Nissan: ನಿಸ್ಸಾನ್ ಮ್ಯಾಗ್ನೈಟ್ ಕಾರಿಗಾಗಿ ಮುಗಿಬಿದ್ದ ಗ್ರಾಹಕರು, 1 ಲಕ್ಷ ಯುನಿಟ್ ಮಾರಾಟ.. 6 ಲಕ್ಷ ಬೆಲೆ

ನಿಸ್ಸಾನ್ ಇಂಡಿಯಾ (Nissan India), ಭಾರತದಲ್ಲಿ ಮಾರಾಟಗೊಳಿಸುವ ಏಕೈಕ ಎಸ್‌ಯುವಿಯಾಗಿ ಮ್ಯಾಗ್ನೈಟ್ (Magnite) ಜನಪ್ರಿಯತೆ ಗಳಿಸಿದೆ. ಸದ್ಯ, ಇದೇ ಕಾರಿನ ಸೇಲ್‌ನಲ್ಲಿ ಕಂಪನಿಯು ಐತಿಹಾಸಿಕ ದಾಖಲೆಯನ್ನು ನಿರ್ಮಾಣ ಮಾಡಿದೆ. ಈ ಮೂಲಕ ನಿಸ್ಸಾನ್ ಮ್ಯಾಗ್ನೈಟ್ ಗೇಮ್ ಚೆಂಜರ್ ಎಸ್‌ಯುವಿಯಾಗಿ ಹೊರಹೊಮ್ಮಿದೆ.

ದೇಶೀಯ ಮಾರುಕಟ್ಟೆಯಲ್ಲಿ 2020ರಲ್ಲಿ ರೂ.4.99 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಬಿಡುಗಡೆಗೊಂಡ ಸಬ್-ಫೋರ್ ಮೀಟರ್ ಎಸ್‌ಯುವಿ ನಿಸ್ಸಾನ್ ಮ್ಯಾಗ್ನೈಟ್, ಅಂದಿನಿಂದ ಇಂದಿನವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇಲ್ ಆಗಿದೆ. ಕಂಪನಿಯು ಈ ಕಾರಿನ 1 ಲಕ್ಷ ಯುನಿಟ್ ಮಾರಾಟಗೊಳಿಸಿ, ದೊಡ್ಡ ಮೈಲಿಗಲ್ಲನ್ನು ಸಾಧಿಸಿದೆ. ಇದರೊಟ್ಟಿಗೆ 'ನಿಸ್ಸಾನ್ ಒನ್' ವೆಬ್ ಪ್ಲಾಟ್‌ಫಾರ್ಮ್‌ನ್ನು ಕೂಡ ಪರಿಚಯಿಸಿದೆ.

Nissan Magnite Suv Crosses 1 Lakh Unit Sales Milestone: 6 Lakh Price

ಈ ಪ್ಲಾಟ್‌ಫಾರ್ಮ್ ಮೂಲಕ ಹಳೆಯ ಹಾಗೂ ಹೊಸ ನಿಸ್ಸಾನ್ ಗ್ರಾಹಕರು, ವಿವಿಧ ಸೌಲಭ್ಯವನ್ನು ಪಡೆಯಬಹುದು. ಪರೀಕ್ಷಾರ್ಥ ಸಂಚಾರಕ್ಕೆ (ಟೆಸ್ಟ್ ಡ್ರೈವ್) ಮನವಿ ಸಲ್ಲಿಸುವುದು. ನೂತನ ಕಾರನ್ನು ಬುಕ್ಕಿಂಗ್ ಮಾಡುವುದು. ಡೀಲರ್‌ನ್ನು ಹುಡುಕುವುದು, ಸರ್ವಿಸ್ ಒಳಗೊಂಡಂತೆ ಹಲವು ಸೇವೆಗಳು ಲಭ್ಯವಿರಲಿದೆ. ಈ ನಿಸ್ಸಾನ್ ಒನ್ ವೆಬ್‌ಗೆ ಇ-ಮೇಲ್ ಐಡಿ ಬಳಸಿ, ಲಾಗಿಂಗ್ ಆಗಬಹುದು.

ಪ್ರಸ್ತುತ ಭಾರತದಲ್ಲಿ ಖರೀದಿಗೆ ದೊರೆಯುವ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ, ರೂ.6 ಲಕ್ಷದಿಂದ ರೂ.11.02 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್ಇ, ಎಕ್ಸ್ಎಲ್, ಎಕ್ಸ್‌ವಿ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ರೂಪಾಂತರಗಳು ಮತ್ತು ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲಾಕ್, ಸ್ಯಾಂಡ್‌ಸ್ಟೋನ್ ಬ್ರೌನ್, ಸ್ಟಾರ್ಮ್ ವೈಟ್ ಒಳಗೊಂಡಂತೆ 4-ಡುಯಲ್ ಟೋನ್, 5-ಮೊನೊ ಟೋನ್ ಬಣ್ಣಗಳೊಂದಿಗೆ ಸಿಗುತ್ತದೆ.

Nissan Magnite Suv Crosses 1 Lakh Unit Sales Milestone: 6 Lakh Price

ಈ ಕಾರು 2 ಪೆಟ್ರೋಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 ಪಿಎಸ್ ಗರಿಷ್ಠ ಪವರ್, 96 ಎನ್ಎಂ ಪೀಕ್ ಟಾರ್ಕ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ (ಶಕ್ತಿ), 160 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 5-ಸ್ವೀಡ್ ಆಟೋಮೆಟಿಕ್/ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 17.4 ರಿಂದ 20 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಹೆಚ್ಚು ಅತ್ಯಾಧುನಿಕವಾಗಿದೆ.

Nissan Magnite Suv Crosses 1 Lakh Unit Sales Milestone: 6 Lakh Price

ಈ ಕಾರು, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಏರ್ ಪ್ಯೂರಿಫೈಯರ್, ಜೆಬಿಎಲ್ ಸ್ಪೀಕರ್‌, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದ ನಿಸ್ಸಾನ್ ಮ್ಯಾಗ್ನೈಟ್, ಡುಯಲ್ ಫ್ರಂಟ್ ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ಹಿಲ್ - ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್ ಹಾಗೂ ಸಿಟ್ರಸ್ ಸಿ3 ದೊಡ್ಡ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

More from DriveSpark

Article Published On: Tuesday, February 13, 2024, 12:02 [IST]
English summary
Nissan magnite suv crosses 1 lakh unit sales milestone 6 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+