ಟೊಯೊಟಾ ಫಾರ್ಚೂನರ್‌ಗೆ ಸೆಡ್ಡು ಹೊಡೆಯಲು ಬಂದ ಈ ಕಾರನ್ನು ಯಾರು ಖರೀದಿಸುತ್ತಿಲ್ಲ: ಯಾಕೆ ಗೊತ್ತಾ?
ಜಪಾನ್ ಮೂಲದ ನಿಸ್ಸಾನ್ (Nissan) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಈ ನಿಸ್ಸಾನ್ ಕಂಪನಿಯು ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ ಮತ್ತು ಎಕ್ಸ್-ಟ್ರಯಲ್ ಎಂಬ ಎರಡೂ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇದರಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಇನ್ನು ಇದರ ಎಕ್ಸ್-ಟ್ರಯಲ್ ಫುಲ್ ಎಸ್‍ಯುವಿ ಮಾದರಿಯಾಗಿದೆ. ಫುಲ್ ಸೈಜ್ ಎಸ್‌ಯುವಿ (Full Size Suv) ವಿಭಾಗದಲ್ಲಿ ದಿಗ್ಗಜ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಸಾಧಿಸುತ್ತಿದೆ. ಪ್ರತಿ ತಿಂಗಳಿನಲ್ಲೂ, ಫುಲ್ ಸೈಜ್ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆಯುತ್ತಿದೆ.
ನಿಸ್ಸಾನ್ ಎಕ್ಸ್-ಟ್ರಯಲ್ (Nissan X-Trail) 10 ವರ್ಷಗಳ ನಂತರ ಸಂಪೂರ್ಣವಾಗಿ ನಿರ್ಮಿಸಲಾದ ಯುನಿಟ್ ಆಗಿ ಭಾರತಕ್ಕೆ ಬರುತ್ತಿದೆ. ಇದು CBU ಆಗಿ ಬರುವುದರಿಂದ, ನಿಸ್ಸಾನ್ ಕಾರಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಇದರಿಂದ ಈ ಎಸ್‍ಯುವಿಯ ಮಾರಾಟದ ಮೇಲೆ ಪರಿಣಾಮ ಬೀರಿದೆ. ಈ ನಿಸ್ಸಾನ್ ಕಾರು ಮಾರುಕಟ್ಟೆಗೆ ಬಂದು ನಾಲ್ಕು ತಿಂಗಳ ನಂತರ ಕೇವಲ 21 ಯುನಿಟ್‌ಗಳು ಮಾತ್ರ ಮಾರಾಟವಾಗಿತ್ತು.

ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಫುಲ್ ಸೈಜ್ ಎಸ್‍ಯುವಿಯ ಯಾವುದೇ ಯುನಿಟ್ ಗಳು ಮಾರಾಟವಾಗಿಲ್ಲ. ಈ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.49.92 ಲಕ್ಷವಾಗಿದೆ. ಈ ಎಕ್ಸ್-ಟ್ರಯಲ್ ಎಸ್‌ಯುವಿಗೆ ಟೊಯೊಟಾ ಫಾರ್ಚುನರ್, ಜೀಪ್ ಮೆರಿಡಿಯನ್, ಎಂಜಿ ಗ್ಲೋಸ್ಟರ್, ಹ್ಯುಂಡೈ ಟಕ್ಸನ್, ಮಹೀಂದ್ರಾ ಎಕ್ಸ್‌ಯುವಿ700 ಹಾಗೂ ಟಾಟಾ ಸಫಾರಿಗಳು ದೊಡ್ಡ ಎದುರಾಳಿಯಾಗಿವೆ.
ನಿಸ್ಸಾನ್ ಎಕ್ಸ್-ಟ್ರಯಲ್ ಅತ್ಯಾಧುನಿಕ ವಿನ್ಯಾಸ ಹೊಂದಿದೆ. ಹೊರಭಾಗದಲ್ಲಿ ನವೀನ ಗ್ರಿಲ್, ಎಲ್ಇಡಿ ಹೆಡ್‌ಲೈಟ್‌ಗಳು, 20-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು 255/40 ಅಳತೆಯ ಟೈರ್‌ಗಳನ್ನು ಒಳಗೊಂಡಿದೆ. ಒಳಭಾಗದ ವಿನ್ಯಾಸ ಸಹ ಅತ್ಯುತ್ತಮವಾಗಿದೆ. ಸಿಎಂಎಫ್-ಸಿ ಫ್ಲಾಟ್‌ಫಾರಂ ಆಧರಿಸಿದ್ದು, 4,680 ಎಂಎಂ ಉದ್ದ, 1,840 ಎಂಎಂ ಅಗಲ ಹಾಗೂ 1,725 ಎಂಎಂ ಎತ್ತರವಿದೆ. ಜೊತೆಗೆ 2,705 ಎಂಎಂ ವೀಲ್‌ಬೇಸ್ ಅನ್ನು ಹೊಂದಿದೆ.

ಈ ನಿಸ್ಸಾನ್ ಎಕ್ಸ್-ಟ್ರಯಲ್ 1.5-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 12ವಿ ಮೈಲ್ಡ್-ಹೈಬ್ರಿಡ್ ಸಿಸ್ಟಮ್‌ನೊಂದಿಗೆ ಜೋಡಿಸಲಾಗಿದೆ. ಇದು 160 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಇಕೋ, ಸ್ಟ್ಯಾಂಡರ್ಡ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.
ಈ ಎಕ್ಸ್-ಟ್ರಯಲ್ ಎಸ್‍ಯುವಿಯಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಡಿಮ್ಮಿಂಗ್ ಐಆರ್‌ವಿಎಂ, ವೈರ್‌ಲೆಸ್ ಚಾರ್ಜರ್, ಡುಯಲ್ ಪೇನ್ ಪನೋರಮಿಕ್ ಸನ್‌ರೂಫ್ ಹಾಗೂ ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್‌ಗಳನ್ನು ಪಡೆದಿದೆ.

ಈಎಕ್ಸ್-ಟ್ರಯಲ್ ಎಸ್‍ಯುಯಲ್ಲಿ ಗರಿಷ್ಠ ರಕ್ಶಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 7 ಏರ್‌ಬ್ಯಾಗ್, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್) ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ವಿಡಿಸಿ (ವೆಹಿಕಲ್ ಡೈನಾಮಿಕ್ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








