Renault: ರೆನಾಲ್ಟ್ ಕಾರುಗಳಿಗೆ ಭಾರೀ ರಿಯಾಯಿತಿ, ಮತ್ತೆ ಸಿಗುವುದಿಲ್ಲ.. ರೂ.4.70 ಲಕ್ಷ ಆರಂಭಿಕ ಬೆಲೆ

ದೇಶದಲ್ಲಿ ರೆನಾಲ್ಟ್ ಇಂಡಿಯಾ (Renault India) ಕೈಗೆಟುಕುವ ಬೆಲೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ. ಈ ಮಾರ್ಚ್‌ ತಿಂಗಳು ಸಹ ವಿವಿಧ ಮಾದರಿಗಳ ಮೇಲೆ ಬರೋಬ್ಬರಿ ರೂ.40,000 ರಿಯಾಯಿತಿಯನ್ನು ಘೋಷಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ರೆನಾಲ್ಟ್ ಕಿಗರ್ (Renault Kiger) ಪಡೆದಿರುವ ಡಿಸ್ಕೌಂಟ್ ಆಫರ್ ಕುರಿತು ಮಾತನಾಡೋಣ. ಈ ಕಾರಿಗೆ ಗರಿಷ್ಠ ರಿಯಾಯಿತಿಯನ್ನು ನೀಡಲಾಗಿದ್ದು, ಒಟ್ಟು ರೂ.40,000 ಡಿಸ್ಕೌಂಟ್ ಪಡೆದಿದೆ. ಅದರಲ್ಲಿ ರೂ.15,000 ನಗದು ರಿಯಾಯಿತಿ (Cash Discount) ರೂ.10,000 ಲಾಯಲ್ಟಿ ಬೋನಸ್ (Loyalty Bonus) ಮತ್ತು ರೂ.15,000 ವಿನಿಮಯ ಬೋನಸ್ (Exchange Bonus) ಸೇರಿದೆ.

Renault Cars Get Upto Rs 40 000 Discount In March 2024 Rs 4 70 Lakh Starting Price

ಭಾರತದ ಮಾರುಕಟ್ಟೆಯಲ್ಲಿ ರೆನಾಲ್ಟ್ ಕಿಗರ್ ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಪೆಟ್ರೋಲ್ ಎಂಜಿನ್ ಹೊಂದಿರುವ ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. 18.24 ರಿಂದ 20.5 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರೆನಾಲ್ಟ್ ಟ್ರೈಬರ್ (Renault Triber) ಕಾರು ಒಟ್ಟು ರೂ.35,000 ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಇದರಲ್ಲಿ ರೂ.10,000 ನಗದು ರಿಯಾಯಿತಿ, ರೂ.15,000 ವಿನಿಮಯ ಬೋನಸ್ ರೂ.10,000 ಲಾಯಲ್ಟಿ ಬೋನಸ್ ಅನ್ನು ಒಳಗೊಂಡಿದೆ. ಈ ಟ್ರೈಬರ್ ರೂ.6 ಲಕ್ಷದಿಂದ ರೂ.8.97 ಲಕ್ಷ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಜೊತೆಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ.

Renault Cars Get Upto Rs 40 000 Discount In March 2024 Rs 4 70 Lakh Starting Price

ಮೈಲೇಜ್ ವಿಚಾರಕ್ಕೆ ಬರುವುದಾದರೆ ರೆನಾಲ್ಟ್ ಟ್ರೈಬರ್ 18.2 ರಿಂದ 20 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4 ಏರ್ ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್)ಗಳನ್ನು ಒಳಗೊಂಡಿದೆ.

ರೆನಾಲ್ಟ್ ಕ್ವಿಡ್ (Renault Kwid) ಕೂಡ ಭರ್ಜರಿ ಡಿಸ್ಕೌಂಟ್ ಆಫರ್ ಪಡೆದಿದೆ. ಒಟ್ಟು ರೂ.35,000 ರಿಯಾಯಿತಿಯನ್ನು ಹೊಂದಿದೆ. ಅದರಲ್ಲಿ ರೂ.10,000 ನಗದು ರಿಯಾಯಿತಿ, ರೂ.15,000 ವಿನಿಮಯ ಬೋನಸ್ ಹಾಗೂ ರೂ.10,000 ಲಾಯಲ್ಟಿ ಬೋನಸ್ ಸೇರ್ಪಡೆಯಾಗಿದೆ. ಈ ಕಾರು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

Renault Cars Get Upto Rs 40 000 Discount In March 2024 Rs 4 70 Lakh Starting Price

ಈ ರೆನಾಲ್ಟ್ ಕ್ವಿಡ್, 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 21.46 ರಿಂದ 22.3 ಕೆಎಂ ಮೈಲೇಜ್ ಕೊಡುತ್ತದೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ಮಾರ್ಚ್ 31, 2024ರವರೆಗೆ ಮಾನ್ಯವಾಗಿರುತ್ತವೆ. ಆದರೂ ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ, ಬಣ್ಣಗಳನ್ನು ಆಧರಿಸಿ ಡಿಸ್ಕೌಂಟ್ ಆಫರ್ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, March 13, 2024, 9:49 [IST]
English summary
Renault cars get upto rs 40000 discount in march 2024 rs 4 70 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+