ಖುಷಿ ಸುದ್ದಿ: ಬೆಂಗಳೂರಿನಲ್ಲಿ ಹೊಸ ನಿಸ್ಸಾನ್ ಫ್ಯಾಮಿಲಿ ಕಾರಿನ ವಿತರಣೆ ಶುರು.. 7-ಸೀಟರ್, ಬೆಲೆ ಎಷ್ಟು?
ಜಪಾನ್ ಮೂಲದ ನಿಸ್ಸಾನ್ (Nissan) ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಮನೆ ಮಾತಾಗಿದೆ. ತಿಂಗಳಾರಂಭದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಎಕ್ಸ್-ಟ್ರಯಲ್ (X-Trail) ಕಾರನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಇದೊಂದು ಫುಲ್-ಸೈಜ್ ಎಸ್‌ಯುವಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನೂತನ ಕಾರಿನ ವಿತರಣೆ ಶುರುವಾಗಿದ್ದು, ಈ ಕಾರನ್ನು ತೆಗೆದುಕೊಂಡ ಗ್ರಾಹಕರ ಸಂಭ್ರಮ ಇಮ್ಮಡಿಯಾಗಿದೆ. ಜೊತೆಗೆ ಕಂಪನಿಯು ತನ್ನ ಮಾರಾಟ ಜಾಲದ ವಿಸ್ತರಣೆ ಭಾಗವಾಗಿ ನಗರದಲ್ಲಿ 3 ಹೊಸ ಕನ್ಸೂಮರ್ ಟಚ್‌ಪಾಯಿಂಟ್‌ಗಳನ್ನು ಸಹ ಆರಂಭಿಸಿದೆ. ಬನ್ನಿ.. ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‌ಯುವಿ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ನೂತನ ನಿಸ್ಸಾನ್ ಎಕ್ಸ್-ಟ್ರಯಲ್ (Nissan X-Trail) ಎಸ್‌ಯುವಿ ರೂ.49.92 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಕೇವಲ 1 ರೂಪಾಂತರದ (ವೇರಿಯೆಂಟ್) ಆಯ್ಕೆ ಮಾತ್ರ ಹೊಂದಿದ್ದು, 7 ಆಸನ ವ್ಯವಸ್ಥೆಯನ್ನು ಒಳಗೊಂಡಿದೆ. ಪರ್ಲ್ ವೈಟ್, ಡೈಮಂಡ್ ಬ್ಲ್ಯಾಕ್ ಮತ್ತು ಷಾಂಪೇನ್ ಸಿಲ್ವರ್ ಎಂಬ 3 ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಎಕ್ಸ್-ಟ್ರಯಲ್ ಕಾರು ಅತ್ಯಾಧುನಿಕ ವಿನ್ಯಾಸ (ಡಿಸೈನ್) ಹೊಂದಿದೆ. ಹೊರಭಾಗದಲ್ಲಿ ಆಕರ್ಷಕ ಗ್ರಿಲ್, ಎಲ್ಇಡಿ ಹೆಡ್‌ಲೈಟ್‌ಗಳು, 20-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು 255/40 ಅಳತೆಯ ಟೈರ್‌ಗಳನ್ನು ಪಡೆದಿದೆ. ಒಳಭಾಗದ ವಿನ್ಯಾಸ ಕೂಡ ಉತ್ತಮವಾಗಿದೆ. ಸಿಎಂಎಫ್-ಸಿ ಫ್ಲಾಟ್‌ಫಾರಂನ್ನು ಆಧರಿಸಿದ್ದು, 4,680 ಎಂಎಂ ಉದ್ದ, 1,840 ಎಂಎಂ ಮತ್ತು 1,725 ಎಂಎಂ ಎತ್ತರವಿದೆ. 2,705 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನಿಸ್ಸಾನ್ ಎಕ್ಸ್-ಟ್ರಯಲ್ ಕಾರು 1.5-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 12ವಿ ಮೈಲ್ಡ್-ಹೈಬ್ರಿಡ್ ಸಿಸ್ಟಮ್‌ನೊಂದಿಗೂ ಜೋಡಿಸಲಾಗಿದೆ. 160 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಮತ್ತು 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಇಕೋ, ಸ್ಟ್ಯಾಂಡರ್ಡ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.
ಈ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಡಿಮ್ಮಿಂಗ್ ಐಆರ್‌ವಿಎಂ, ವೈರ್‌ಲೆಸ್ ಚಾರ್ಜರ್, ಡುಯಲ್-ಪೇನ್ ಪನೋರಮಿಕ್ ಸನ್‌ರೂಫ್ ಮತ್ತು ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್‌ಗಳನ್ನು ಹೊಂದಿದೆ.
ಹೊಸ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಅದಕ್ಕಾಗಿ 7 ಏರ್‌ಬ್ಯಾಗ್, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್) ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ವಿಡಿಸಿ (ವೆಹಿಕಲ್ ಡೈನಾಮಿಕ್ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‌ಯುವಿಗೆ ಟೊಯೊಟಾ ಫಾರ್ಚುನರ್, ಜೀಪ್ ಮೆರಿಡಿಯನ್, ಎಂಜಿ ಗ್ಲೋಸ್ಟರ್, ಹ್ಯುಂಡೈ ಟಕ್ಸನ್, ಮಹೀಂದ್ರಾ ಎಕ್ಸ್‌ಯುವಿ700 ಹಾಗೂ ಟಾಟಾ ಸಫಾರಿಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ. ನೀವು ಈ ಕಾರನ್ನು ಮನೆಗೆ ತರಬೇಕು ಅಂದುಕೊಂಡರೆ ರೂ.1 ಲಕ್ಷ ಮುಂಗಡ ಹಣವನ್ನು ಪಾವತಿಸುವ ಮೂಲಕ ಬುಕ್ಕಿಂಗ್ ಮಾಡಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








