Alto: ಬಡವರು ಕಾರು ತೆಗೆದುಕೊಳ್ಳಬಹುದು.. ಮಾರುತಿ ಸುಜುಕಿ ಆಲ್ಟೊಗೆ ಭಾರೀ ರಿಯಾಯಿತಿ, 4 ಲಕ್ಷ ಬೆಲೆ, 33 Km ಮೈಲೇಜ್
ಮಾರುತಿ ಸುಜುಕಿ (Maruti Suzuki), ಈ ಜನವರಿ (2024) ತಿಂಗಳು ವಿವಿಧ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಇದು ನಗದು ರಿಯಾಯಿತಿ, ವಿನಿಮಯ ಬೋನಸ್ ಸೇರಿದಂತೆ ವಿವಿಧ ಡಿಸ್ಕೌಂಟ್ ಆಫರ್ ಅನ್ನು ಹೊಂದಿದ್ದು, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಆಲ್ಟೊ ಹ್ಯಾಚ್‌ಬ್ಯಾಕ್ ಒಳಗೊಂಡಿರುವ ರಿಯಾಯಿತಿ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಮಾರುತಿ ಸುಜುಕಿ ಆಲ್ಟೊ (Maruti Suzuki Alto) ಕಾರು ಒಟ್ಟು 45,000 ವರೆಗೆ ಡಿಸ್ಕೌಂಟ್ ಆಫರ್ ಪಡೆದಿದ್ದು, 2023ರ ಮಾದರಿಗಳು ರೂ.30,000 ನಗದು ರಿಯಾಯಿತಿ (Cash discount), ರೂ.15,000 ವಿನಿಮಯ ಬೋನಸ್ (Exchange bonus) ಅನ್ನು ಹೊಂದಿವೆ. 2024ರ ಮಾದರಿಗಳು ರೂ.23,000 ಕ್ಯಾಶ್ ಡಿಸ್ಕೌಂಟ್, ರೂ.15,000 ವಿನಿಮಯ ಬೋನಸ್ ಅನ್ನು ಒಳಗೊಂಡಿವೆ.

ಈ ರಿಯಾಯಿತಿ ಪ್ರಯೋಜನಗಳು ಗ್ರಾಹಕರಿಗೆ ಜನವರಿ 31, 2024 ರವರೆಗೆ ಮಾತ್ರ ಲಭ್ಯವಿರಲಿದೆ. ಆದರೆ, ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ರೂಪಾಂತರ, ಬಣ್ಣ ಹಾಗೂ ಸ್ಟಾಕ್ ಲಭ್ಯತೆ ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂ ಸಂಪರ್ಕಿಸಿರಿ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಆಲ್ಟೊ ಕೆ10, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಈ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ ಪ್ಲಸ್ ಸೇರಿದಂತೆ 4 ರೂಪಾಂತರ, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ ಒಳಗೊಂಡಂತೆ 7 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಆಲ್ಟೊ ಕೆ10 ವಿನ್ಯಾಸ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 4 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೈನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1 - ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ 67 PS ಗರಿಷ್ಠ ಪವರ್, 89 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಎಎಂಟಿ (ಆಟೋಮೆಟಿಕ್) ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.
ಸಿಎನ್‌ಜಿ ಕಾರು ಸಹ ಇದೇ ಎಂಜಿನ್ ಒಳಗೊಂಡಿದೆ. ಆದರೆ, 57 PS ಪವರ್, 82 Nm ಪೀಕ್ ಟಾರ್ಕ್ ಮಾತ್ರ ಉತ್ಪಾದಿಸುತ್ತದೆ. ಕೇವಲ 5 - ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ರೂಪಾಂತರಗಳು 24.39 kmpl - 24.90 kmpl, ಸಿಎನ್‌ಜಿ ರೂಪಾಂತರಗಳು 33.40 km/kg - 33.85 km/kg ಇಂಧನ ದಕ್ಷತೆಯನ್ನು ಹೊಂದಿವೆ.
ಈ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ - ಮೌಂಟೆಡ್ ಕಂಟ್ರೋಲ್, ಐಡಲ್ ಸ್ಟಾರ್ಟ್/ ಸ್ಟಾಪ್ ಬಟನ್ ಪಡೆದಿದೆ. ಜೊತೆಗೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಒಳಗೊಂಡಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಸುರಕ್ಷತೆಯ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರಿವರ್ಸಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಈ ಕಾರಿಗೆ ರೆನಾಲ್ಟ್ ಕ್ವಿಡ್ (Renault Kwid) ಪ್ರಬಲ ಪ್ರತಿಸ್ಪರ್ಧಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications