Nissan Magnite: 20 ಕಿ.ಮೀ ಮೈಲೇಜ್‌ನ 'ನಿಸ್ಸಾನ್ ಮ್ಯಾಗ್ನೈಟ್' ದರ ಏರಿಕೆ, ಆದರೂ ಗ್ರಾಹಕರು ನಿರಾಳ!
ಭಾರತದಲ್ಲಿ ನಿಸ್ಸಾನ್ (Nissan) ಮಾರಾಟಗೊಳಿಸುವ ಏಕೈಕ ಎಸ್‌ಯುವಿ, ಮ್ಯಾಗ್ನೈಟ್ (Magnite) ಬೆಲೆ ಕೊಂಚ ಏರಿಕೆಯಾಗಿದೆ. ನೂತನ ದರಗಳು ಜನವರಿ 1ರ ನಂತರ ಈ ಕಾರನ್ನು ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಅನ್ವಯಿಸುತ್ತದೆ. ಕಳೆದ ತಿಂಗಳು, ಮ್ಯಾಗ್ನೈಟ್ ಬೆಲೆ ಹೆಚ್ಚಳ ಮಾಡುವುದಾಗಿ ಕಂಪನಿಯೇ ಮಾಹಿತಿ ನೀಡಿತ್ತು.
ದೇಶೀಯ ಮಾರುಕಟ್ಟೆಯಲ್ಲಿ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ, ಎಕ್ಸ್ಇ, ಎಕ್ಸ್ಎಲ್, ಎಕ್ಸ್‌ವಿ, ಎಕ್ಸ್‌ವಿ ಪ್ರೀಮಿಯಂ, ಕುರೋ ಎಡಿಷನ್, ಗೆಝಾ ಎಡಿಷನ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ಆಯ್ದ ರೂಪಾಂತರಗಳನ್ನು ಹೊರತುಪಡಿಸಿ, ಉಳಿದೆಲ್ಲ ಮಾದರಿಗಳ ಬೆಲೆ ರೂ.1,000 ರಿಂದ ರೂ. 25,000 ವರೆಗೆ ಹೆಚ್ಚಳವಾಗಿದೆ.

ಸದ್ಯ, ನಿಸ್ಸಾನ್ ಮ್ಯಾಗ್ನೈಟ್ ರೂಪಾಂತರಗಳಿಗೆ ಅನುಗುಣವಾಗಿ ರೂ.6 ಲಕ್ಷದಿಂದ ರೂ.11.11 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲಾಕ್, ಸ್ಯಾಂಡ್‌ಸ್ಟೋನ್ ಬ್ರೌನ್ ಸೇರಿದಂತೆ 4-ಡುಯಲ್ ಟೋನ್, 5-ಮೊನೊಟೋನ್ ಬಣ್ಣಗಳೊಂದಿಗೆ 5 ಆಸನ ಆಯ್ಕೆಯಲ್ಲಿ ಸಿಗುತ್ತದೆ.
ಈ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಗ್ರಾಹಕರಿಗೆ ದೊರೆಯಲಿದ್ದು, ಇದರ 1 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 PS ಪವರ್, 96 Nm ಪೀಕ್ ಟಾರ್ಕ್, 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 PS ಗರಿಷ್ಠ ಪವರ್, 160 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ, ರೂಪಾಂತರಗಳಿಗೆ ತಕ್ಕಂತೆ 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಮೈಲೇಜ್ ಬಗ್ಗೆ ಮಾತನಾಡುವುದಾದರೆ, 17.40 kmpl ನಿಂದ 20 kmpl ಇಂಧನ ದಕ್ಷತೆಯನ್ನು ಹೊಂದಿದೆ. ವಿನ್ಯಾಸದ ವಿಚಾರದಲ್ಲೂ ಈ ಕಾರಿಗೆ ಸರಿ ಸಾಟಿಯೇ ಇಲ್ಲ ಎಂದು ಹೇಳಬಹುದು.
ಈ ನಿಸ್ಸಾನ್ ಮ್ಯಾಗ್ನೈಟ್ ಪಡೆದುಕೊಂಡಿರುವ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಇದು 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಏರ್ ಪ್ಯೂರಿಫೈಯರ್, ಜೆಬಿಎಲ್ ಸ್ಪೀಕರ್‌ಗಳು, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ಫೀಚರ್ಸ್ ಪಡೆದಿದೆ.
ಸುರಕ್ಷತೆಯ ವಿಚಾರದಲ್ಲಿ ಈ ಕಾರು ಅತ್ಯಾಧುನಿಕವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, 360 - ಡಿಗ್ರಿ ಕ್ಯಾಮೆರಾ, ಹಿಲ್ - ಸ್ಟಾರ್ಟ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಇನ್ನು, ನಿಸ್ಸಾನ್ ಕಂಪನಿ ತನ್ನ ಏಕೈಕ ಕಾರು 'ಮ್ಯಾಗ್ನೈಟ್' ಬೆಲೆಯನ್ನು ಕೊಂಚವೇ ಏರಿಕೆ ಮಾಡುವುದು ಗ್ರಾಹಕರಿಗೆ ನೆಮ್ಮದಿಯನ್ನು ತಂದಿದೆ. ಈ ಎಸ್‌ಯುವಿ ಆಕರ್ಷಕ ವಿನ್ಯಾಸ, ವೈಶಿಷ್ಟ್ಯ ಕೈಗೆಟುಕುವ ದರದಲ್ಲಿ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಮುಂಬರುವ ಕೆಲವೇ ದಿನಗಳಲ್ಲಿ ಸಂಕ್ರಾಂತಿ ಹಬ್ಬ ಬರುವುದರಿಂದ ಈ ಕಾರಿಗೆ ಮತ್ತಷ್ಟು ಬೇಡಿಕೆ ಬರಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








