ಸಿದ್ಧರಾಗಿ.. 8 - 10 ದಿನದಲ್ಲಿ 3 ನೂತನ ಕಾರುಗಳು ಬಿಡುಗಡೆ: ಫ್ಯಾಮಿಲಿ ಕರ್ಕೊಂಡು ಉಡುಪಿ.. ಗೋಕರ್ಣಕ್ಕೆ ಹೋಗಬಹುದು!

ಭಾರತದ ಕಾರು ಮಾರುಕಟ್ಟೆ ದಿನದಿಂದ ದಿನಕ್ಕೆ ವಿಸ್ತರಣೆಗೊಳ್ಳುತ್ತಿದ್ದು, ಪ್ರತಿ ತಿಂಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳು ಬಿಡುಗಡೆಯಾಗುತ್ತಿರುತ್ತವೆ. ಕೆಲವೇ ದಿನಗಳಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬ ಬರಲಿದೆ.. ಜನಪ್ರಿಯ ವಾಹನ ತಯಾರಕ ಕಂಪನಿಗಳಾದ ನಿಸ್ಸಾನ್ (Nissan), ಕಿಯಾ (Kia) ಹಾಗೂ ಬಿವೈಡಿ (BYD) ತಲಾ ಒಂದೊಂದು ನೂತನ ಕಾರುಗಳನ್ನು ಮಾರಾಟಕ್ಕೆ ತರಲಿವೆ. ಹೊಚ್ಚ ಹೊಸ ಕಾರುಗಳ ಆಗಮನಕ್ಕಾಗಿ ಗ್ರಾಹಕರು ಕೂಡ ತುದಿಗಾಲಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ.

ಕಿಯಾ ಕಾರ್ನಿವಲ್: ಮೊದಲಿಗೆ ಅಕ್ಟೋಬರ್ 3ಕ್ಕೆ ಅದ್ದೂರಿಯಾಗಿ ಪರಿಚಯಿಸಲಾಗುತ್ತಿರುವ ನವೀಕರಿಸಿದ ಕಿಯಾ ಕಾರ್ನಿವಲ್ (Kia Carnival Facelift) ಎಂಪಿವಿ ಬಗ್ಗೆ ಮಾತನಾಡೋಣ. ಈ ಕಾರು ಸಾಕಷ್ಟು ಅತ್ಯಾಧುನಿಕವಾಗಿದ್ದು, ಈಗಾಗಲೇ ಬುಕ್ಕಿಂಗ್ ಪ್ರಾರಂಭವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಸಹ ಆರ್ಡರ್ ಮಾಡುತ್ತಿದ್ದಾರೆ. ನೂತನ ಕಾರ್ನಿವಲ್ ಎಂಪಿವಿ ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಸಿಗುವ ಸಾಧ್ಯತೆಯಿದೆ.

Passenger Friendly 3 Cars Launch October Kia Carnival Facelift Nissan Magnite Facelift BYD eMAX 7

ಈ ಕಿಯಾ ಕಾರ್ನಿವಲ್ ಕಾರು, 7 ಅಥವಾ 9 ಆಸನಗಳನ್ನು ಒಳಗೊಂಡಿರಲಿದೆ. ರೂ.45 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 12.3-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್ ಮತ್ತು 8 ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್: ಹಲವು ಹೊಸತನಗಳಿಗೆ ಸಾಕ್ಷಿಯಾಗಿರುವ ನವೀಕರಿಸಿರುವ ನಿಸ್ಸಾನ್ ಮ್ಯಾಗ್ನೈಟ್ (Nissan Magnite Facelift) ಎಸ್‌ಯುವಿ ಸಹ ಅಕ್ಟೋಬರ್ 4ರಂದು ಮಾರಾಟಕ್ಕೆ ಬರಲಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಈ ಕಾರು, ಸರಿ ಸುಮಾರು ರೂ.6.50 ಲಕ್ಷ ಆರಂಭಿಕ ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

Passenger Friendly 3 Cars Launch October Kia Carnival Facelift Nissan Magnite Facelift BYD eMAX 7

ನೂತನ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್, 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದರೊಟ್ಟಿಗೆ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಸಿಂಗಲ್-ಪೇನ್ ಸನ್‌ರೂಫ್‌ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿರುವ ನಿರೀಕ್ಷೆಯೂ ಇದೆ.

ಬಿವೈಡಿ ಇಮ್ಯಾಕ್ಸ್ 7: ಚೀನಾ ಮೂಲದ ಪ್ರಖ್ಯಾತ ವಾಹನ ತಯಾರಕ ಕಂಪನಿ ಬಿವೈಡಿ, ಹೊಚ್ಚ ಹೊಸ 'ಇಮ್ಯಾಕ್ಸ್ 7' ಎಲೆಕ್ಟ್ರಿಕ್ ಎಂಪಿವಿಯನ್ನು ಅಕ್ಟೋಬರ್ 8ಕ್ಕೆ ಬಿಡುಗಡೆಗೊಳಿಸಲಿದೆ. ಸೆಪ್ಟೆಂಬರ್ 21ರಿಂದಲೇ ಬುಕ್ಕಿಂಗ್ ಶುರುವಾಗಿದೆ. ನೂತನ ಎಂಪಿವಿ 6/ 7 ಆಸನ ವ್ಯವಸ್ಥೆಯನ್ನು ಹೊಂದಿರಲಿದ್ದು, ರೂ.25 ಲಕ್ಷದಿಂದ ರೂ.33 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

Passenger Friendly 3 Cars Launch October Kia Carnival Facelift Nissan Magnite Facelift BYD eMAX 7

ಈ ಬಿವೈಡಿ ಇಮ್ಯಾಕ್ಸ್ 7 (BYD eMAX 7) ಎಲೆಕ್ಟ್ರಿಕ್ ಎಂಪಿವಿ, 71.8 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 530 ಕಿಲೋಮೀಟರ್‌ವರೆಗೆ ಓಡುತ್ತದೆ ಎಂದು ಹೇಳಲಾಗಿದೆ. 12.8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 3-ಸ್ಪೋಕ್ ಸ್ಟೀರಿಂಗ್ ವೀಲ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, September 26, 2024, 10:51 [IST]
English summary
Passenger friendly 3 cars launch october kia carnival facelift nissan magnite facelift byd emax 7
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+