ದುಡಿಯುವವರಿಗೆ ಖುಷಿ ಸುದ್ದಿ: ಬೆಂಗಳೂರಿನಲ್ಲಿ ಓಲಾ ಎಲೆಕ್ಟ್ರಿಕ್ ಆಟೋ ಮೊದಲ ಬಾರಿಗೆ ಕಾಣಿಸಿತು.. ಹೇಗಿದೆ?
ಬೆಂಗಳೂರು (Bengaluru) ಮೂಲದ ಓಲಾ ಎಲೆಕ್ಟ್ರಿಕ್ (Ola Electric), ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಹಲವು 'ಎಸ್1' ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಆಗಸ್ಟ್ 15ರಂದು ಹೊಸ ರೋಡ್‌ಸ್ಟರ್ (Roadster) ಎಲೆಕ್ಟ್ರಿಕ್ ಬೈಕ್‌ನ್ನು ಬಿಡುಗಡೆಗೊಳಿಸಿತ್ತು. ಈ ಮೂಲಕ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ವಿಭಾಗವನ್ನು ಪ್ರವೇಶಿಸಿತ್ತು. ಸದ್ಯ ದುಡಿಯುವ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂರು ಚಕ್ರದ ಎಲೆಕ್ಟ್ರಿಕ್ ವಾಹನ (Three Wheeler Electric Vehicle) ವಿಭಾಗಕ್ಕೆ ಬರಲು ತೆರೆಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಂಬರುವ ಓಲಾ ಎಲೆಕ್ಟ್ರಿಕ್ ಆಟೋರಿಕ್ಷಾ ಮೊದಲ ಬಾರಿಗೆ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಆ ಫೋಟೋಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ಅದರಲ್ಲಿ ನೂತನ ಎಲೆಕ್ಟ್ರಿಕ್ ಆಟೋರಿಕ್ಷಾ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು, ಆಕರ್ಷಕವಾಗಿರುವ ಡಿಆರ್‌ಎಲ್‌ಗಳು ಮತ್ತು ಸಿಂಗಲ್ ಬ್ಲೇಡ್ ವಿಂಡ್‌ಶೀಲ್ಡ್ ವೈಪರ್ ಹೊಂದಿರುವುದನ್ನು ಗುರುತಿಸಬಹುದು.

ಈ ಎಲೆಕ್ಟ್ರಿಕ್ ಆಟೋರಿಕ್ಷಾ ಓಲಾ ರಾಹಿ (Ola Raahi) ಎಂಬ ಹೆಸರನ್ನು ಹೊಂದಿರಲಿದೆ ಎನ್ನಲಾಗಿದೆ. 2023ರಲ್ಲಿ ಕಂಪನಿಯು ಪ್ಯಾಸೆಂಜರ್ (ಪ್ರಯಾಣಿಕ) ಹಾಗೂ ಕಾರ್ಗೋ (ಸರಕು ಸಾಗಾಣಿಕೆ) ಎಲೆಕ್ಟ್ರಿಕ್ ಆಟೋರಿಕ್ಷಾ ತಯಾರಿಸುವ ವಿನ್ಯಾಸ (ಡಿಸೈನ್) ಸಂಬಂಧ ಪೇಟೆಂಟ್‌ನ್ನು ಪಡೆದಿತ್ತು. ಹೊಸ ಎಲೆಕ್ಟ್ರಿಕ್ ಆಟೋರಿಕ್ಷಾ ತೆಗೆಯಬಹುದಾದ ಬ್ಯಾಟರಿ ಪ್ಯಾಕ್ (Removable Battery Pack) ಒಳಗೊಂಡಿರುವ ನಿರೀಕ್ಷೆಯಿದೆ.
ನೂತನ ಎಲೆಕ್ಟ್ರಿಕ್ ಆಟೋರಿಕ್ಷಾದ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ (ಫೀಚರ್) ಬಗ್ಗೆ ಓಲಾ ಕಂಪನಿ ಯಾವುದೇ ಅಧಿಕೃತ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಎಲೆಕ್ಟ್ರಿಕ್ ಆಟೋರಿಕ್ಷಾ ಬಹುತೇಕ ಉತ್ಪಾದನೆಗೆ ಸಿದ್ದವಾಗಿದೆ. ಈ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.

ಆಗಸ್ಟ್ 15ರಂದು ಪರಿಚಯಿಸಲಾದ ಓಲಾದ ಮೊದಲ ಎಲೆಕ್ಟ್ರಿಕ್ ಬೈಕ್ ರೋಡ್‌ಸ್ಟರ್ (Roadster) ಕುರಿತಂತೆ ಹೇಳುವುದಾದರೆ, ಇದು 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ಓಲಾ ರೋಡ್‌ಸ್ಟರ್ ಎಕ್ಸ್ ರೂಪಾಂತರವು 2.5 ಕೆಡಬ್ಲ್ಯೂಹೆಚ್, 3.5 ಕೆಡಬ್ಲ್ಯೂಹೆಚ್ ಮತ್ತು 4.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ರೂ.74,999 ದಿಂದ ರೂ.99,999 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.
ಓಲಾ ರೋಡ್‌ಸ್ಟರ್ ರೂಪಾಂತರದ 3.5 ಕೆಡಬ್ಲ್ಯೂಹೆಚ್, 4.5 ಕೆಡಬ್ಲ್ಯೂಹೆಚ್ ಮತ್ತು 6 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ರೂ.1,04,999 ದಿಂದ ರೂ.1,39,999 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 248 ಕಿಲೋಮೀಟರ್‌ವರೆಗೆ ಓಡುತ್ತದೆ. ಹೈಪರ್, ಸ್ಪೋರ್ಟ್ಸ್, ನಾರ್ಮಲ್ ಮತ್ತು ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.
ಓಲಾ ರೋಡ್‌ಸ್ಟರ್ ಪ್ರೊ ರೂಪಾಂತರ 8 ಕೆಡಬ್ಲ್ಯೂಹೆಚ್ ಹಾಗೂ 16 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ರೂ.1,99,999 ದಿಂದ ರೂ.2,49,999 ಎಕ್ಸ್ ಶೋರೂಂ ದರವನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 579 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.10-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: ET Auto


Click it and Unblock the Notifications








