ಉತ್ತಮ ಮೈಲೇಜ್: ವಿಶಾಲ ಗಾತ್ರದ ಜನಪ್ರಿಯ ಕಂಪನಿಯ 'ಡೀಸೆಲ್' ಕಾರುಗಳಿವು.. 2 ಕುಟುಂಬ ಪ್ರಯಾಣಿಸಬಹುದು!
ಭಾರತದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಎಲೆಕ್ಟ್ರಿಕ್ ಚಾಲಿತ ಕಾರುಗಳು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಅವುಗಳಿಗೆ ಹೋಲಿಕೆ ಮಾಡಿದರೆ, ಉತ್ತಮವಾದ ಕಾರ್ಯಕ್ಷಮತೆ ಹೊಂದಿರುವ ಹೊರತಾಗಿಯೂ ಡೀಸೆಲ್ (Diesel) ಕಾರುಗಳನ್ನು ಖರೀದಿ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಆದರೂ, ತುಂಬು ಕುಟುಂಬ ಪ್ರಯಾಣಿಸಬಹುದಾದ ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta), ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಮತ್ತು ಟಾಟಾ ಸಫಾರಿ (Tata Safari) ಕಾರುಗಳನ್ನು ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಬನ್ನಿ.. ಈ ಕಾರುಗಳ ವಿಶೇಷತೆ ಕುರಿತಂತೆ ಒಂದಷ್ಟು ವಿವರ ತಿಳಿಯೋಣ.
ಮೊದಲಿಗೆ ಟೊಯೊಟಾ ಇನ್ನೋವಾ ಕ್ರಿಸ್ಟಾ ಬಗ್ಗೆ ಮಾತನಾಡೋಣ. ಇದೊಂದು ಎಂಪಿವಿಯಾಗಿದ್ದು, ರೂ.19.99 ರಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಜಿಎಕ್ಸ್ & ವಿಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಇನ್ನೋವಾ ಕ್ರಿಸ್ಟಾ ಎಂಪಿವಿ 2.4-ಲೀಟರ್ ಡಿಸೇಲ್ ಎಂಜಿನ್‌ನ್ನು ಹೊಂದಿದೆ. ಇದು 150 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, 13.99 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ಈ ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರು, 7 ಹಾಗೂ 8 ಆಸನದೊಂದಿಗೂ ಸಿಗುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಕುರಿತಂತೆ ಹೇಳುವುದಾದರೆ, ಈ ಎಸ್‌ಯುವಿ ರೂ.13.62 ರಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 132 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಹೊಸ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ, 14.44 ಕೆಎಂಪಿಎಲ್‌ವರೆಗೂ ಮೈಲೇಜ್ ಕೂಡ ಕೊಡುತ್ತದೆ. ಜೊತೆಗೆ 7 ಆಸನದೊಂದಿಗೂ ಲಭ್ಯವಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ - ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟಾಟಾ ಸಫಾರಿ ಸಹ ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ರೂ.15.49 ರಿಂದ ರೂ.26.79 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಈ ಸಫಾರಿ ಕಾರು, 6, 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 16.3 ಕೆಎಂಪಿಎಲ್‌ವರೆಗೂ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications