾರುಕಟ್ಟೆಯಲ್ಲಿ 2020ರಲ್ಲಿ ಮ್ಯಾಗ್ನೈಟ್ (Magnite) ಕಾರನ್ನು ಪರಿಚಯಿಸಿತ್ತು. ಇದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇಂದು (ಶುಕ್ರವಾರ) ಈ ಕಾರಿನ ಫೇಸ್‌ಲಿಫ್ಟ್ ಅಂದರೆ ನವೀಕರಿಸಿದ ಮಾದರಿಯನ್ನು (ಮಾಡೆಲ್) ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ಬನ್ನಿ.. ನೂತನ ಕಾರಿನ ಬೆಲೆ (Price), ಕಾರ್ಯಕ್ಷಮತೆ (Performance) ಮತ್ತು ವೈಶಿಷ್ಟ್ಯಗಳ (Features) ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ಬೆಲೆ: ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಎಸ್‌ಯುವಿ, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ರೂ.5.99 ಲಕ್ಷದಿಂದ ರೂ.11.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಮತ್ತು ಟೆಕ್ನಾ ಪ್ಲಸ್ ಎಂಬ 6 ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಆಕರ್ಷಕವಾದ ಬಣ್ಣಗಳೊಂದಿಗೂ ಲಭ್ಯವಿದೆ.

ವಿನ್ಯಾಸ: ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಬೂಮರಾಂಗ್ ಆಕಾರಕ್ಕೆ ಹೋಲಿಕೆಯಾಗುವ ಡಿಆರ್‌ಎಲ್‌ಗಳು, ವಿನೂತನವಾಗಿರುವ ಗ್ರಿಲ್ ಹಾಗೂ ಸ್ವಲ್ಪ ಹೊಸದಾಗಿರುವ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಜೊತೆಯಲ್ಲಿ 16-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಕಾರ್ಯಕ್ಷಮತೆ: ನೂತನ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅದು ಹಿಂದಿನ ಮಾದರಿಯಂತೆಯೇ ಇದೆ. ಈ ಕಾರಿನ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.4 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.
ಆಸನ ಆಯ್ಕೆ & ವೈಶಿಷ್ಟ್ಯಗಳು: ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್‌ನಲ್ಲಿ 5 ಜನರು ಸುಲಭವಾಗಿ ಸಂಚರಿಸಬಹುದು. ಇದು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, 4-ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳು, ಆಟೋ ಡಿಮ್ಮಿಂಗ್ ಐಆರ್‌ವಿಎಂ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.
ಪ್ರತಿಸ್ಪರ್ಧಿ ಕಾರುಗಳು: ಹೊಸ ಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿಗೆ ರೆನಾಲ್ಟ್ ಕಿಗರ್, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟೊಯೊಟಾ ಟೈಸರ್ ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications