ಪೆಟ್ರೋಲ್‌ಗೆ ಹೇಳಿ ಗುಡ್‌ಬೈ.. ಬೆಂಗಳೂರಿನ ಒಬೆನ್‍ನಿಂದ 89,999ಕ್ಕೆ ಹೊಸ ಇ-ಬೈಕ್ ಬಿಡುಗಡೆ: ವಿಶೇಷತೆಗಳೇನು?
ಬೆಂಗಳೂರು ಮೂಲದ ಒಬೆನ್ ಎಲೆಕ್ಟ್ರಿಕ್ (Oben Electric), ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿ ಹೊರಹೊಮ್ಮುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುತ್ತಿರುವ 'ರೋರ್' ಜನಪ್ರಿಯ ಇ-ಬೈಕ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಕಂಪನಿಯು ಅತಿಕಡಿಮೆ ಬೆಲೆಗೆ ಇದೇ ಮೋಟಾರ್‌ಸೈಕಲ್‌ನ ಹೊಸ ರೂಪಾಂತರವನ್ನು (ವೇರಿಯೆಂಟ್) ಮಾರಾಟಕ್ಕೆ ತಂದಿದೆ. ಇದು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರೊಂದಿಗೆ ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬನ್ನಿ.. ಈ ನೂತನ ಎಲೆಕ್ಟ್ರಿಕ್ ಬೈಕ್‌ನ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ಒಬೆನ್ ಕಂಪನಿಯು ಹೊಚ್ಚ ಹೊಸ ರೋರ್ ಇಝಡ್ (Rorr EZ) ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಮಾರಾಟಕ್ಕೆ ತಂದಿದೆ. ಇದು ಹಲವು ವಿಧದಲ್ಲಿ ಖರೀದಿಗೆ ದೊರೆಯಲಿದ್ದು, ರೂ.89,999 ರಿಂದ ರೂ.109,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ರೂ.2,999 ಹಣವನ್ನು ಮುಂಗಡವಾಗಿ ಪಾವತಿಸುವ ಮೂಲಕ ಈ ಎಲೆಕ್ಟ್ರಿಕ್ ಬೈಕ್‌ನ್ನು ಕಾಯ್ದಿರಿಸಬಹುದು.

ಹೊಸ ಎಲೆಕ್ಟ್ರಿಕ್ ಬೈಕ್‌ನ 2.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಹೊಂದುರುವ ಮಾದರಿ (ಮಾಡೆಲ್), ಸಂಪೂರ್ಣ ಚಾರ್ಜ್‌ನಲ್ಲಿ 110 ಕಿಲೋಮೀಟರ್‌ವರೆಗೆ (ಮೈಲೇಜ್) ರೇಂಜ್ ನೀಡುತ್ತದೆ. ಈ ಬ್ಯಾಟರಿ ಪ್ಯಾಕ್ ಭರ್ತಿ ಚಾರ್ಜ್ ಆಗಲು 45 ನಿಮಿಷಗಳು ಬೇಕಾಗುತ್ತದೆ. 3.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಮಾದರಿ, ಪೂರ್ತಿ ಚಾರ್ಜ್‌ನಲ್ಲಿ 140 ಕಿಲೋಮೀಟರ್‌ವರೆಗೆ ಓಡುತ್ತದೆ. ಈ ಬ್ಯಾಟರಿಯು 1.30 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗಿಬಿಡುತ್ತದೆ.
4.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಒಳಗೊಂಡಿರುವ ಮಾದರಿ, ಸಂಪೂರ್ಣ ಚಾರ್ಜ್‌ನಲ್ಲಿ 75-ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ. ಈ ಬ್ಯಾಟರಿ ಪ್ಯಾಕ್ ಪೂರ್ತಿ ಚಾರ್ಜ್ ಆಗುವುದಕ್ಕೆ 2 ಗಂಟೆ ತೆಗೆದುಕೊಳ್ಳುತ್ತದೆ. ಈ ನೂತನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದ್ದು, 3.3 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ ಒಬೆನ್ ರೋರ್ ಇಝಡ್ (Oben Rorr EZ) ಎಲೆಕ್ಟ್ರಿಕ್ ಬೈಕ್, 'ಐಪಿ67' ಪ್ರಮಾಣೀಕೃತ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ 52 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲು ಶಕ್ತವಾಗಿದ್ದು, ಆಕರ್ಷಕ ವಿನ್ಯಾಸವನ್ನು ಪಡೆದಿದೆ. ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಡಿಜಿಟಲ್ ಇನ್ಸ್ಟ್ರುಮೆಂಟ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಹೊಂದಿದೆ.
ಸ್ಟ್ಯಾಂಡರ್ಡ್ 'ಒಬೆನ್ ರೋರ್' ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಕುರಿತಂತೆ ಹೇಳುವುದಾದರೆ, ಇದು ರೂ.1.50 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 4.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 187 ಕಿಲೋಮೀಟರ್‌ವರೆಗೆ ಓಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 3 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಬೈಕ್ ಎಲ್ಇಡಿ ಲೈಟಿಂಗ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರ ಬ್ಯಾಟರಿ ಪ್ಯಾಕ್ 2 ಗಂಟೆಗಳಲ್ಲಿ 0 ರಿಂದ 80% ಚಾರ್ಜ್ ಆಗುತ್ತದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಇಕೋ, ಸಿಟಿ ಮತ್ತು ಹ್ಯಾವೋಕ್ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ.
ಒಟ್ಟಾರೆ, ಬೆಂಗಳೂರಿನ ಒಬೆನ್ ಎಲೆಕ್ಟ್ರಿಕ್ ಮಾರಾಟಕ್ಕೆ ತಂದಿರುವ ನೂತನ 'ರೋರ್ ಇಝಡ್' ಇ-ಬೈಕ್ ಸಾಕಷ್ಟು ಅತ್ಯಾಧುನಿಕವಾಗಿದೆ. ಅದರಲ್ಲೂ ನಗರ ಸಂಚಾರಕ್ಕೆ ಹೆಚ್ಚು ಸೂಕ್ತವಾಗಿದ್ದು, ಬಹುತೇಕ ಯುವ ಜನರ ಆದ್ಯತೆಯ ದ್ವಿಚಕ್ರ ವಾಹನವಾಗಿ ಹೊರಹೊಮ್ಮುವುದರಲ್ಲಿ ಎರಡು ಮಾತಿಲ್ಲ. ಮುಂಬರುವ ದಿನಗಳಲ್ಲಿ ಈ ಎಲೆಕ್ಟ್ರಿಕ್ ಬೈಕ್‌ಗೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








