Nissan: ಹೊಸ ನಿಸ್ಸಾನ್ ಮ್ಯಾಗ್ನೈಟ್ ಗೆಜಾ ಸಿವಿಟಿ ಸ್ಪೆಷಲ್ ಎಡಿಷನ್ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಸಂಸ್ಥೆ ನಿಸ್ಸಾನ್ (Nissan), ದೇಶೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ (Magnite) ಎಸ್‌ಯುವಿಯನ್ನು 2020ರಿಂದ ಮಾರಾಟಗೊಳಿಸುತ್ತಿದೆ. ಈ ಕಾರಿನ ಸ್ಪೆಷಲ್ ಎಡಿಷನ್‌ನ್ನು ಗುರುವಾರ ಆದ್ದೂರಿಯಾಗಿ ಬಿಡುಗಡೆ ಮಾಡಿದೆ. ಇದು ನೂತನ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.
ಸದ್ಯ ಪರಿಚಯಿಸಲಾಗಿರುವ ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಗೆಜಾ ಸಿವಿಟಿ ಸ್ಪೆಷಲ್ ಎಡಿಷನ್ (Nissan Magnite Geza CVT Special Edition) ಕಾರು, ರೂ.9.84 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 99 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 152 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಸಿವಿಟಿ (ಕಂಟಿನ್ಯೂಸ್ಲಿ ವೇರಿಯಬಲ್ ಟ್ರಾನ್ಸ್‌ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ನಿಸ್ಸಾನ್ ಮ್ಯಾಗ್ನೈಟ್ ಗೆಜಾ ಸಿವಿಟಿ ಸ್ಪೆಷಲ್ ಎಡಿಷನ್, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಂಬಿಯೆಂಟ್ ಲೈಟ್‌ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, 'ಗೆಜಾ' ಬ್ಯಾಡ್ಜ್‌ಗಳು ಹಾಗೂ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ದೇಶೀಯವಾಗಿ ಖರೀದಿಗೆ ಲಭ್ಯವಿರುವ ನಿಸ್ಸಾನ್ ಮ್ಯಾಗ್ನೈಟ್ ಸಾಮಾನ್ಯ ರೂಪಾಂತರ (ವೇರಿಯೆಂಟ್)ಗಳು ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿವೆ. ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್ ಹಾಗೂ ಓನಿಕ್ಸ್ ಬ್ಲಾಕ್ ಸೇರಿದಂತೆ ನಯನ ಮನೋಹರವಾಗಿರುವ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತವೆ. ಇವುಗಳಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು.

ಈ ಮಾದರಿಗಳು 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಪವರ್‌ಟ್ರೇನ್‌ನ್ನು ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್/ ಸಿವಿಟಿ ಗೇರ್‌ಬಾಕ್ಸ್‌ನೊಂದಿಗೂ ದೊರೆಯುತ್ತವೆ. ಇಂಧನ ದಕ್ಷತೆ (Fuel Efficiency) ವಿಚಾರವಾಗಿ ಹೇಳುವುದಾದರೆ, 17.4 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಲ್ಲವು. ಜೊತೆಗೆ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿವೆ.
ನಿಸ್ಸಾನ್ ಮ್ಯಾಗ್ನೈಟ್ ರೂಪಾಂತರಗಳು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿವೆ.

ಇನ್ನು, ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯು ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕಿಗರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300ನಂತಹ ದೊಡ್ಡ ಪ್ರತಿಸ್ಪರ್ಧಿಗಳನ್ನು ಹೊಂದಿದ್ದರೂ ಮಾರಾಟದಲ್ಲಿ ಮಾತ್ರ ಹಿಂದೆ ಬಿದ್ದಿಲ್ಲ. ಕಳೆದ ತಿಂಗಳು ಲಭ್ಯವಾದ ಮಾಹಿತಿ ಪ್ರಕಾರ, 1 ಲಕ್ಷಕ್ಕೂ ಹೆಚ್ಚಿನ ಖರೀದಿದಾರರು ಈ ಕಾರನ್ನು ಕೊಂಡುಕೊಂಡಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








